– ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಅಪ್ಲೋಡ್
ಜೈಪುರ: 45 ವರ್ಷದ ಮಹಿಳೆಯ ಮೇಲೆ ಆರು ಮಂದಿ ಕಾಮುಕರು ಸಾಮೂಹಿಕವಾಗಿ ಅತ್ಯಾಚಾರ ಎಸಗಿರುವ ಘಟನೆ ರಾಜಸ್ಥಾನದ ಅಲ್ವಾರ್ ಜಿಲ್ಲೆಯಲ್ಲಿ ನಡೆದಿದೆ.
ಆರೋಪಿಗಳು ಅತ್ಯಾಚಾರ ಎಸಗಿದ್ದಲ್ಲದೇ ಕೃತ್ಯದ ವಿಡಿಯೋವನ್ನು ಮೊಬೈಲಿನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದಾರೆ. ನಂತರ ಅದನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಂತ್ರಸ್ತೆ ಈ ಕುರಿತು ಪ್ರಕರಣ ದಾಖಲಿಸಿದ್ದಾರೆ. ವಿವಾಹಿತ ಮಹಿಳೆ ತನ್ನ ಸಂಬಂಧಿಯೊಂದಿಗೆ ಯಾರಿಗೋ ಸಾಲವನ್ನು ನೀಡಲು ಹೋಗುತ್ತಿದ್ದರು. ಸಂತ್ರಸ್ತೆ ಹಣವನ್ನು ನೀಡಿ ಮನೆಗೆ ಹಿಂದಿರುಗುತ್ತಿದ್ದಾಗ ಆರು ಮಂದಿ ಬೆಟ್ಟದ ಮೇಲೆ ತಡೆದಿದ್ದಾರೆ. ಆಗ ಆರೋಪಿಗಳು ಸಂತ್ರಸ್ತೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ. ಅಲ್ಲದೇ ಜೊತೆಯಲ್ಲಿದ್ದ ಸಂಬಂಧಿಯ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಡಿಎಸ್‍ಪಿ ಕುಶಾಲ್ ಸಿಂಗ್ ಹೇಳಿದರು.
ಒಬ್ಬ ವ್ಯಕ್ತಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಆಗ ಉಳಿದವರು ವಿಡಿಯೋವನ್ನು ರೇಕಾರ್ಡ್ ಮಾಡಿಕೊಂಡಿದ್ದಾರೆ. ಅಲ್ಲದೇ ಉಳಿದ ಐದು ಮಂದಿ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ. ಬಳಿಕ ಆ ವಿಡಿಯೋವನ್ನು ಸಾಮಾಜಿಕ ಜಾಲತಾಣಗಲ್ಲಿ ಅಪ್ಲೋಡ್ ಮಾಡಿದ್ದಾರೆ ಎಂದು ಸಿಂಗ್ ತಿಳಿಸಿದರು.
ಸಂತ್ರಸ್ತೆ ನಡೆದ ಘಟನೆಯ ಬಗ್ಗೆ ಪತಿಗೆ ತಿಳಿಸಿದ್ದಾರೆ. ನಂತರ ಆಕೆ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದು, ಈಗಾಗಲೇ ಆರೋಪಿಗಳಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಉಳಿದ ಆರೋಪಿಗಳನ್ನು ಬಂಧಿಸಲು ಶೋಧ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.