– ಜಿಲ್ಲಾಡಳಿತದಿಂದ ಎಚ್ಚರಿಕೆ
ಮಡಿಕೇರಿ: ಜಿಲ್ಲೆಯಲ್ಲಿ ಧಾರಾಕಾರವಾಗಿ ಮಳೆ ಆಗುತ್ತಿರುವುದರಿಂದ ಇಂದಿನಿಂದ ನಾಳೆ ಬೆಳಗ್ಗೆ 6 ಗಂಟೆ ವರೆಗೆ ರೆಡ್ ಅಲರ್ಟ್ ಘೋಷಿಸಿ ಜಿಲ್ಲಾಡಳಿತ ಆದೇಶ ನೀಡಿದೆ.
- Advertisement 2
ಜಿಲ್ಲೆಯಲ್ಲಿ ಮುಂಗಾರು ಮಳೆ ಚುರುಕಾಗಿದ್ದು, ವ್ಯಾಪಕವಾಗಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಅಗಸ್ಟ್ 6 ರಿಂದ ಆ.7 ಬೆಳಗ್ಗೆವರೆಗೆ ಆರೇಂಜ್ ಅಲರ್ಟ್, 7 ರಿಂದ 8 ರ ಬೆಳಗ್ಗೆವರಗೆ ಯೆಲ್ಲೋ ಅಲರ್ಟ್ ಹಾಗೆಯೇ 8 ರಿಂದ ಜುಲೈ10 ರವರೆಗೆ ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆ ಮೇರೆಗೆ ಜಿಲ್ಲಾಡಳಿತ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡಿದೆ.
- Advertisement 3
- Advertisement 4
ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳು ಇರುವುದರಿಂದ ಜಿಲ್ಲೆಯ ಜನತೆ ಎಚ್ವರಿಕೆಯಿಂದ ಇರಬೇಕು. ಒಂದು ವೇಳೆ ಪ್ರಾಕೃತಿಕ ವಿಕೋಪಗಳು ಸಂಭವಿಸಿದರೆ ಜಿಲ್ಲಾಡಳಿತದ ತುರ್ತು ದೂರವಾಣಿ ಸಂಖ್ಯೆ 08272-221077 ಸಂಪರ್ಕಿಸಲು ಜಿಲ್ಲಾಧಿಕಾರಿ ಅನೀಸ್.ಕೆ.ಜಾಯ್ ತಿಳಿಸಿದ್ದಾರೆ.