ಪಣಜಿ: ರಾಜ್ಯದಲ್ಲಿರುವ ಎಲ್ಲರಿಗೂ ಕೊರೊನಾ ಲಸಿಕೆಯನ್ನು ನೀಡದೇ ಪ್ರವಾಸೋದ್ಯಮಕ್ಕೆ ಅವಕಾಶ ನೀಡುವುದಿಲ್ಲ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ತಿಳಿಸಿದ್ದಾರೆ.
Advertisement
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜುಲೈ 30ರೊಳಗೆ ಶೇ.100ರಷ್ಟು ಕೊರೊನಾ ವ್ಯಾಕ್ಸಿನ್ ಮೊದಲ ಡೋಸ್ ನನ್ನು ರಾಜ್ಯವ್ಯಾಪಿ ನೀಡುವ ಗುರಿಯನ್ನು ಗೋವಾ ಸರ್ಕಾರ ಹೊಂದಿದೆ. ಮೊದಲ ಡೋಸ್ ವ್ಯಾಕ್ಸಿನೇಷನ್‍ನನ್ನು ರಾಜ್ಯದಲ್ಲಿ ಪೂರ್ಣಗೊಳಿಸುವವರೆಗೆ ಪ್ರವಾಸೋದ್ಯಮವನ್ನು ಆರಂಭಿಸುವ ಯಾವುದೇ ಯೋಜನೆ ಇಲ್ಲ. ಜುಲೈ 30ರೊಳಗೆ ಅದನ್ನು ಪೂರ್ಣಗೊಳಿಸುವುದು ನಮ್ಮ ಗುರಿ ಎಂದು ಹೇಳಿದ್ದಾರೆ.
Advertisement
Advertisement
ಪ್ರವಾಸೋದ್ಯಮ ನಿರ್ದೇಶಕರಿಗೆ ಪ್ರಮೋದ್ ಸಾವಂತ್‍ರವರು ಗೋವಾ ಪ್ರವೇಶಕ್ಕಾಗಿ ಕಟ್ಟುನಿಟ್ಟಾದ ಮಾರ್ಗಸೂಚಿಗಳನ್ನು ಜಾರಿಗೊಳಿಸಬೇಕೆಂದು ಸೂಚಿಸಿದರು. ಪ್ರವಾಸಿಗರಿಗೆ ಸಂಪರ್ಕ ತಡೆ ಹಾಗೂ ನೃತ್ಯ, ಸಂಗೀತ ಕಾರ್ಯಕ್ರಮಗಳನ್ನು ಮಾರ್ಚ್ 2022ರವರೆಗೆ ಮುಂದೂಡಬೇಕೆಂದು ತಿಳಿಸಿದ್ದಾರೆ. ಇದನ್ನೂ ಓದಿ: ಒಎಲ್‌ಎಕ್ಸ್‌ನಲ್ಲಿ ಕಾರು ಖರೀದಿ ದೋಖಾ – ಅತ್ತ ಕಾರು ಇಲ್ಲ, ಹಣವೂ ಇಲ್ಲ