ಪಣಜಿ: ವಿಚ್ಛೇದನ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಗೋವಾ ಸರ್ಕಾರ ಹೊಸ ಕಾನೂನು ತರಲು ಮುಂದಾಗಿದ್ದು, ವಿವಾಹಕ್ಕೂ ಮುನ್ನ ಕೌನ್ಸಲಿಂಗ್ ಕಡ್ಡಾಯಗೊಳಿಸಲು ಚಿಂತಿಸಿದೆ.
Advertisement
ಈ ಕುರಿತು ಗೋವಾ ಕಾನೂನು ಸಚಿವ ನಿಲೇಶ್ ಕ್ಯಾಬ್ರಾಲ್ ಸೋಮವಾರ ಮಾಹಿತಿ ನೀಡಿದ್ದು, ಗೋವಾ ಇನ್ಸ್ಟಿಟ್ಯೂಟ್ ಆಫ್ ಪಬ್ಲಿಕ್ ಅಡ್ಮಿನಿಸ್ಟ್ರೇಶನ್ ಆ್ಯಂಡ್ ರೂರಲ್ ಡೆವಲಪ್ಮೆಂಟ್(ಜಿಐಪಿಎಆರ್ ಡಿ) ಕೌನ್ಸಲಿಂಗ್ ಕೋರ್ಸ್ ಹಾಗೂ ಇದರ ಸ್ವರೂಪವನ್ನು ಅಂತಿಮಗೊಳಿಸಲಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಗದಗ- ಏಪ್ರಿಲ್, ಮೇನಲ್ಲಿ 21 ಬಾಲ್ಯ ವಿವಾಹ ತಡೆದ ಅಧಿಕಾರಿಗಳು
Advertisement
Advertisement
ರಾಜ್ಯದಲ್ಲಿ ವಿವಾಹಪೂರ್ವ ಕೌನ್ಸಲಿಂಗ್ ಕಡ್ಡಾಯಗೊಳಿಸಲು ಹೊಸ ನೀತಿಯನ್ನು ತರುತ್ತಿದ್ದು, ಧಾರ್ಮಿಕ ಸಂಸ್ಥೆಗಳೂ ಸಹ ಇದರಲ್ಲಿ ಭಾಗವಹಿಸಲಿವೆ. ಗೋವಾದಲ್ಲಿ ಹೆಚ್ಚುತ್ತಿರುವ ವಿಚ್ಛೇದನ ಪ್ರಕರಣಗಳನ್ನು ತಡೆಯಲು ಈ ಕಾನೂನು ತರಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
Advertisement
ವಿವಾಹವಾಗಿ 6 ತಿಂಗಳಿಂದ 1 ವರ್ಷದ ಅವಧಿಯಲ್ಲಿ ಹೆಚ್ಚು ಜನ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸುತ್ತಿದ್ದಾರೆ. ಹೀಗಾಗಿ ವಿವಾಹಕ್ಕೂ ಮೊದಲು ಕೌನ್ಸಲಿಂಗ್ ನಡೆಸುವುದನ್ನು ಕಡ್ಡಾಯಗೊಳಿಸಲಾಗುತ್ತಿದೆ. ಈ ಮೂಲಕ ದಾಂಪತ್ಯದ ಕುರಿತು ಅರಿವು ಮೂಡಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
ಪ್ರತಿ ತಿಂಗಳು ಎಷ್ಟು ವಿಚ್ಛೇದನ ಪ್ರಕರಣಗಳು ದಾಖಲಾಗುತ್ತಿವೆ ಎಂಬ ನಿರ್ದಿಷ್ಟ ಅಂಕಿ ಅಂಶಗಳು ಸದ್ಯ ನಮ್ಮ ಬಳಿ ಇಲ್ಲ. ಆದರೆ ಇತ್ತೀಚೆಗೆ ಈ ಸಂಖ್ಯೆಗಳಲ್ಲಿ ಏರಿಕೆಯಾಗಿದೆ. ಹೀಗಾಗಿ ಕೌನ್ಸಲಿಂಗ್ ಅಗತ್ಯವಿದೆ ಎಂದು ಅವರು ತಿಳಿಸಿದ್ದಾರೆ.