– ಹುಟ್ಟೂರು ತಲುಪಿದ ಅಖಿಲೇಶ್ ಮೃತದೇಹ
ದೆಹಲಿ/ಲಕ್ನೋ: ಕೇರಳದ ಕೋಯಿಕ್ಕೋಡ್ ಕರಿಪುರ ವಿಮಾನ ದುರಂತದಲ್ಲಿ ಮಡಿದ ಪೈಲಟ್‍ಗೆ ಏರ್ ಇಂಡಿಯಾ ಎಕ್ಸ್ ಪ್ರೆಸ್ ಸಿಬ್ಬಂದಿ ಅಂತಿಮ ನಮನ ಸಲ್ಲಿಸಿದರು.
Advertisement
ಶುಕ್ರವಾರ ರಾತ್ರಿ ನಡೆದ ದುರಂತದಲ್ಲಿ ಪೈಲಟ್ ಅಖಿಲೇಶ್ ಕುಮಾರ್ ಮೃತಪಟ್ಟಿದ್ದರು. ಶನಿವಾರ ರಾತ್ರಿ ಏರ್ ಇಂಡಿಯಾ ಸಿಬ್ಬಂದಿ ಅಂತಿಮ ನಮನ ಸಲ್ಲಿಸಿ, ಮೃತದೇಹ ಇಂದು ಬೆಳಗ್ಗೆ ಹುಟ್ಟೂರು ಉತ್ತರ ಪ್ರದೇಶದ ಮಥುರಾಗೆ ತಲುಪಿದೆ. ಇದನ್ನೂ ಓದಿ: ಅಜ್ಜಿ ಮನೆ ನೋಡುವ ಮುನ್ನವೇ ಕಣ್ಣು ಮುಚ್ಚಿದ 1 ವರ್ಷದ ಕಂದಮ್ಮ
Advertisement
Delhi: Mortal remains of co-pilot Akhilesh Kumar who lost his life in the flight crash landing incident at #Kozhikode arrives at Delhi Airport. Air India Express employees pay tributes to him.
His mortal remains are being taken to his native place in Mathura, Uttar Pradesh. pic.twitter.com/vSlqc9tabW
— ANI (@ANI) August 8, 2020
Advertisement
ಕೊರೊನಾ ವೈರಸ್ ಲಾಕ್‍ಡೌನ್ ಹಿನ್ನೆಲೆಯಲ್ಲಿ ದುಬೈನಲ್ಲಿ ಸಿಲುಕಿದ್ದ ಭಾರತೀಯರನ್ನು ಶುಕ್ರವಾರ ಏರ್ ಇಂಡಿಯಾ ವಿಮಾನ ಮೂಲಕ ಕೇರಳದ ಕೋಯಿಕ್ಕೋಡ್ ನಲ್ಲಿರುವ ಕರಿಪುರ ವಿಮಾನ ನಿಲ್ದಾಣಕ್ಕೆ ಕರೆತರಲಾಗುತ್ತಿತ್ತು. ಆದರೆ ದುರಾದೃಷ್ಟವಶಾತ್ ವಿಮಾನ ಲ್ಯಾಂಡಿಂಗ್ ವೇಳೆ ರನ್ ವೇಯಿಂದ ಜಾರಿ ದುರಂತಕ್ಕೀಡಾಗಿತ್ತು. ಇದನ್ನೂ ಓದಿ: ಏರ್ ಇಂಡಿಯಾ ವಿಮಾನ ಇಬ್ಭಾಗವಾದ್ರೂ ಬದುಕುಳಿದ ಪುಟ್ಟ ಕಂದಮ್ಮ
Advertisement
ದುಬೈಯಿಂದ 190 ಪ್ರಯಾಣಿಕರನ್ನು ಕರೆತರುತ್ತಿದ್ದ ಏರ್‍ಇಂಡಿಯಾ ಎಕ್ಸ್ ಪ್ರೆಸ್ ವಿಮಾನವನ್ನು ಪೈಲಟ್ ದೀಪಕ್ ವಸಂತ ಸಾಠೆ ಎರಡು ಬಾರಿ ವಿಮಾನ ನಿಲ್ದಾಣಕ್ಕೆ ಸುತ್ತು ಹೊಡೆಸಿದ್ದರು. ಆದರೆ ಪ್ರತಿಕೂಲ ಹವಾಮಾನದ ಸಮಸ್ಯೆಯ ಮಧ್ಯೆಯೂ ವಿಮಾನವನ್ನು ಟೇಬಲ್ ಟಾಪ್ ರನ್‍ವೇಯಲ್ಲಿ ಇಳಿಸಿದರೂ ಅದು 35 ಅಡಿ ಕಂದಕಕ್ಕೆ ಜಾರಿ ಬಿದ್ದು ಗೋಡೆಗೆ ಡಿಕ್ಕಿ ಹೊಡೆದು ಇಬ್ಭಾಗವಾಗಿತ್ತು. ಘಟನೆಯಲ್ಲಿ ಇಬ್ಬರು ಪೈಲಟ್ ಗಳು ಸೇರಿ 19 ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಯುದ್ಧವಿಮಾನವನ್ನು ಹಾರಿಸಿದ್ದ ಪೈಲಟ್ ಸಾಠೆ 2 ಬಾರಿ ಲ್ಯಾಂಡಿಗ್‌ಗೆ ಪ್ರಯತ್ನಿಸಿದ್ರು
Mathura: Mortal remains of co-pilot Akhilesh Kumar who lost his life in the flight crash landing incident at #Kozhikode in Kerala, reaches his native place. pic.twitter.com/qbG34ny4jd
— ANI UP/Uttarakhand (@ANINewsUP) August 9, 2020