– ಗಾಯಾಳುಗಳನ್ನು ನೋಡಲು ಆಸ್ಪತ್ರೆಗೆ ಧಾವಿಸ್ಬೇಡಿ
– ಸಿಎಂ ಪಿಣರಾಯಿ ನಿಯೋಗ ಆಸ್ಪತ್ರೆಗೆ ಭೇಟಿ
ತಿರುವನಂತಪುರಂ: ಕೋಯಿಕ್ಕೋಡ್ ಕರಿಪುರ ವಿಮಾನ ನಿಲ್ದಾಣದಲ್ಲಿ ನಡೆದ ದುರಂತದಲ್ಲಿ ಸಾವನ್ನಪ್ಪಿದವರಲ್ಲಿ ಓರ್ವನಿಗೆ ಕೊರೊನಾ ಪಾಸಿಟಿವ್ ಇರುವುದು ದೃಢವಾಗಿದೆ.
Advertisement
ಪ್ರಯಾಣಿಕ ದುಬೈನಿಂದ ಭಾರತಕ್ಕೆ ವಂದೆ ಭಾರತ್ ಮಿಷನ್ ಅಡಿ ಟಿಕೆಟ್ ಪಡೆದು ಶುಕ್ರವಾರ ರಾತ್ರಿ ವಿಮಾನ ಹತ್ತಿದ್ದರು. ಆದರೆ ಕರಿಪುರ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ವೇಳೆ ಅವಘಡ ಸಂಭವಿಸಿದ್ದು, ಏರ್ ಇಂಡಿಯಾ ವಿಮಾನ ಇಬ್ಭಾಗವಾಗಿತ್ತು. ಈ ದುರಂತದಲ್ಲಿ ಸಾವನ್ನಪ್ಪಿದವರ ಕೊರೊನಾ ಟೆಸ್ಟ್ ಮಾಡಿದಾಗ ಓರ್ವನಿಗೆ ಕೊರೊನಾ ಪಾಸಿಟಿವ್ ಇರುವುದು ವರದಿಯಾಗಿದೆ.
Advertisement
Advertisement
ದುಬೈಯಿಂದ 184 ಪ್ರಯಾಣಿಕರನ್ನು ಕರೆತರುತ್ತಿದ್ದ ಏರ್‍ಇಂಡಿಯಾ ಎಕ್ಸ್ ಪ್ರೆಸ್ ವಿಮಾನವನ್ನು ದೀಪಕ್ ವಸಂತ ಸಾಠೆ ಎರಡು ಬಾರಿ ವಿಮಾನ ನಿಲ್ದಾಣಕ್ಕೆ ಸುತ್ತು ಹೊಡೆಸಿದ್ದರು. ಆದರೆ ಪ್ರತಿಕೂಲ ಹವಾಮಾನದ ಸಮಸ್ಯೆಯ ಮಧ್ಯೆಯೂ ವಿಮಾನವನ್ನು ಟೇಬಲ್ ಟಾಪ್ ರನ್‍ವೇಯಲ್ಲಿ ಇಳಿಸಿದರೂ ಅದು 35 ಅಡಿ ಕಂದಕಕ್ಕೆ ಜಾರಿ ಬಿದ್ದು ಗೋಡೆಗೆ ಡಿಕ್ಕಿ ಹೊಡೆದು ಇಬ್ಭಾಗವಾಗಿದೆ. ಇದನ್ನೂ ಓದಿ: ಏರ್ ಇಂಡಿಯಾ ವಿಮಾನ ಇಬ್ಭಾಗವಾದ್ರೂ ಬದುಕುಳಿದ ಪುಟ್ಟ ಕಂದಮ್ಮ
Advertisement
ದುರ್ಘಟನೆ ನಡೆಯುತ್ತಿದ್ದಂತೆ ಅಧಿಕಾರಿಗಳು, ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯ ಸಹಕಾರದಿಂದ ಗಾಯಗೊಂಡ 149 ಮಂದಿಯನ್ನು ಕೂಡಲೇ ಸ್ಥಳೀಯ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಘಟನೆಯಲ್ಲಿ 18 ಮಂದಿ ಸಾವನ್ನಪ್ಪಿದ್ದು, 22 ಮಂದಿಯ ಸ್ಥಿತಿ ಗಂಭೀರವಾಗಿದೆ. 22 ಮಂದಿ ಈಗಾಗಲೇ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಮಲಪ್ಪುರಂ ಕಲೆಕ್ಟರ್ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಯುದ್ಧವಿಮಾನವನ್ನು ಹಾರಿಸಿದ್ದ ಪೈಲಟ್ ಸಾಠೆ 2 ಬಾರಿ ಲ್ಯಾಂಡಿಗ್‌ಗೆ ಪ್ರಯತ್ನಿಸಿದ್ರು
ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರನ್ನು ಯಾರೂ ಭೇಟಿ ಮಾಡಬೇಡಿ ಎಂದು ಅಲ್ಲಿನ ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ. ಇಂದು ಘಟನಾ ಸ್ಥಳಕ್ಕೆ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ 10 ವರ್ಷಗಳ ಹಿಂದೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಕೂಡ ಇಂತದ್ದೇ ದುರಂತ ಸಂಭವಿಸಿತ್ತು ಎಂದು ಮೆಲುಕು ಹಾಕಿಕೊಂಡರು. ಇದನ್ನೂ ಓದಿ: ಮರಳಿ ಮನೆಗೆ – ಟೇಕಾಫ್ ಮೊದಲು ಕುಟುಂಬದೊಂದಿಗೆ ಫೇಸ್‌ಶೀಲ್ಡ್ ಹಾಕಿ ಸೆಲ್ಫಿ, ಪ್ರಯಾಣಿಕ ಸಾವು
ರಾಜ್ಯಪಾಲ, ಸಿಎಂ ನಿಯೋಗ ಭೇಟಿ:
ಕೋಯಿಕ್ಕೋಡ್ ನಲ್ಲಿರುವ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ವಿಮಾನ ದುರಂತದಲ್ಲಿ ಮೃತಪಟ್ಟವರ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಅವರ ನಿಯೋಗ ತಿರುವನಂಪುರದಿಂದ ಕೋಯಿಕ್ಕೋಡ್ ಏರ್ ಇಂಡಿಯಾ ವಿಶೇಷ ವಿಮಾನದಲ್ಲಿ ಕೋಯಿಕ್ಕೋಡ್ ನಲ್ಲಿರುವ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಭೇಟಿ ನೀಡಿದೆ. ಇದನ್ನೂ ಓದಿ: ಅಜ್ಜಿ ಮನೆ ನೋಡುವ ಮುನ್ನವೇ ಕಣ್ಣು ಮುಚ್ಚಿದ 1 ವರ್ಷದ ಕಂದಮ್ಮ
ವಿಮಾನ ಅಪಘಾತಕ್ಕೆ ಕಾರಣವೇನು ಎಂಬುದರ ಬಗ್ಗೆ ಈಗಾಗಲೇ ತನಿಖೆ ಆರಂಭವಾಗಿದೆ. ಈ ತನಿಖೆ ಬಳಿಕ ಮುಂದಿನ ಕ್ರಮ ಏನು ಅಂತ ಹೇಳುವುದಾಗಿ ಇದೇ ವೇಳೆ ಸಿಎಂ ಪಿಣರಾಯಿ ಅವರು ತಿಳಿಸಿದರು. ನಿಯೋಗದಲ್ಲಿ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್, ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಸ್ಪೀಕರ್ ಪಿ. ವಿಶ್ವಾಸ್ ಮೆಹ್ತಾ ಹಾಗೂ ರಾಜ್ಯ ಪೊಲೀಸ್ ಮುಖ್ಯಸ್ಥ ಲೋಕನಾಥ್ ಬೆಹ್ರಾ ಪ್ರಮುಖರಾಗಿದ್ದರು.
Kerala Governor Arif Mohammad Khan & Chief Minister Pinarayi Vijayan visit Kozhikode Medical College, where several passengers who were injured in #KozhikodePlaneCrash are admitted.
18 people, including two pilots, lost their lives in the incident. pic.twitter.com/E7PorqdqAx
— ANI (@ANI) August 8, 2020