ಜೈಪುರ: ಬಿಜೆಪಿಯ ವಿಜಯೋತ್ಸವದಲ್ಲಿ ನಡೆದ ಕೈ ಕಾರ್ಯಕರ್ತರ ಗಲಾಟೆಯಲ್ಲಿ ತಂದೆ-ಮಗ ಸಾವನ್ನಪ್ಪಿರುವ ಘಟನೆ ಜೈಪುರದ ಘತೇಪುರ ಪಟ್ಟಣದ ಬಲೋಡ್ ಬಡಿ ಗ್ರಾಮದಲ್ಲಿ ನಡೆದಿದೆ.
ರಾಜಸ್ಥಾನದಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ್ದ ಹಿನ್ನೆಲೆಯಲ್ಲಿ ನಡೆಯುತ್ತಿದ್ದ ವಿಜಯೋತ್ಸವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಗಲಾಟೆ ಮಾಡಿದ್ದಾರೆ. ಈ ವೇಳೆ ತಂದೆ ಮತ್ತು ಮಗ ಮೃತಪಟ್ಟಿರುವುದು ತಿಳಿದು ಬಂದಿದೆ.
Advertisement
Advertisement
Advertisement
ಮೃತರನ್ನು ಕನ್ಹನ್ಯಾಲಾಲ್(35) ಮತ್ತು ಇವರ ತಂದೆ ಪ್ಯಾರೆಲಾಲ್(57) ಎಂದು ಗುರುತಿಸಲಾಗಿದೆ. ಗಲಾಟೆಯಲ್ಲಿ ಗಾಯಗೊಂಡಿದ್ದ ತಂದೆ-ಮಗ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲು ಕರೆದುಕೊಂಡು ಹೋಗುವ ವೇಳೆ ಮಗ ಕನ್ಹನ್ಯಾಲಾಲ್ ಮಾರ್ಗ ಮಧ್ಯದಲ್ಲೇ ಮೃತಪಟ್ಟಿದ್ದಾರೆ. ಪ್ಯಾರೆಲಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುವ ವೇಳೆ ಸಾವನ್ನಪ್ಪಿದ್ದಾರೆ. ಈ ಗಲಾಟೆಯಲ್ಲಿ ಕನಿಷ್ಠ 10 ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ.
Advertisement
ಗಲಾಟೆಗೆ ಕಾರಣವೇನು?
ಪಂಚಾಯತ್ ಸಮಿತಿ ಫತೇಪುರ್ ವಾರ್ಡ್ ನಂ 19ರಲ್ಲಿ ಬಿಜೆಪಿ ಅಭ್ಯರ್ಥಿ ರುಬಿನಾ ಖಾನ್ ಜಯಗಳಿಸಿದ್ದಾರೆ. ಹೀಗಾಗಿ ಮೆರವಣಿಗೆ ನಡೆಸಿ ಸಂಭ್ರಮಿಸಿ ವಿಜಯೋತ್ಸವವನ್ನು ಬಿಜೆಪಿ ಆಚರಿಸುತ್ತಿತ್ತು. ಈ ವೇಳೆ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಯುವಕನನ್ನು ಯಾರೋ ಥಳಿಸಿದ್ದಾರೆ. ಇದರಿಂದಾಗಿ ಕಾಂಗ್ರೆಸ್ ಮತ್ತು ಬಿಜಿಪಿ ಕಾರ್ಯಕರ್ತರ ನಡುವೆ ಮಾರಾಮಾರಿಯಾಗಿದೆ. ಕೈಯಲ್ಲಿ ಕೋಲುಗಳನ್ನು ಹಿಡಿದು ಪರಸ್ಪರ ಘರ್ಷಣೆ ನಡೆಸಿದ್ದಾರೆ. ಕೆಲವರು ಮನೆಗೆ ಕಲ್ಲು ತೂರಾಟ ಮಾಡಿದ್ದಾರೆ. ಈ ವೇಳೆ ಪೊಲೀಸರು ಸ್ಥಳಕ್ಕೆ ಬಂದು ಪರಿಸ್ಥಿತಿ ನಿಂಯತ್ರಣಕ್ಕೆ ತಂದಿದ್ದಾರೆ. ಇದನ್ನು ಓದಿ:ರಾಜಸ್ಥಾನ ಪಂಚಾಯತ್ ಚುನಾವಣೆ – ಬಿಜೆಪಿಗೆ ಭರ್ಜರಿ ಜಯ, ಗೆಹ್ಲೋಟ್‌ಗೆ ಮುಖಭಂಗ
ಈ ಪ್ರಕರಣದಲ್ಲಿ ನಾವು ಈ ವರೆಗೆ 22 ಜನರನ್ನು ವಶಕ್ಕೆ ಪಡೆದುಕೊಂಡಿದ್ದೇವೆ. ಸಂಪೂರ್ಣ ವಿಷಯವನ್ನು ತನಿಖೆ ಮಾಡುತ್ತಿದ್ದೇವೆ. ಸಾಕ್ಷ್ಯಗಳನ್ನು ಸಂಗ್ರಹಿಸುತ್ತೇವೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಗಗನ್‍ದೀಪ್ ಸಿಂಕ್ಲಾ ಹೇಳಿದ್ದಾರೆ.