ಬೆಂಗಳೂರು: ಬೆಟ್ಟದ ಹೂವು ಖ್ಯಾತಿಯ ನಟ ಶಂಖನಾದ ಅರವಿಂದ್ ಅವರಿಗೆ ಕೊರೊನಾ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಇಂದು ಮೃತಪಟ್ಟಿದ್ದಾರೆ.
ಶಂಖನಾದ ಅರವಿಂದ್ (70) ಕೊರೊನಾ ಸೋಂಕು ತಗುಲಿತ್ತು. ಕಳೆದ ಹತ್ತು ದಿನಗಳಿಂದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಉಸಿರಾಟದ ತೊಂದರೆ ಹೆಚ್ಚಾದ ಕಾರಣ ಇಂದು ಕೊನೆಯುಸಿರೆಳೆದಿದ್ದಾರೆ.
ಜನವರಿ 23ರಂದು ಅರವಿಂದ್ ಪತ್ನಿ ರಮಾ ಕೂಡ ಉಸಿರಾಟದ ತೊಂದರೆಯಿಂದ ಕೊನೆಯುಸಿರೆಳೆದ್ದರು. ರಮಾ ಕನ್ನಡ ಚಿತ್ರರಂಗದಲ್ಲಿ ಹಿನ್ನಲೆ ಗಾಯಕಿಯಾಗಿ ಗುರುತಿಸಿಕೊಂಡಿದ್ದರು. ಈ ಹಾಸ್ಯ ನಟ ಮೂರು ಮಕ್ಕಳನ್ನು ಅಗಲಿದ್ದಾರೆ.
70-80ರ ದಶಕದಲ್ಲಿ ಅರವಿಂದ್ ಬಹು ಬೇಡಿಕೆಯ ಕಲಾವಿದನಾಗಿ ಗುರುತಿಸಿಕೊಂಡಿದ್ದರು. ಕಾಶಿನಾಥ್ ಸಿನಿಮಾಗಳ ಮೂಲಕ ಪ್ರೇಕ್ಷಕರಿಗೆ ಚಿರಪರಿಚಿತರಾಗಿದ್ದರು. ಇತ್ತೀಚಿಗೆ ಕನ್ನಡದ ಕೆಲವೊಂದು ಧಾರಾವಾಹಿಗಳಲ್ಲಿಯೂ ಅಭಿನಯಿಸಿದ್ದರು. ಕನ್ನಡ ಚಿತ್ರರಂಗ ಇಂದು ಅರವಿಂದ್ ಅವರನ್ನು ಕಳೆದುಕೊಂಡಿದೆ. ಅರವಿಂದ್ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸೋಣ.