ಮುಂಬೈ: ಬಾಲಿವುಡ್ ನಟ ಬಿಗ್ ಬಿ ಅಮಿತಾಬ್ ಬಚ್ಚನ್ ಶನಿವಾರ ಅನಾರೋಗ್ಯದ ಕಾರಣದಿಂದ ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿರುವ ವಿಚಾರವನ್ನು ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.
78 ವರ್ಷದ ಅಮಿತಾಬ್ ಬಚ್ಚನ್ ಶಸ್ತಚಿಕಿತ್ಸೆ ಪೂರ್ಣಗೊಂಡಿದೆಯಾ ಇಲ್ಲವಾ? ಎಂಬ ವಿಚಾರವನ್ನು ಇನ್ನೂ ಬಹಿರಂಗ ಪಡಿಸಿಲ್ಲ. ಅಲ್ಲದೆ ನಿನ್ನೆ, ಆರೋಗ್ಯದ ಸ್ಥಿತಿ ಮತ್ತು ಶಸ್ತ್ರ ಚಿಕಿತ್ಸೆ ಕುರಿತಂತೆ ಬರೆಯಲು ಸಾಧ್ಯವಿಲ್ಲ ಎಂದು ಬ್ಲಾಗ್‍ನಲ್ಲಿ ಕ್ಯಾಪ್ಷನ್ ಹಾಕಿದ್ದರು.
ಈ ವಿಚಾರ ವೈರಲ್ ಆಗುತ್ತಿದ್ದಂತೆಯೇ ಅಭಿಮಾನಿಗಳು ಅಮಿತಾಬ್ ಬಚ್ಚನ್ ಶೀಘ್ರವೇ ಚೇತರಿಸಿಕೊಳ್ಳಲಿ ಎಂದು ಸೋಶಿಯಲ್ ಮೀಡಿಯಾದಲ್ಲಿ ಹಾರೈಸುತ್ತಿದ್ದಾರೆ. ಈ ಮುನ್ನ ಜುಲೈನಲ್ಲಿ ಅಮಿತಾಬ್ ಬಚ್ಚನ್, ಅಭಿಷೇಕ್ ಬಚ್ಚನ್, ಐಶ್ವರ್ಯ ರೈ ಬಚ್ಚನ್, ಮೊಮ್ಮಗಳು ಆರಾಧ್ಯ ಕೋವಿಡ್ ಸೋಂಕಿಗೆ ಒಳಗಾಗಿ ಮುಂಬೈನ ನಾನಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದರು.
ಸದ್ಯ ಅಮಿತಾಬ್ ಬಚ್ಚನ್ ನಟ ಅಜಯ್ ದೇವ್‍ಗನ್ ಮತ್ತು ರಕುಲ್ ಪ್ರೀತ್ ಸಿಂಗ್ ಅಭಿನಯಿಸುತ್ತಿರುವ ಮೇ ಡೇ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಅಲ್ಲದೆ ನಟ ರಣ್‍ಬೀರ್ ಕಪೂರ್ ಹಾಗೂ ಅಲಿಯಾ ಭಟ್ ಅಭಿನಯದ ಬ್ರಹ್ಮಾಸ್ತ್ರ ಸಿನಿಮಾದಲ್ಲಿ ಕೂಡ ಬಣ್ಣ ಹಚ್ಚಿದ್ದಾರೆ.
View this post on Instagram