ಶಿವಮೊಗ್ಗ: ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಕೆಲವು ಮಾಧ್ಯಮಗಳು ವೈಭವೀಕರಿಸುವ ಪ್ರಯತ್ನ ನಡೆಸುತ್ತಿವೆ. ಇದಕ್ಕೆ ನನ್ನ ಅಭ್ಯಂತರವಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.
ಶಿವಮೊಗ್ಗದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು ಶಿರಾ ಉಪ ಚುನಾವಣೆಯಲ್ಲಿ ವಿಜಯೇಂದ್ರ ಅವರ ಪ್ರಯತ್ನದಿಂದ ಗೆಲುವು ಸಾಧ್ಯವಾಯಿತು ಎಂದು ಕೆಲವು ಮಾಧ್ಯಮಗಳಲ್ಲಿ ವೈಭವೀಕರಿಸುವ ಪ್ರಯತ್ನ ನಡೆಯಿತು. ಬಿಜೆಪಿ ಯಾವುದೇ ಒಬ್ಬ ವ್ಯಕ್ತಿಯ ಪ್ರಯತ್ನದಿಂದ ಚುನಾವಣೆ ಗೆಲ್ಲಲ್ಲ. ಸಂಘಟನೆಯ ಪ್ರಯತ್ನದಿಂದ ಚುನಾವಣೆಯಲ್ಲಿ ಗೆಲುವು ಸಾಧ್ಯವಾಯಿತು ಎಂದು ಹೇಳಿದ್ದಾರೆ.
Advertisement
Advertisement
ಉಪ ಚುನಾವಣೆಯಲ್ಲಿ ಕ್ಷೇತ್ರಕ್ಕೆ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಸುರೇಶಗೌಡ, ಬಿ.ವೈ.ವಿಜಯೇಂದ್ರ ಸೇರಿದಂತೆ ನಾಲ್ಕು ಪ್ರಮುಖರನ್ನು ನೇಮಕ ಮಾಡಿದ್ದೇವು. ಎಲ್ಲರೂ ಅಲ್ಲಿಯೇ ಬೀಡು ಬಿಟ್ಟು ಕೆಲಸ ಮಾಡಿದರು. ಹೀಗಾಗಿ ಗೆಲುವು ಸಾಧ್ಯವಾಯ್ತು. ಅದೇ ರೀತಿ ಆರ್.ಆರ್ ನಗರದಲ್ಲಿ ಸಚಿವ ಆರ್ ಅಶೋಕ್, ಉಪ ಮುಖ್ಯಮಂತ್ರಿ ಡಾ. ಅಶ್ವತ್ಥ್ ನಾರಾಯಣ ಎಲ್ಲರೂ ಪ್ರಯತ್ನ ಮಾಡಿದರು. ಪರಿಷತ್‍ನಲ್ಲಿ ಸಹ ಅದೇ ಪ್ರಯತ್ನ ಮಾಡಿದೇವು. ಈಗಾಗಿಯೇ ಎಲ್ಲಾ ಚುನಾವಣೆಯಲ್ಲಿ ಗೆಲುವು ಸಾಧಿಸಲು ಸಾಧ್ಯವಾಯಿತು ಎಂದರು.
Advertisement
Advertisement
ಆದರೆ ವಿಜಯೇಂದ್ರನ ಪ್ರಯತ್ನ ಇಲ್ಲ ಅಂತಾ ಹೇಳಲ್ಲ. ಆದರೆ ಮಾಧ್ಯಮದವರು ವೈಭವೀಕರಿಸುತ್ತೀರಿ. ನಾವು ಏನು ಮಾಡುವುದಕ್ಕೆ ಆಗಲ್ಲ ಎಂದು ಸಚಿವ ಈಶ್ವರಪ್ಪ ತಿಳಿಸಿದರು.