ಧಾರವಾಡ: ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಗಳು ಮಾಜಿ ಸಚಿವ ವಿನಯ್ ಕುಲಕರ್ಣಿ ಸಹೋದರ ವಿಜಯ್ ಕುಲಕರ್ಣಿಗೆ 8 ಗಂಟೆಗಳ ಕಾಲ ವಿಚಾರಣೆ ನಡೆಸಿದ್ದಾರೆ.
Advertisement
ಧಾರವಾಡ ಉಪನಗರ ಠಾಣೆಗೆ ಬೆಳಗ್ಗೆ 11 ಗಂಟೆಗೆ ಆಗಮಿಸಿದ್ದ ವಿಜಯ್ ಕುಲಕರ್ಣಿ, ಸಂಜೆ 7 ಗಂಟೆಗೆ ವಿಚಾರಣೆ ಎದುರಿಸಿ ಠಾಣೆಯಿಂದ ಹೊರ ಬಂದರು. ಈ ವೇಳೆ ಮಾಧ್ಯಮದವರು ಪ್ರಶ್ನೆ ಕೇಳಲು ಮುಂದಾದಾಗ ಕೊಲೆ ಪ್ರಕರಣ ನ್ಯಾಯಾಲಯದಲ್ಲಿದೆ ಎಂದು ಹೇಳಿ ನಡೆದರು.
Advertisement
Advertisement
ಇಂದು ಕೇವಲ ವಿಜಯ್ ಕುಲಕರ್ಣಿಗೆ ಮಾತ್ರವಲ್ಲ ವಿನಯ್ ಕುಲಕರ್ಣಿ ಸಚಿವರಾಗಿದ್ದಾಗ ಅವರ ಆಪ್ತ ಕಾರ್ಯದರ್ಶಿಯಾಗಿದ್ದ ಸೋಮು ನ್ಯಾಮಗೌಡ, ಕಾಂಗ್ರೆಸ್ ಮುಖಂಡ ಹನುಂಮತ ಕೊರವರ, ವಿಜಯ್ ಕುಲಕರ್ಣಿ ಸೋದರ ಮಾವ ಚಂದ್ರಶೇಖರ ಇಂಡಿ ಹಾಗೂ ಯೋಗಿಶಗೌಡ ಕೊಲೆ ಪ್ರಕರಣದ ಪ್ರಮುಖ ಆರೋಪಿ ಬಸವರಾಜ್ ಮುತ್ತಗಿಯನ್ನು ಸಹ ಸಿಬಿಐ ಅಧಿಕಾರಿಗಳು ವಿಚಾರಣೆಗೆ ಕರೆಸಿದ್ದರು. ಸಂಜೆವರೆಗೆ ಎಲ್ಲರನ್ನು ವಿಚಾರಣೆ ನಡೆಸಿ ಮರಳಿ ಕಳುಹಿಸಿದ್ದಾರೆ. ನಾಳೆ ಮತ್ತೆ ಕೆಲವರನ್ನು ಸಿಬಿಐ ಅಧಿಕಾರಿಗಳು ವಿಚಾರಣೆಗೆ ಕರೆಸುವ ಸಾದ್ಯತೆ ಇದೆ.