– ಮಾಲಿನ್ಯ ತಡೆಯಲು ಕ್ರಮ
ಬೆಂಗಳೂರು: ವೀಕೆಂಡ್ ನಲ್ಲಿ ಸಿಲಿಕಾನ್ ಸಿಟಿಯ ಹೈಫೈ ಏರಿಯಾಗೆ ಹೋಗುವ ಮುನ್ನ ಯೋಚಿಸಿ, ಚರ್ಚ್ ಸ್ಟ್ರೀಟ್ ನಲ್ಲಿ ಇನ್ನು ವೀಕೆಂಡ್ ವೆಹಿಕಲ್ಸ್ ನಿಷೇಧ ಮಾಡಲಾಗಿದೆ. ಹೀಗಾಗಿ ಇನ್ಮುಂದೆ ವಿಕೇಂಡ್ ಬಂತೆಂದು ಚರ್ಚ್ ಸ್ಟ್ರೀಟ್ ಕಡೆಗೆ ಗಾಡಿ ತಗೋಂಡು ಜಾಲಿ ರೌಂಡ್ ಹೋಗಲು ಆಗಲ್ಲ.
Advertisement
ಇಂದಿನಿಂದ ಫೆಬ್ರವರಿ 28ರ ವರೆಗೆ ಚರ್ಚ್ ಸ್ಟ್ರೀಟ್ ಕ್ಲೀನ್ ಏರ್ ಸ್ಟ್ರೀಟ್ ಎಂದು ಘೊಷಿಸಲಾಗಿದ್ದು, ಭಾರತದ ಮೊದಲ ಸ್ವಚ್ಛ ವಾಯು ಸ್ಟ್ರೀಟ್ ಚರ್ಚ್ ಸ್ಟ್ರೀಟ್ ಫಸ್ಟ್- ಟೆಸ್ಟ್ ಬೆಡ್ ಗೆ ಬೆಳಗ್ಗೆ 11ಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಚಾಲನೆ ನೀಡಿದ್ದಾರೆ. ಕಾಲ್ನಡಿಗೆಯಲ್ಲಿ ತೆರಳುವವರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ವಾಯು ಮಾಲಿನ್ಯ ಕಡಿಮೆ ಮಾಡಲು ಹೊಸ ಪ್ರಯೋಗ ಮಾಡಲಾಗುತ್ತಿದ್ದು, ಭೂ ಸಾರಿಗೆ ನಿರ್ದೇಶನಾಲಯ, ಡಲ್ಟ್(ಡೈರೆಕ್ಟರೇಟ್ ಆಫ್ ಅರ್ಬನ್ ಲ್ಯಾಂಡ್ ಟ್ರಾನ್ಸ್‍ಪೋರ್ಟ್) ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿ, ಪೊಲೀಸ್ ಇಲಾಖೆಗಳ ಸಹಯೋಗದಲ್ಲಿ ಈ ಯೋಜನೆ ರೂಪಿಸಲಾಗಿದೆ. ಅಲ್ಲದೆ ಚರ್ಚ್ ಸ್ಟ್ರೀಟ್ ನಲ್ಲಿ ಯುರೋಪ್ ಮಾದರಿಯನ್ನು ಅಳವಡಿಕೆ ಮಾಡಲಾಗುತ್ತದೆಯಂತೆ.
Advertisement
Advertisement
ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಗಮಿಸಿ ಚಾಲನೆ ನೀಡಿದ್ದಾರೆ. ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಸಾತ್ ನೀಡಿದ್ದಾರೆ. ಚರ್ಚ್ ಸ್ಟ್ರೀಟ್ ನ ರಸ್ತೆಗಳನ್ನು ಮುಖ್ಯಮಂತ್ರಿಗಳು ಪರಿಶೀಲಿಸಿದ್ದು, ಭಾರತದ ಮೊದಲ ಸ್ವಚ್ಛ ವಾಯು ಬೀದಿ(ಕ್ಲೀನ್ ಏರ್ ಸ್ಟ್ರೀಟ್) ಎಂದಿದ್ದಾರೆ. ಚರ್ಚ್ ಸ್ಟ್ರೀಟ್ ನಲ್ಲಿ ವೀಕೆಂಡ್ ನಲ್ಲಿ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ವಾರದಲ್ಲಿ ಎರಡು ದಿನ ಪಾದಚಾರಿಗಳ ಸಂಚಾರಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಸ್ವಚ್ಛ ಗಾಳಿ, ನೀರು ಪ್ರತಿಯೊಬ್ಬರ ಹಕ್ಕು. ಸೈಕಲ್ ಹೆಚ್ಚು ಉಪಯೋಗಿಸಿ, ನಡಿಯಿರಿ ಎಂದು ಸಿಎಂ ಸಲಹೆ ನೀಡಿದ್ದಾರೆ.
Advertisement
ಮಾಲಿನ್ಯರಹಿತ ಪರಿಸರ ನಿರ್ಮಾಣ ನಮ್ಮ ಗುರಿ. ಭಾರತದ ಮೊಟ್ಟ ಮೊದಲ ಸ್ವಚ್ಚ ವಾಯು ರಸ್ತೆ ಉಪಕ್ರಮವಾಗಿ ಚರ್ಚ್ ಸ್ಟ್ರೀಟ್ ಫಸ್ಟ್ – ‘ಟೆಸ್ಟ್ ಬೆಡ್’ ಅನ್ನು ಬೆಂಗಳೂರಿನ ಚರ್ಚ್ ಸ್ಟ್ರೀಟ್ ನಲ್ಲಿ ಇಂದು ಉದ್ಘಾಟಿಸಲಾಯಿತು. ನಗರಾಭಿವೃದ್ಧಿ ಸಚಿವರು, ಶಾಸಕರು, ಬಿ.ಬಿ.ಎಂ.ಪಿ ಆಡಳಿತಾಧಿಕಾರಿಗಳು ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. pic.twitter.com/RLD4ybt1Qc
— B.S. Yediyurappa (@BSYBJP) November 7, 2020
ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಮಾತನಾಡಿ, ಶನಿವಾರ ಹಾಗೂ ಭಾನುವಾರ ಎರಡು ದಿನ ಚರ್ಚ್ ಸ್ಟ್ರೀಟ್ ನಲ್ಲಿ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ. ಎರಡು ದಿನ ಈ ರಸ್ತೆಯಲ್ಲಿ ವಾಯುಮಾಲಿನ್ಯದ ಪ್ರಮಾಣ ಅಳೆಯಲಾಗುತ್ತೆದೆ. ನಂತರದ ದಿನಗಳಲ್ಲಿ ಹೆಚ್ಚಿನ ದಿನಗಳನ್ನು ವಿಸ್ತರಿಸುವ ಕುರಿತು ಚಿಂತಿಸಲಾಗುತ್ತದೆ. ಇದು ಮೊದಲ ಹಂತ, ನಂತರ ಬೇರೆ ಪ್ರದೇಶಗಳಲ್ಲಿ ವಿಸ್ತರಿಸಲು ಆಲೋಚನೆ ನಡೆಸಲಾಗುತ್ತಿದೆ ಎಂದರು.