– ರೈಲಿನ ವಿಶೇಷತೆ ಏನು..?
ಮಂಗಳೂರು: ಯಶವಂತಪುರ-ಮಂಗಳೂರು ಜಂಕ್ಷನ್ ನಡುವೆ ಸಂಚರಿಸುವ ವಿಸ್ಟಾಡೋಮ್ ಬೋಗಿಗಳ ರೈಲಿಗೆ ಇಂದು ಮಂಗಳೂರಿನಲ್ಲಿ ಚಾಲನೆ ನೀಡಲಾಯಿತು. ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ದಕ್ಷಿಣ ಕನ್ನಡದ ಸಂಸದ ನಳಿನ್ ಕುಮಾರ್ ಕಟೀಲ್‍ರವರು ರೈಲಿಗೆ ಹಸಿರು ನಿಶಾನೆ ತೋರಿದರು.
Advertisement
ಮಂಗಳೂರು ಹಾಗೂ ಬೆಂಗಳೂರಿನ ನಡುವೆ ಸಂಚರಿಸಲಿರುವ ಈ ವಿಸ್ಟಾಡೋಮ್ ಕೋಚ್ ಹೊಂದಿರುವ ರೈಲು ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಗಾಜಿನ ಛಾವಣಿ ಹೊಂದಿರುವ ಆಕರ್ಷಕ ವಿಸ್ಟಾಡೋಮ್ ಬೋಗಿಯಾಗಿದೆ. ಹಗಲಿನಲ್ಲಿ ಸಂಚರಿಸುತ್ತಾ ಪ್ರಕೃತಿಯ ರಮಣೀಯ ದೃಶ್ಯಗಳನ್ನು ವೀಕ್ಷಿಸಲು ಈ ವಿಸ್ಟಾಡೋಮ್ ಕೋಚ್ ಉಳ್ಳ ರೈಲು ಸಿದ್ಧವಾಗಿದೆ. ಪಶ್ಚಿಮ ಘಟ್ಟಗಳ ಮೂಲಕ ರೈಲು ಸಂಚರಿಸಲಿದ್ದು, ಪ್ರಯಾಣದ ಸಂದರ್ಭದ ರಮಣೀಯ ಪ್ರಾಕೃತಿಕ ಸೊಬಗನ್ನು ಸವಿಯಲು ರಚಿಸಲಾಗಿರುವ ವಿಸ್ಟಾಡೋಮ್ ವಿಂಡೋಸ್ ಎಲ್ಲರ ಗಮನಸೆಳೆಯುತ್ತಿದೆ. ಇದನ್ನೂ ಓದಿ: ರಾಜಕೀಯ ಕ್ಷೇತ್ರದಲ್ಲಿರುವ ನಾವು ಯಾರ ಬಗ್ಗೆಯೂ ವೈಯಕ್ತಿಕವಾಗಿ ಮಾತನಾಡಲ್ಲ: ಕಟೀಲ್
Advertisement
Advertisement
ರೈಲಿನಲ್ಲಿ ಎರಡು ವಿಸ್ಟಾಡೋಮ್ ಬೋಗಿಗಳಿದ್ದು, ಪ್ರತಿ ಬೋಗಿಯಲ್ಲಿ 44 ಆಸನ ಸಾಮರ್ಥ್ಯ ಇದೆ. ಜೊತೆಗೆ ಕೋಚ್‍ನಲ್ಲಿ ಸಿಸಿಟಿವಿ ಕಣ್ಗಾವಲು, ಅಗ್ನಿಶಾಮಕ ಸುರಕ್ಷತಾ ವ್ಯವಸ್ಥೆ ಇದೆ. ಸಕಲೇಶಪುರದಿಂದ ಸುಬ್ರಹ್ಮಣ್ಯದವರೆಗೆ ಹಾದುಹೋಗುವ 55 ಕಿ.ಮೀ. ರೈಲು ಮಾರ್ಗದ ಸೌಂದರ್ಯ ಸವಿಯಲು ಈ ರೈಲು ಪ್ರಯಾಣಿಕರನ್ನು ಕೈಬೀಸಿ ಕರೆಯುತ್ತಿದೆ.
Advertisement
ಈ ಸಂದರ್ಭದಲ್ಲಿ ಶಾಸಕರಾದ ವೇದವ್ಯಾಸ ಕಾಮತ್, ಜಿಲ್ಲಾಧಿಕಾರಿ ಡಾ. ರಾಜೇಂದ್ರ, ಮೇಯರ್ ಪ್ರೇಮಾನಂದ ಶೆಟ್ಟಿ, ಡಿ.ಆರ್ ಎಂ ಕೊಠಾರಿ, ಕಾರ್ಪೋರೇಟರ್, ಶೋಭಾ, ರೈಲ್ವೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.