ಬೆಂಗಳೂರು: ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಅಧಿಕಾರಿಗಳು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಬುಲಾವ್ ನೀಡಿದ್ದಾರೆ.
ಸೋಮವಾರ ಬೆಳ್ಳಂಬೆಳಗ್ಗೆ ಸಿಬಿಐ ಅಧಿಕಾರಿಗಳು ಡಿಕೆ ಬ್ರದರ್ಸ್ ಗೆ ಶಾಕ್ ನೀಡಿದ್ದರು. ಏಕಕಾಲದಲ್ಲಿ 14 ಕಡೆ ಸುಮಾರು 60ಕ್ಕೂ ಹೆಚ್ಚು ಮಂದಿ ಅಧಿಕಾರಿಗಳು ದಾಳಿ ನಡೆಸಿದ್ದರು. ದಾಳಿಯ ವೇಳೆ 57 ಲಕ್ಷ ಹಣ ಹಾಗೂ ಕೆಲವೊಂದು ಮಹತ್ವದ ದಾಖಲೆಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದರು.
ನಿನ್ನೆ ದಾಳಿ ಮುಕ್ತಾಯವಾದ ಬಳಿಕ ಅಧಿಕಾರಿಗಳು ಸಮನ್ಸ್ ನೀಡಿದ್ದಾರೆ. ಇನ್ನೆರಡು ದಿನಗಳಲ್ಲಿ ವಿಚಾರಣೆಗೆ ಹಾಜರಾಗುವಂತೆ ತಿಳಿಸಲಾಗಿದೆ. ಹೀಗಾಗಿ ಕನಕಪುರ ಬಂಡೆ ಇಂದು ಬೆಳಗ್ಗೆ 11 ಗಂಟೆಗೆ ಡಿಕೆಶಿ ವಿಚಾರಣೆಗೆ ಹಾಜರಾಗುವ ಸಾಧ್ಯೆತಗಳು ಕೂಡ ಹೆಚ್ಚಾಗಿದೆ. ಒಟ್ಟಿನಲ್ಲಿ ಅಕ್ರಮ ಆಸ್ತಿ ಬಗ್ಗೆ ಲೆಕ್ಕ ಕೊಡದಿದ್ರೆ ಡಿಕೆಶಿ ಅರೆಸ್ಟ್ ಆಗ್ತಾರಾ ಎಂಬುದನ್ನು ಕಾದುನೋಡಬೇಕಿದೆ.