ಚೆನ್ನೈ: ಕಾಂಗ್ರೆಸ್ ಮಾಜಿ ಅಧ್ಯಕ್ಷ, ಸಂಸದ ರಾಹುಲ್ ಗಾಂಧಿ ವಿದ್ಯಾರ್ಥಿಗಳೊಂದಿಗೆ ವೇದಿಕೆಯಲ್ಲಿ ಡ್ಯಾನ್ಸ್ ಮಾಡುವ ಮೂಲಕ ಸಭೆಯಲ್ಲಿ ನೆರೆದಿದ್ದವರನ್ನು ರಂಜಿಸಿದ್ದಾರೆ.
ತಮಿಳುನಾಡಿನ ಸೇಂಟ್ ಜೋಸೆಫ್ ಹೈಯರ್ ಸೆಕೆಂಡರಿ ಸ್ಕೂಲ್ ಮುಲಾಗುಮುದಬ್ ನಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಭಾಗವಹಿಸಿದ್ದರು. ಈ ವೇಳೆ ವಿದ್ಯಾರ್ಥಿಗಳೊಂದಿಗೆ ವೇದಿಕೆಯಲ್ಲಿ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ರಾಹುಲ್ ಗಾಂಧಿಯವರಿಗೆ ಇತರ ಕಾಂಗ್ರೆಸ್ ನಾಯಕರು ಸಾಥ್ ಕೊಟ್ಟಿದ್ದಾರೆ.
#WATCH: Congress leader Rahul Gandhi dances with students of St. Joseph's Matriculation Hr. Sec. School in Mulagumoodubn, Tamil Nadu during an interaction with them pic.twitter.com/RaSDpuXTqQ
— ANI (@ANI) March 1, 2021
ಮುಂದಿನ ವಿಧಾನಸಭಾ ಚುನಾವಣೆಗಾಗಿ ಭರ್ಜರಿ ತಯಾರಿ ನಡೆಸುತ್ತಿರುವ ರಾಹುಲ್ ಗಾಂಧಿ ತಮಿಳುನಾಡು ಮತ್ತು ಕೇರಳ ರಾಜ್ಯಗಳಲ್ಲಿ ಸಭೆಗಳನ್ನು ನಡೆಸಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ಪ್ರಯತ್ನದಲ್ಲಿ ತೊಡಗಿದ್ದಾರೆ.
ಕೆಲ ದಿನಗಳ ಹಿಂದೆ ಕೇರಳದಲ್ಲಿ ಮೀನುಗಾರರೊಂದಿಗೆ ಸಮುದ್ರಕ್ಕೆ ಇಳಿದು ಈಜಾಡಿ ರಾಹುಲ್ ಸುದ್ದಿಯಾಗಿದ್ದರು. ಇದೀಗ ತಮಿಳುನಾಡಿನಲ್ಲಿ ವಿದ್ಯಾರ್ಥಿಗಳೊಂದಿಗೆ ಡ್ಯಾನ್ಸ್ ಮಾಡಿ ಸುದ್ದಿಯಾಗಿದ್ದಾರೆ.