Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿರಸ ಬಿಟ್ಟು ಸಾಮರಸ್ಯದೊಂದಿಗೆ ಮುನ್ನಡೆಯೋಣ – ಸಾರಿಗೆ ನೌಕರರ ಪತ್ರಕ್ಕೆ ಯಶ್ ಉತ್ತರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ವಿರಸ ಬಿಟ್ಟು ಸಾಮರಸ್ಯದೊಂದಿಗೆ ಮುನ್ನಡೆಯೋಣ – ಸಾರಿಗೆ ನೌಕರರ ಪತ್ರಕ್ಕೆ ಯಶ್ ಉತ್ತರ

Bengaluru City

ವಿರಸ ಬಿಟ್ಟು ಸಾಮರಸ್ಯದೊಂದಿಗೆ ಮುನ್ನಡೆಯೋಣ – ಸಾರಿಗೆ ನೌಕರರ ಪತ್ರಕ್ಕೆ ಯಶ್ ಉತ್ತರ

Public TV
Last updated: April 15, 2021 12:20 pm
Public TV
Share
3 Min Read
YASH copy
SHARE

ಬೆಂಗಳೂರು: ತಮ್ಮನ್ನು ಬೆಂಬಲಿಸುವಂತೆ ಸಾರಿಗೆ ನೌಕರರು ರಾಕಿಂಗ್ ಸ್ಟಾರ್ ಯಶ್ ಅವರಿಗೆ ಬರೆದ ಪತ್ರಕ್ಕೆ ಇದೀಗ ನಟ ಉತ್ತರ ನೀಡಿದ್ದಾರೆ.

ಈ ಸಂಬಂಧ ಪತ್ರ ಬರೆದಿರುವ ಯಶ್, ಸಾರಿಗೆ ಸಂಸ್ಥೆಯ ನೌಕರರು ಮತ್ತು ಪ್ರಯಾಣಿಕರ ನಡುವಿನ ಸಂಬಂಧ ಮತ್ತು ಸಹಕಾರ ಲೆಕ್ಕವಿಲ್ಲದಷ್ಟು ಗೆಳೆತನಗಳಿಗೆ ಸಾಕ್ಷಿಯಾಗಿವೆ. ಆದರೆ ನಮ್ಮ ಸಾರಿಗೆ ಸಂಸ್ಥೆಯ ನೌಕರರ ಸಂಬಳದ ತಾರತಮ್ಯವಿರಬಹುದು. ರಜೆಗಳಿಗಾಗಿ ನಡೆಯುವ ತಕರಾರುಗಳಿರಬಹುದು. ಓವರ್ ಡ್ಯೂಟಿಗಾಗಿ ನಡೆಯುವ ಜಟಾಪಟಿಗಳಿರಬಹುದು. ಎಲ್ಲವನ್ನೂ ನಾನು ಹತ್ತಿರದಿಂದ ಬಲ್ಲವನು ಎಂದು ಹೇಳಿದ್ದಾರೆ.

BMTC KSRTC Bus STRIKE 5

ನ್ಯಾಯ ಕೊಡಿ ಎಂದು ಪ್ರಾಮಾಣಿಕವಾಗಿ ಹೋರಾಟಕ್ಕಿಳಿದಿರುವ ಸಾರಿಗೆ ನೌಕರರ ಕೂಗು ಮತ್ತು ಸಾರಿಗೆ ಬಸ್ಸುಗಳ ಮೇಲೆಯೇ ಅವಲಂಬಿತವಾಗಿರುವ ಮಧ್ಯಮ ವರ್ಗದ ಜನರ ಅಳಲು, ಈ ಎರಡು ಕೂಡ ನನ್ನನ್ನು ಬಹುವಾಗಿ ಕಾಡುತ್ತಿವೆ. ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಅವರೊಂದಿಗೆ ಈ ಬಗ್ಗೆ ವಿವರವಾಗಿ ಮಾತನಾಡಿದ್ದೇನೆ. ಸಾರಿಗೆ ನೌಕರರ ಸಮಸ್ಯೆಗಳನ್ನು ಮನವರಿಕೆ ಮಾಡುವ ಪ್ರಯತ್ನ ಮಾಡಿದ್ದೇನೆ ಎಂದರು.

ಸಮಾಧಾನದ ವಿಷಯ ಅಂದ್ರೆ ಲಕ್ಷ್ಮಣ್ ಸವದಿ ಅವರಿಗೆ ಸಾರಿಗೆ ನೌಕರರ ಬೇಡಿಕೆಗಳ ಬಗ್ಗೆ ಅರಿವು ಮತ್ತು ಕಳಕಳಿ ಇದೆ. ಜೊತೆಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಸಾರಿಗೆ ನೌಕರರ ಬಹುಮುಖ್ಯ ಬೇಡಿಕೆಯಾದ ವೇತನ ತಾರತಮ್ಯವನ್ನು ತಪ್ಪದೆ ಈಡೇರಿಸುವ ಮಾತನ್ನು ನನಗೆ ಕೊಟ್ಟಿದ್ದಾರೆ. ಇದು ನನಗೆ ಮತ್ತಷ್ಟು ಖುಷಿ ಕೊಟ್ಟಿದೆ ಎಂದು ಭರವಸೆ ನೀಡಿದರು.

yash 1

ಸಮಸ್ಯೆಗೆ ಮತ್ತೊಂದು ಸಮಸ್ಯೆ ಎಂದಿಗೂ ಪರಿಹಾರವಲ್ಲ. ಬದಲಿಗೆ ಮುಕ್ತ ಮನಸ್ಸುಗಳ ಬಿಚ್ಚುಮಾತು ಈ ಸಮಸ್ಯೆಗೆ ಪರಿಹಾರವಾಗಬಲ್ಲದು ಎಂಬುದು ನನ್ನ ದೃಢ ವಿಶ್ವಾಸ. ವಿರಸ ಬಿಟ್ಟು ಸಾಮರಸ್ಯದೊಂದಿಗೆ ಮುನ್ನಡೆಯೋಣ ಎಂದು ಯಶ್ ಅವರು ಸಾರಿಗೆ ನೌಕರರಿಗೆ ಪರಿಸ್ಥಿತಿ ಮನವರಿಕೆ ಮಾಡಿದರು.

ಪತ್ರ:

ರವರಿಗೆ,
ಕರ್ನಾಟಕ ರಾಜ್ಯ ಸಾರಿಗೆ ನೌಕರರ ಒಕ್ಕೂಟ ಪ್ರೀತಿಯ ಸಾರಿಗೆ ಸಂಸ್ಥೆ ನೌಕರರ ಕುಟುಂಬಕ್ಕೆ ನಿಮ್ಮ ಯಶ್ ಮಾಡುವ ನಮಸ್ಕಾರಗಳು. ಇಂದು ನಿಮ್ಮ ಯಶ್ ಏನೇ ಆಗಿರಬಹುದು. ಆದರೆ ಅದಕ್ಕೂ ಮೊದಲು ನಾನು ನಿಮ್ಮ ಸಂಸ್ಥೆಯ ಪ್ರಾಮಾಣಿಕ ಚಾಲಕನ ಪುತ್ರ.

ksrtc bmtc bus strike 1

ಮನೆಯಲ್ಲಿ ನಾನು ತಡ ಮಾಡಿದ್ರೆ ದಿನಾಲೂ ನನ್ನ ಬಸ್ಸಿನಲ್ಲಿಯೇ ಬರೋ ಪ್ರಯಾಣಿಕರಿಗೆ ಟ್ರೈನ್ ಮಿಸ್ ಆಗುತ್ತೇನೋ.. ಆಫೀಸ್ ಗೆ ಲೇಟ್ ಆಗುತ್ತೇನೋ..ಅಂತ ನಮ್ಮಪ್ಪ ಎಷ್ಟೋ ದಿನ ಬೆಳಗ್ಗೆ ಮನೆಯಲ್ಲಿ ತಿಂಡಿ ಕೂಡ ತಿನ್ನದೇ ಗಡಿಬಿಡಿಯಲ್ಲಿ ನಡೆಯುತ್ತಿದ್ದ ಆ ದಿನಗಳು ಈಗಲೂ ನೆನಪಾಗುತ್ತೆ. ಬಹುಶಃ ಇದು ನನ್ನ ಅಪ್ಪನ ಕತೆ ಮಾತ್ರವಲ್ಲ…ಕರ್ತವ್ಯ ನಿಷ್ಠೆ ಮೆರೆವ ಸಾವಿರಾರು ಸಾರಿಗೆ ನೌಕರರುಗಳ ದಿನಚರಿ ಹೀಗೆ ಇರುತ್ತೆ..

ಸಾರಿಗೆ ಸಂಸ್ಥೆಯ ನೌಕರರು ಮತ್ತು ಪ್ರಯಾಣಿಕರ ನಡುವಿನ ಸಂಬಂಧ ಮತ್ತು ಸಹಕಾರ ಲೆಕ್ಕವಿಲ್ಲದಷ್ಟು ಗೆಳೆತನಗಳಿಗೆ ಸಾಕ್ಷಿಯಾಗಿವೆ… ಆದರೆ ನಮ್ಮ ಸಾರಿಗೆ ಸಂಸ್ಥೆಯ ನೌಕರರ ಸಂಬಳದ ತಾರತಮ್ಯ ವಿರಬಹುದು.. ರಜೆಗಳಿಗಾಗಿ ನಡೆಯುವ ತಕರಾರುಗಳಿರಬಹುದು.. ಓವರ್ ಡ್ಯೂಟಿಗಾಗಿ ನಡೆಯುವ ಜಟಾಪಟಿಗಳಿರಬಹುದು. ಎಲ್ಲವನ್ನೂ ನಾನು ಹತ್ತಿರದಿಂದ ಬಲ್ಲವನು. ನ್ಯಾಯ ಕೊಡಿ ಎಂದು ಪ್ರಾಮಾಣಿಕವಾಗಿ ಹೋರಾಟಕ್ಕಿಳಿದಿರುವ ಸಾರಿಗೆ ನೌಕರರ ಕೂಗು ಮತ್ತು ಸಾರಿಗೆ ಬಸ್ಸುಗಳ ಮೇಲೆಯೇ ಅವಲಂಬಿತವಾಗಿರುವ ಮಧ್ಯಮ ವರ್ಗದ ಜನರ ಅಳಲು. ಈ ಎರಡು ಕೂಡ ನನ್ನನ್ನು ಬಹುವಾಗಿ ಕಾಡುತ್ತಿವೆ.

yash 1

ದೊಡ್ಡ ಸಮಸ್ಯೆಯೊಂದರ ಪರಿಹಾರಕ್ಕೆ ಚಿಕ್ಕ ಪ್ರಯತ್ನವೆಂಬಂತೆ ಸನ್ಮಾನ್ಯ ಸಾರಿಗೆ ಸಚಿವರಾದ ಲಕ್ಷ್ಮಣ್ ಸವದಿ ಅವರೊಂದಿಗೆ ಈ ಬಗ್ಗೆ ವಿವರವಾಗಿ ಮಾತನಾಡಿ ಸಾರಿಗೆ ನೌಕರರ ಸಮಸ್ಯೆಗಳನ್ನು ಮನವರಿಕೆ ಮಾಡುವ ಪ್ರಯತ್ನ ಮಾಡಿದ್ದೇನೆ. ಸಮಾಧಾನದ ವಿಷಯ ಅಂದ್ರೆ ಸನ್ಮಾನ್ಯ ಸಾರಿಗೆ ಸಚಿವರಾದ ಲಕ್ಷ್ಮಣ್ ಸವದಿ ಅವರಿಗೆ ಸಾರಿಗೆ ನೌಕರರ ಬೇಡಿಕೆಗಳ ಬಗ್ಗೆ ಇದ್ದ ಅರಿವು ಮತ್ತು ಕಳಕಳಿ, ಜೊತೆಗೆ ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಸಾರಿಗೆ ನೌಕರರ ಬಹುಮುಖ್ಯ ಬೇಡಿಕೆಯಾದ ವೇತನ ತಾರತಮ್ಯವನ್ನು ತಪ್ಪದೆ ಈಡೇರಿಸುವ ಮಾತನ್ನು ನನಗೆ ಕೊಟ್ಟಿದ್ದು ಮತ್ತಷ್ಟು ಖುಷಿ ಕೊಡು…

ಸಮಸ್ಯೆಗೆ ಮತ್ತೊಂದು ಸಮಸ್ಯೆ ಎಂದಿಗೂ ಪರಿಹಾರವಲ್ಲ. ಬದಲಿಗೆ ಮುಕ್ತ ಮನಸ್ಸುಗಳ ಬಿಚ್ಚುಮಾತು ಈ ಸಮಸ್ಯೆಗೆ ಪರಿಹಾರವಾಗಬಲ್ಲದು ಎಂಬುದು ನನ್ನ ದೃಢ ವಿಶ್ವಾಸ.

ವಿರಸ ಬಿಟ್ಟು ಸಾಮರಸ್ಯದೊಂದಿಗೆ ಮುನ್ನಡೆಯೋಣ.

ವಂದನೆಗಳೊಂದಿಗೆ
ನಿಮ್ಮ ಪ್ರೀತಿಯ
ಯಶ್

BMTC

TAGGED:actorbengaluruletterPublic TVsandalwoodYashನಟಪತ್ರಪಬ್ಲಿಕ್ ಟಿವಿಬೆಂಗಳೂರುಯಶ್ಸಾರಿಗೆ ನೌಕರಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Rishab Shetty
ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ರಿಷಬ್ ದಂಪತಿ
Cinema Districts Karnataka Latest Sandalwood Top Stories
Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post

You Might Also Like

belagavi money robbery
Belgaum

400 ಕೋಟಿ ದರೋಡೆ ಕಟ್ಟುಕಥೆ – ʻಮಹಾʼ ಸರ್ಕಾರಕ್ಕೆ ಎಸ್‌ಐಟಿ ವರದಿ

Public TV
By Public TV
25 minutes ago
AI Impact Summit 2
Latest

ಇಂದಿನಿಂದ AI ಇಂಪ್ಯಾಕ್ಟ್ ಶೃಂಗಸಭೆ – ಭಾರತದಲ್ಲಿ ರಸ್ತೆ ಸುರಕ್ಷತೆಗೆ ಎಐ ಬಳಕೆ ಕುರಿತು ಚರ್ಚೆ

Public TV
By Public TV
53 minutes ago
Vijayapura House Theft
Crime

ಶಿವರಾತ್ರಿ ಜಾಗರಣೆಗೆ ಹೋಗಿದ್ದವರ ಮನೆಗೆ ಕನ್ನ – 154 ಗ್ರಾಂ ಚಿನ್ನ, 270 ಗ್ರಾಂ ಬೆಳ್ಳಿ ಕಳ್ಳತನ

Public TV
By Public TV
2 hours ago
yadgir
Districts

ಯಾದಗಿರಿಯಲ್ಲಿ ಅನಿಷ್ಟ ಪದ್ಧತಿ ಇನ್ನೂ ಜೀವಂತ – ಸ್ವಕುಳ ಸಾಳಿ ಸಮಾಜದ 15 ಕುಟುಂಬಕ್ಕೆ ಬಹಿಷ್ಕಾರ ಶಿಕ್ಷೆ

Public TV
By Public TV
2 hours ago
Bengaluru GBA Skywalk
Bengaluru City

18 ಟ್ರಾಫಿಕ್ ಹಾಟ್‌ಸ್ಪಾಟ್ ಪ್ರದೇಶಗಳಲ್ಲಿ ಸ್ಕೈವಾಕ್ ನಿರ್ಮಾಣಕ್ಕೆ ಜಿಬಿಎ ಪ್ಲ್ಯಾನ್

Public TV
By Public TV
2 hours ago
siddaramaiah dk shivakumar
Bengaluru City

ʻಪವರ್‌ ಫೈಟ್‌ʼ ನಡುವೆ ನಾಳೆಯಿಂದ 27 ಶಾಸಕರ ಫಾರಿನ್ ಟ್ರಿಪ್‌ ಫಿಕ್ಸ್?‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?