ಕೋಲಾರ: ಪ್ರತಿಷ್ಟಿತ ಬಹುರಾಷ್ಟ್ರೀಯ ವಿಸ್ಟ್ರಾನ್ ಕಂಪನಿಯಲ್ಲಿ ನಡೆದ ದಾಂಧಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸುಮಾರು 11 ಸಾವಿರ ಪುಟಗಳ ಚಾರ್ಜ್ ಶೀಟ್‍ನ್ನ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. 7 ಸಾವಿರ ಕಾರ್ಮಿಕರನ್ನ ಆರೋಪಿಗಳನ್ನಾಗಿ ಪರಿಗಣಿಸಿರುವ ವೇಮಗಲ್ ಪೊಲೀಸರು 170 ಆರೋಪಿಗಳನ್ನ ಬಂಧಿಸಿದ್ದರು, 30 ಜನರನ್ನ ನ್ಯಾಯಾಲಯಕ್ಕೆ ಒಪ್ಪಿಸಿದ್ದು, ನಾಲ್ವರು ಷರತ್ತುಬದ್ದ ಜಾಮೀನು ಪಡೆದಿದ್ದಾರೆ ಎಂದು ಕೋಲಾರದಲ್ಲಿ ಎಸ್ಪಿ ಕಾರ್ತಿಕ್ ರೆಡ್ಡಿ ಅವರು ತಿಳಿಸಿದರು.
Advertisement
ಕೋಲಾರದ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿರುವ ಹೋಂಡಾ ಕಂಪನಿಗೆ ಕೇಂದ್ರ ವಲಯ ಐಜಿಪಿ ಚಂದ್ರಶೇಖರ್ ಭೇಟಿ ನೀಡಿದ್ದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿಸ್ಟ್ರಾನ್ ದಾಂಧಲೆ ಪ್ರಕರಣಕ್ಕೆ ಸಂಭಂದಿಸಿದಂತೆ ಇಬ್ಬರು ಎಎಸ್ಪಿಗಳು ತನಿಖೆ ನಡೆಸಿದ್ದು, ಹನ್ನೊಂದು ಸಾವಿರ ಪುಟಗಳ ಚಾರ್ಜ್ ಶೀಟ್‍ನ್ನ ನ್ಯಾಯಾಲಯಕ್ಕೆ ಸಲ್ಲಿಸಿರುವುದಾಗಿ ಹೇಳಿದರು. ಇನ್ನು ವಿಸ್ಟ್ರಾನ್ ದಾಂಧಲೆ ಪ್ರಕರಣದ ತನಿಖೆಯಲ್ಲಿ ಕಂಡು ಬಂದಂತೆ ವೇತನ, ಓಟಿ ವೇತನ ಸೇರಿದಂತೆ ಹಾಜರಾತಿ ಸಿಸ್ಟಮ್‍ನಲ್ಲಿ ಸಮಸ್ಯೆ ಇದ್ದ ಪರಿಣಾಮ, ಸಡೆನ್ ಪ್ರಿಪೇರ್ ನಿಂದಾಗಿ ಕಂಪನಿಯಲ್ಲಿ ಗಲಾಟೆ ಆಗಲು ಕಾರಣವಾಗಿದೆ ಎಂದರು. ಇದನ್ನೂ ಓದಿ: ವಿಸ್ಟ್ರಾನ್ ಕಂಪನಿಯಲ್ಲಿ ಮರು ನೇಮಕಾತಿ ಶುರು- ಕೆಲಸ ಪಡೆಯಲು ಏನೆಲ್ಲ ಮಾಡಬೇಕು?
Advertisement
Advertisement
ಅಲ್ಲದೆ ಹೊರಗಿನವರು ಸೇರಿದಂತೆ ಯಾವುದೇ ಬಾಹ್ಯ ಬೆಂಬಲದಿಂದ ದಾಂಧಲೆ ನಡೆದಿಲ್ಲ. ಯಾವುದೇ ಕುಮ್ಮಕ್ಕು ಇಲ್ಲ ಎನ್ನುವುದು ನಮ್ಮ ತನಿಖೆಯಿಂದ ಕಂಡುಬಂದಿದೆ ಎಂದು ತಿಳಿಸಿದರು. ಇನ್ನೂ ಡಿಸೆಂಬರ್ 12 ರಂದು ವಿಸ್ಟ್ರಾನ್ ಕಂಪನಿಯಲ್ಲಿ ದಾಂದಲೆ ನಡೆದಿತ್ತು, ಈ ಸಂಬಂಧ ವೇಮಗಲ್ ಪೊಲೀಸ್ ಠಾಣೆಯಲ್ಲಿ ಮೂರು ಪ್ರತ್ಯೇಕ ಪ್ರಕರಣಗಳು ದಾಖಲಾಗಿತ್ತು. ಇದನ್ನೂ ಓದಿ: ಐಫೋನ್ ಫ್ಯಾಕ್ಟರಿಯಲ್ಲಿ ದಾಂಧಲೆ – ಭಾರತ ವಿಸ್ಟ್ರಾನ್ ಕಂಪನಿ ಉಪಾಧ್ಯಕ್ಷನ ತಲೆದಂಡ