ವಿಭಿನ್ನ ಪಾತ್ರಗಳಿಗೆ ಜೀವ ತುಂಬಿದ ಕಲಾವಿದೆ ಜಯಂತಿ: ಗಣ್ಯರ ಸಂತಾಪ

Public TV
3 Min Read
jayanthi 1

-ನನ್ನ ಇಷ್ಟದ ನಟಿ ಜಯಂತಿಯವರ ನಿಧನ ಅತೀವ ದುಃಖವಾಗಿದೆ

ಬೆಂಗಳೂರು: ಸ್ಯಾಂಡಲ್‍ವುಡ್ ಹಿರಿಯ ಕಲಾವಿದೆ ಜಯಂತಿ ಅವರ ನಿಧನಕ್ಕೆ ಗಣ್ಯರು ಟ್ವೀಟ್ ಮಾಡುವ ಮೂಲಕವಾಗಿ ಸಂತಾಪ ಸೂಚಿಸಿದ್ದಾರೆ.

jayanthi

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಜಯಂತಿ ಅವರ ನಿಧನಕ್ಕೆ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.ಪ್ರಖ್ಯಾತ ಹಿರಿಯ ಕಲಾವಿದೆ, ಅಭಿನಯ ಶಾರದೆ ಜಯಂತಿ ಅವರ ನಿಧನದ ಸುದ್ದಿ ಅತೀವ ದುಃಖ ತಂದಿದೆ. ಚಿತ್ರರಂಗಕ್ಕೆ ಅವರ ಕೊಡುಗೆ ಅಪಾರವಾಗಿದ್ದು, ಕನ್ನಡ ಕಲಾಲೋಕಕ್ಕೆ ತುಂಬಲಾರದ ನಷ್ಟವುಂಟಾಗಿದೆ. ದೇವರು ಅವರ ಆತ್ಮಕ್ಕೆ ಸದ್ಗತಿ ಕರುಣಿಸಲಿ, ಅವರ ಕುಟುಂಬ, ಅಪಾರ ಅಭಿಮಾನಿ ಬಳಗಕ್ಕೆ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ.

ಅಭಿಜಾತ ಪ್ರತಿಭೆಯ ಮೂಲಕ ದಶಕಗಳ ಕಾಲ ಚಿತ್ರಪ್ರೇಮಿಗಳ ಮನಗೆದ್ದಿದ್ದ ನಟಿ ಜಯಂತಿ ಅವರು ನಿಧನರಾಗಿದ್ದರೆ. ನನ್ನ ಇಷ್ಟದ ನಟಿ ಅಭಿನಯ ಶಾರದೆ ಜಯಂತಿಯವರ ನಿಧನದಿಂದ ಅತೀವ ದುಃಖ ವಾಗಿದೆ. ಜಯಂತಿ ಅವರು ತಮ್ಮ ಚಿತ್ರಗಳ ಮೂಲಕ ಸದಾಕಾಲ ನಮ್ಮೆಲ್ಲರ ಮನದಲ್ಲಿ ಅಜರಾಮಾರರಾಗಿ ಇರುತ್ತಾರೆ. ಅವರ ಕುಟುಂಬಕ್ಕೆ ನನ್ನ ಸಾಂತ್ವನಗಳು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದಾರೆ.

ಅಭಿನಯ ಶಾರದೆ ಜಯಂತಿ ಅವರು ನಿಧನರಾದ ಸಂಗತಿ ಬೇಸರ ತರಿಸಿದೆ. ಕನ್ನಡ, ತೆಲಗು, ತಮಿಳು, ಮಲಯಾಳಂ, ಹಿಂದಿಯಲ್ಲಿ 500ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಜಯಂತಿ ಅವರು ದಕ್ಷಿಣ ಭಾರತದ ಪ್ರಖ್ಯಾತ ನಟಿ ಎನಿಸಿಕೊಂಡಿದ್ದರು. ಅವರು ಕನ್ನಡಿಗರೆಂಬುದೇ ನಮ್ಮ ಹೆಮ್ಮೆ. ಅವರಿಗೆ ಸದ್ಗತಿ ದೊರೆಯಲಿ ಕುಟುಂಬಕ್ಕೆ ನೋವು ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಟ್ವೀಟ್ ಮಾಡುವ ಮೂಲವಾಗಿ ಎಚ್ ಡಿ ಕುಮಾರಸ್ವಾಮಿಯವರು ಸಂತಾಪ ಸೂಚಿಸಿದ್ದಾರೆ.

ಹಿರಿಯ ನಟಿ, ಅಭಿನಯ ಶಾರದೆ ಶ್ರೀಮತಿ ಜಯಂತಿ ಅವರ ನಿಧನ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ. 6 ಭಾಷೆಗಳ 500ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದ ಅವರು ಒನಕೆ ಓಬವ್ವ ರೀತಿಯ ಪೌರಾಣಿಕ ಪಾತ್ರ ಸೇರಿದಂತೆ ಅನೇಕ ವಿಭಿನ್ನ ಪಾತ್ರಗಳಿಗೆ ಜೀವ ತುಂಬಿದ್ದಾರೆ. ದೇವರು ಅವರ ಆತ್ಮಕ್ಕೆ ಚಿರಶಾಂತಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಆರೋಗಹ್ಯ ಸಚಿವ ಕೆ ಸುಧಾಕರ್ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

 

Share This Article
Leave a Comment

Leave a Reply

Your email address will not be published. Required fields are marked *