ಬೆಂಗಳೂರು: ಸ್ಯಾಂಡಲ್‍ವುಡ್‍ನಲ್ಲಿ ಬಿರುಗಾಳಿಯನ್ನೇ ಸೃಷ್ಟಿಸಿರುವ ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ನಟಿ ಐಂದ್ರಿತಾ ರೇ, ನಟ ದಿಗಂತ್ ಸಿಸಿಬಿ ಎದುರು ಮೊದಲ ದಿನದ ಪ್ರಾಥಮಿಕ ವಿಚಾರಣೆಯನ್ನು ಪೂರ್ಣಗೊಳಿಸಿದ್ದಾರೆ. ಇದರ ಬೆನಲ್ಲೇ ಸ್ಟಾರ್ ದಂಪತಿಗೆ ಬಿಗ್ ಶಾಕ್ ಎದುರಾಗಿದೆ.
Advertisement
ಇಂದು ಬೆಳಗ್ಗೆ ಐಂದ್ರಿಯಾ ಹಾಗೂ ದಿಗಂತ್ ಸಿಸಿಬಿ ಕಚೇರಿಗೆ ಆಗಮಿಸಿದ್ದರು. ಅವರು ಕಚೇರಿಗೆ ಆಗಮಿಸುತ್ತಿದ್ದಂತೆ ಸಿಸಿಬಿ ಪೊಲೀಸರು ಅವರ ಬಳಿ ಇದ್ದ ಮೊಬೈಲ್‍ಗಳನ್ನು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಸದ್ಯ ವಶಕ್ಕೆ ಪಡೆದಿರುವ ಮೊಬೈಲ್‍ಗಳಲ್ಲಿ ಹೆಚ್ಚಿನ ಮಾಹಿತಿಯನ್ನು ಸಂಗ್ರಹಿಸಲು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ(ಎಫ್‍ಎಸ್‍ಎಲ್) ಕಳುಹಿಸಿಕೊಡಲಿದ್ದಾರೆ ಎನ್ನಲಾಗಿದೆ. ದಿಗಂತ್ ಬಳಿ ಇದ್ದ ಎರಡು ಮೊಬೈಲ್ ಹಾಗೂ ಐಂದ್ರಿತಾ ಬಳಿ ಇದ್ದ ಒಂದು ಮೊಬೈಲನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪ್ರಕರಣದ ವಿಚಾರಣೆ ಪೂರ್ಣಗೊಂಡ ಬಳಿಕ ಮೊಬೈಲ್ ಹಿಂದಿರುಗಿಸುವ ಸಾಧ್ಯತೆ ಇದೆ.
Advertisement
Advertisement
ವಿಚಾರಣೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ದಿಗಂತ್ ಹಾಗೂ ಐಂದ್ರಿತಾ, ಪ್ರಕರಣದ ವಿಚಾರಣೆ ನಡೆಯುತ್ತಿದೆ. ನಾವು ಕೂಡ ಪೊಲೀಸರ ವಿಚಾರಣೆಗೆ ಸಹಕಾರ ನೀಡುತ್ತೇವೆ. ಮತ್ತೆ ವಿಚಾರಣೆಗೆ ಕರೆದರೆ ಬರುತ್ತೇವೆ. ತನಿಖೆ ಕುರಿತು ಬೇರೆ ಯಾವುದೇ ಮಾಹಿತಿಯನ್ನು ಹೇಳಬಾರದು ಎಂದು ಸಿಸಿಬಿ ಅವರು ಹೇಳಿದ್ದಾರೆ ಎಂದು ತಿಳಿಸಿದರು. ಸುಮಾರು 4 ಗಂಟೆಗಳ ಕಾಲ ವಿಚಾರಣೆ ಎದುರಿಸಿದ ಸ್ಟಾರ್ ದಂಪತಿಗೆ ಮೊಬೈಲ್ ಸಾಕ್ಷ್ಯವೇ ಕಂಟಕವಾಗುತ್ತಾ ಎಂಬ ಅನುಮಾನ ಮೂಡಿದೆ. ಇದನ್ನೂ ಓದಿ: ಸ್ಟಾರ್ ದಂಪತಿ ದಿಗಂತ್, ಐಂದ್ರಿತಾ ರೇಗೆ ಬಿಗ್ ರಿಲೀಫ್
Advertisement
ಸಿಸಿಬಿ ಪೊಲೀಸರು ಅಂತಾರಾಷ್ಟ್ರೀಯ ಡ್ರಗ್ಸ್ ಪೆಡ್ಲರ್, ಆಫ್ರಿಕಾ ಮೂಲದ ಬೆನಾಲ್ಡ್ ಉಡೇನ್ ಎಂಬಾತನನ್ನು ನಿನ್ನೆಯೇ ಬಂಧಿಸಿದ್ದರು. ಈತ ನಗರದಲ್ಲಿ ನಡೆಯುತ್ತಿದ್ದ ದೊಡ್ಡ ದೊಡ್ಡ ಪಾರ್ಟಿಗಳಿಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ. ಆರೋಪಿ ನೀಡಿದ ಮಾಹಿತಿ ಮೇರೆಗೆ ಪೊಲೀಸರು ದಿಗಂತ್ ಹಾಗೂ ಐಂದ್ರಿತಾ ಅವರಿಗೆ ನೋಟಿಸ್ ನೀಡಿದ್ದರು ಎನ್ನಲಾಗಿದೆ. ಸದ್ಯ ದಂಪತಿಯಿಂದ ವಶಕ್ಕೆ ಪಡೆದಿರುವ ಮೊಬೈಲ್‍ಗಳಲ್ಲಿ ಡ್ರಗ್ಸ್ ಪಾರ್ಟಿಯಲ್ಲಿ ಭಾಗಿಯಾಗಿರುವ, ಸೇವನೆ ಮಾಡಿರುವ ಕುರಿತ ತಾಂತ್ರಿಕ ಮಾಹಿತಿಗಳನ್ನು ಕಲೆ ಹಾಕುವ ಉದ್ದೇಶವನ್ನು ಹೊಂದಿದ್ದಾರೆ.