– ಸರ್ಕಾರದ ನಡೆಗೆ ಹೆಚ್‍ಡಿಕೆ ಆಕ್ರೋಶ
– ಬಿಜೆಪಿ ಆಳ್ವಿಕೆಯ ಕರ್ನಾಟಕದಲ್ಲಿ ಕನ್ನಡಿಗನೇ ಅನಾಥ: ಕಾಂಗ್ರೆಸ್
ಬೆಂಗಳೂರು: ಆರ್‍ಎಎಫ್ ಘಟಕಕ್ಕೆ ಕೇಂದ್ರ ಗೃಹ ಸಚಿವ ಶಂಕುಸ್ಥಾಪನೆ ಅಡಿಗಲ್ಲು ಫಲಕದಲ್ಲಿ ಕನ್ನಡ ಇಲ್ಲದಕ್ಕೆ ವಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿವೆ. ಸಾಮಾಜಿಕ ಜಾಲತಾಣದಲ್ಲಿ ರಾಜ್ಯ ಸರ್ಕಾರ ಮತ್ತು ಅಮಿತ್ ಶಾ ವಿರುದ್ಧ ಕನ್ನಡಿಗರು ಟ್ವೀಟ್ ಮೂಲಕ ಆಕ್ರೋಶ ಹೊರಹಾಕಿದ್ದಾರೆ.
ಹೆಚ್‍ಡಿಕೆ ಆಕ್ರೋಶ: ಶಿವಮೊಗ್ಗದ ಭದ್ರಾವತಿಯಲ್ಲಿ ಶನಿವಾರ ಆರ್‍ಎಎಫ್ ಘಟಕಕ್ಕೆ ಗೃಹಸಚಿವರಾದ ಅಮಿತ್ ಶಾ ಅವರು ಶಂಕುಸ್ಥಾಪನೆ ನೆರವೇರಿಸಿದ್ದು, ಅಡಿಗಲ್ಲು ಫಲಕ ಅನಾವರಣಗೊಳಿಸಿದ್ದಾರೆ. ಅಡಿಗಲ್ಲು ಫಲಕಗಳು ಹಿಂದಿ ಮತ್ತು ಆಂಗ್ಲಭಾಷೆಯಲ್ಲಿವೆ. ಇಲ್ಲಿ ಕನ್ನಡದ ಅವಗಣನೆ ನಿಚ್ಚಳವಾಗಿ ಕಾಣುತ್ತದೆ.
Advertisement
Advertisement
ವೈವಿಧ್ಯಮಯ ಭಾರತ ತ್ರಿಭಾಷಾ ಸೂತ್ರ ಅಳವಡಿಸಿಕೊಂಡಿದ್ದು, ಆಯಾ ರಾಜ್ಯ ಭಾಷೆ ಗೌರವಿಸುವುದು ಕೇಂದ್ರ ಸರ್ಕಾರದ ಕರ್ತವ್ಯ. ಗೃಹ ಸಚಿವರೇ ತ್ರಿಭಾಷಾ ಸೂತ್ರವನ್ನು ಧಿಕ್ಕರಿಸಿರುವುದು ಕನ್ನಡಕ್ಕೆ, ಕನ್ನಡಿಗರಿಗೆ ಮಾಡಿದ ಅಗೌರವ. ಈ ಸಂದರ್ಭದಲ್ಲಿ ರಾಜ್ಯದ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ನಾಡು-ನುಡಿಯ ಘನತೆಯನ್ನು ಮರೆತದ್ದು ಅತ್ಯಂತ ಖಂಡನೀಯ.
Advertisement
ಹಿಂದಿ-ಆಂಗ್ಲ ಭಾಷೆಯ ನಿಷ್ಠ ಧೋರಣೆಯಲ್ಲಿ ಕನ್ನಡ ಭಾಷೆಯನ್ನು ಅವಗಣನೆ ಮಾಡಿರುವ ಅಮಿತ್ ಶಾ ಅವರ ಧೋರಣೆ ಕನ್ನಡ ವಿರೋಧಿತನವನ್ನು ತೋರಿಸುತ್ತದೆ. ಇದು ಕನ್ನಡಿಗರ ಸ್ವಾಭಿಮಾನಕ್ಕೆ ಮಾಡಿದ ಅವಮಾನ.
Advertisement
Union Home Minister @AmitShah laid the foundation stone for the RAF unit in Bhadravathi of Shivamogga district on Saturday. But the inscription plaque unveiled on the occasion to mark the foundation stone laying is in only Hindi and English. It clearly shows…
1/8 pic.twitter.com/Lr981DhSpB
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) January 17, 2021
ಕೇಂದ್ರ ಸರ್ಕಾರದ ಅಧೀನದಲ್ಲಿರುವ ಆರ್‍ಎಎಫ್ ಘಟಕ ಸ್ಥಾಪನೆಗೆ ಕನ್ನಡದ ನೆಲವನ್ನೆ ಕೊಟ್ಟಿದ್ದು, ಈ ಪರಿಜ್ಞಾನವಿಲ್ಲದೆ ಕನ್ನಡದಲ್ಲಿ ಅಡಿಗಲ್ಲು ಫಲಕ ಇಲ್ಲದಿರುವುದು ಅಕ್ಷಮ್ಯ. ಅಮಿತ್ ಶಾ ಅವರು ತ್ರಿಭಾಷಾ ಸೂತ್ರ ಉಲ್ಲಂಘಿಸಿರುವುದಕ್ಕೆ ಕನ್ನಡಿಗರಿಗೆ ಸ್ಪಷ್ಟನೆ ನೀಡಬೇಕು. ನಾಡು-ನುಡಿಯ ಘನತೆಗೆ ಚ್ಯುತಿ ಬಂದಾಗ ಸಹಿಸಿಕೊಳ್ಳುವವರಿಗೆ ಈ ರಾಜ್ಯದ ಆಡಳಿತ ನಡೆಸುವ ಅರ್ಹತೆ ಇಲ್ಲ. ಕೇಂದ್ರದ ಗೃಹಸಚಿವರು, ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳ ನಡೆ ಕನ್ನಡಕ್ಕೆ ಬಗೆದ ದ್ರೋಹವಾಗಿದೆ.
"ಬಿಜೆಪಿ ಆಳ್ವಿಕೆಯ ಕರ್ನಾಟಕದಲ್ಲಿ ಕನ್ನಡಿಗನೇ ಅನಾಥ"
ನಾಡಧ್ವಜಕ್ಕೆ ಅವಮಾನ.
ಕನ್ನಡ ವಿವಿಗೆ ಅನುದಾನ ಕಡಿತ.
ಸಾಹಿತ್ಯ ಸಮ್ಮೇಳನಕ್ಕೆ ಅನುದಾನವಿಲ್ಲ.
ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ನಿರಾಕರಣೆ.
ಈಗ ಕಾರ್ಯಕ್ರಮದಲ್ಲಿ ಕನ್ನಡಕ್ಕೆ ಸಣ್ಣ ಸ್ಥಾನವಿಲ್ಲ.@BJP4Karnataka ನಾಡಿನ ಅಸ್ಮಿತೆ ಕೊಲ್ಲುವಂತೆ ನಾಗಪುರದ ಆದೇಶ ಪಾಲಿಸುತ್ತಿದ್ದೀರಾ? pic.twitter.com/dCOy30hdTq
— Karnataka Congress (@INCKarnataka) January 17, 2021
ಕಾಂಗ್ರೆಸ್ ಟ್ವೀಟ್: ಬಿಜೆಪಿ ಆಳ್ವಿಕೆಯ ಕರ್ನಾಟಕದಲ್ಲಿ ಕನ್ನಡಿಗನೇ ಅನಾಥ. ನಾಡಧ್ವಜಕ್ಕೆ ಅವಮಾನ. ಕನ್ನಡ ವಿವಿಗೆ ಅನುದಾನ ಕಡಿತ. ಸಾಹಿತ್ಯ ಸಮ್ಮೇಳನಕ್ಕೆ ಅನುದಾನವಿಲ್ಲ. ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ನಿರಾಕರಣೆ. ಈಗ ಕಾರ್ಯಕ್ರಮದಲ್ಲಿ ಕನ್ನಡಕ್ಕೆ ಸಣ್ಣ ಸ್ಥಾನವಿಲ್ಲ. ಬಿಜೆಪಿ ನಾಡಿನ ಅಸ್ಮಿತೆ ಕೊಲ್ಲುವಂತೆ ನಾಗಪುರದ ಆದೇಶ ಪಾಲಿಸುತ್ತಿದ್ದೀರಾ ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ.