ಹಾಸನ: ವಿದ್ಯುತ್ ಪರಿವರ್ತನ ಘಟಕಕ್ಕೆ ಭಾರೀ ಪ್ರಮಾಣದಲ್ಲಿ ಬೆಂಕಿ ಬಿದ್ದ ಪರಿಣಾಮ ಕೋಟ್ಯಂತರ ಬೆಲೆ ಬಾಳುವ ಟಿಸಿ ಹಾಗೂ ಇತರ ಸಾಮಗ್ರಿಗಳು ಬೆಂಕಿಗೆ ಆಹುತಿ ಆಗಿರುವ ಘಟನೆ ಹಾಸನ ಜಿಲ್ಲೆ, ಚನ್ನರಾಯಪಟ್ಟಣದಲ್ಲಿ ನಡೆದಿದೆ.
ತಡರಾತ್ರಿ 3 ಗಂಟೆ ಸುಮಾರಿಗೆ ಸೆಸ್ಕಾಂ ಅಭಿಯಂತರ ಕಚೇರಿಯಲ್ಲಿ ಅಗ್ನಿ ದುರಂತ ಸಂಭವಿಸಿದೆ. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಗಂಟೆಗಳ ಕಾಲ ಕಾರ್ಯಾಚರಣೆ ಮಾಡಿ ಬೆಂಕಿಯನ್ನು ನಂದಿಸಲು ಹರಸಹಾಸ ಪಟ್ಟಿದ್ದಾರೆ.
Advertisement
Advertisement
ಮೇಲ್ನೋಟಕ್ಕೆ ಶಾರ್ಟ್ ಸರ್ಕ್ಯೂಟ್ ನಿಂದ ಈ ಘಟನೆ ಸಂಭವಿಸಿದೆ ಎಂದು ಶಂಕಿಸಲಾಗಿದೆ. ಆದರೆ ಘಟನೆ ನಿಖರ ಕಾರಣ ತಿಳಿದು ಬಂದಿಲ್ಲ. ಆದರೆ ಸೆಸ್ಕಾಂ ನಿರ್ಲಕ್ಷ್ಯವೇ ಈ ಅವಘಡಕ್ಕೆ ಕಾರಣ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಘಟನಾ ಸ್ಥಳಕ್ಕೆ ಆಗಮಿಸಿದ ಹಿರಿಯ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.