-ವಿಚಾರಣೆ ಆಗಸ್ಟ್ 20ಕ್ಕೆ ಮುಂದೂಡಿಕೆ
ನವದೆಹಲಿ: ಮದ್ಯದ ದೊರೆ ವಿಜಯ್ ಮಲ್ಯ ಪ್ರಕರಣಕ್ಕೆ ಸಂಬಂಧಿಸಿದ ಮಹತ್ವದ ದಾಖಲೆಯೊಂದು ಲಭ್ಯವಿಲ್ಲದ ಹಿನ್ನೆಲೆ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಆಗಸ್ಟ್ 20ಕ್ಕೆ ಮುಂದೂಡಿದೆ.
2017 ಜುಲೈ 14ರಂದು ನ್ಯಾಯಾಲಯ ನೀಡಿದ ತೀರ್ಪನ್ನು ಪ್ರಶ್ನಿಸಿ ವಿಜಯ್ ಮಲ್ಯ ಸಲ್ಲಿಸಿದ್ದ ಮೇಲ್ಮನವಿಯನ್ನು ಇಂದು ನ್ಯಾಯಮೂರ್ತಿಗಳಾದ ಯು.ಯು.ಲಲಿತ್ ಮತ್ತು ಅಶೋಕ್ ಭೂಷಣ್ ಅವರನ್ನೊಳಗೊಂಡ ದ್ವಿಸದಸ್ಯ ಪೀಠ ವಿಚಾರಣೆ ನಡೆಸಬೇಕಿತ್ತು. ದಾಖಲೆ ಲಭ್ಯವಿಲ್ಲದ ಹಿನ್ನೆಲೆ ದ್ವಿಸದಸ್ಯ ಪೀಠ ವಿಚಾರಣೆ ಮುಂದೂಡಿದೆ. ಬ್ಯಾಂಕುಗಳಿಗೆ ಸಾವಿರಾರು ಕೋಟಿ ರೂ. ವಂಚಿಸಿ ವಿದೇಶದಲ್ಲಿರುವ ವಿಜಯ್ ಮಲ್ಯ ತಪ್ಪಿತಸ್ಥ ಎಂದು ನ್ಯಾಯಾಲಯ ತೀರ್ಪು ನೀಡಿದೆ.
Advertisement
Advertisement
ವಿಜಯ್ ಮಲ್ಯ ನ್ಯಾಯಾಂಗ ಆದೇಶಗಳನ್ನು ಉಲ್ಲಂಘಿಸಿ ಅಂದಾಜು 299 ಕೋಟಿ ರೂಪಾಯಿ ಹಣವನ್ನು ಮಕ್ಕಳಿಗೆ ಅಕ್ರಮವಾಗಿ ವರ್ಗಾಯಿಸಿದ್ದಾರೆ ಎಂದು ವಿವಿಧ ಬ್ಯಾಂಕುಗಳು ದೂರು ಸಲ್ಲಿಸಿದ್ದವು. ಈ ಅರ್ಜಿಯ ವಿಚಾರಣೆಯ ನಡೆಸಿದ್ದ ನ್ಯಾಯಾಲತ ಮಲ್ಯ ತಪ್ಪಿತಸ್ಥ ಎಂದು ನ್ಯಾಯಾಲಯ ತೀರ್ಪು ನೀಡಿತ್ತು. ಈ ತೀರ್ಪು ವಿರುದ್ಧ ಮಲ್ಯ ಸಲ್ಲಿಸಿದ್ದ ಮೇಲ್ಮನವಿಯ ಅರ್ಜಿಯ ವಿಚಾರಣೆ ಮುಂದೂಡಲಾಗಿದೆ.
Advertisement