ಕಲಬುರಗಿ: ಕೊರೊನಾ ಮೂರನೇ ಅಲೆ ಆತಂಕದ ಹಿನ್ನೆಲೆ ರಾಜ್ಯ ಸರ್ಕಾರ ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಘೋಷಣೆ ಮಾಡಿದೆ. ಕರ್ಫ್ಯೂ ಇರೋದರಿಂದ ಮಾರುಕಟ್ಟೆಗೆ ಗ್ರಾಹಕರು ಆಗಮಿಸದ ಹಿನ್ನೆಲೆಯಲ್ಲಿ ಕಲಬುರಗಿಯ ವರ್ತಕರು ತರಕಾರಿ ರಸ್ತೆಗೆ ಎಸೆದು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.
Advertisement
ಬೆಳಗ್ಗೆ 5 ಗಂಟೆಗೆ ಬಂದು ತರಕಾರಿ ಖರೀದಿ ಮಾಡಿದ್ದೇವೆ. ಆದ್ರೆ ವೀಕೆಂಡ್ ಕರ್ಫ್ಯೂ ಹಾಕಿದ್ದರಿಂದ ಮಾರುಕಟ್ಟೆಗೆ ಬರುವ ಜನರ ಸಂಖ್ಯೆ ಕಡಿಮೆಯಾಗಿದೆ. ಹಾಕಿದ ಬಂಡವಾಳವೂ ಬರುವ ನಿರೀಕ್ಷೆಗಳಿಲ್ಲ. ಸರ್ಕಾರ ಹೀಗೆ ದಿಢೀರ್ ನಿರ್ಧಾರ ತೆಗೆದುಕೊಳ್ಳುವುದು ಎಷ್ಟು ಸರಿ ಎಂದು ವ್ಯಾಪಾರಸ್ಥರು ಪ್ರಶ್ನೆ ಮಾಡಿದರು. ಸವತೆಕಾಯಿ, ಕೋತಂಬರಿ ಸೊಪ್ಪು, ಬದನೆಕಾಯಿ ರಸ್ತೆಗೆ ಎಸೆದ ದೃಶ್ಯಗಳು ಕಲಬುರಗಿಯ ಮಾರುಕಟ್ಟೆಯಲ್ಲಿ ಕಂಡು ಬಂದವು.
Advertisement
Advertisement
ಕೇರಳ ಮತ್ತು ಮಹಾರಾಷ್ಟ್ರದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆ ರಾಜ್ಯಗಳ ಗಡಿಗೆ ಹೊಂದಿಕೊಂಡಿರುವ 8 ಜಿಲ್ಲೆಗಳಲ್ಲಿ ವೀಕೆಂಡ್ ಕಫ್ರ್ಯೂ ಜಾರಿ ಮಾಡಿ ಆದೇಶ ಹೊರಡಿಸಿದ್ದಾರೆ. 8 ಜಿಲ್ಲೆಗಳಿಗೆ ಪ್ರತ್ಯೇಕವಾಗಿ ಪ್ರಕಟಿಸಲಾಗಿರುವ ವಾರಾಂತ್ಯ ಮಾರ್ಗಸೂಚಿ ಆಗಸ್ಟ್ 16ರವರೆಗೂ ಜಾರಿಯಲ್ಲಿ ಇರುತ್ತದೆ. ಇದೀಗ 8 ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿಯಾಗಿದೆ. ಅಲ್ಲದೇ, ಇಡೀ ರಾಜ್ಯಕ್ಕೆ ಅನ್ವಯ ಆಗುವಂತೆ ರಾತ್ರಿ ಕಫ್ರ್ಯೂ ಅವಧಿಯನ್ನು ಹೆಚ್ಚಿಸಲಾಗಿದೆ. ಇದನ್ನೂ ಓದಿ: ನೈಟ್ ಕರ್ಫ್ಯೂ- ಮೆಟ್ರೋ ಓಡಾಟ ಸಮಯದಲ್ಲಿ ಬದಲಾವಣೆ