– ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ವಾಹನ
ಕೋಲಾರ: ಚಾಲಕನ ನಿಯಂತ್ರಣ ತಪ್ಪಿ ಶಾಲಾ ವಾಹನ ಪಲ್ಟಿಯಾಗಿದ್ದು, 15ಕ್ಕೂ ಹೆಚ್ಚು ಮಕ್ಕಳಿಗೆ ಗಾಯವಾಗಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಸೀಗೇನಹಳ್ಳಿ ಗೇಟ್ ಬಳಿ ನಡೆದಿದೆ.
ಮುಳಬಾಗಿಲು ಪಟ್ಟಣದ ಶ್ರೀ ಸಾಯಿ ಇಂಟರ್ ನ್ಯಾಷನಲ್ ಶಾಲೆಯ ವಾಹನ ಅಪಘಾತಕ್ಕಿಡಾಗಿದೆ. ನಂಗಲಿಯಿಂದ ಶಾಲೆಗೆ ಮಕ್ಕಳನ್ನು ಶಾಲಾ ವಾಹನದಲ್ಲಿ ಕರೆದೊಯ್ತಿದ್ದ ವೇಳೆ ಟಾಟಾ ಸುಮೋ ಪಲ್ಟಿಯಾಗಿದೆ. ಈ ವೇಳೆ ವಾಹನದಲ್ಲಿದ್ದ 15ಕ್ಕೂ ಹೆಚ್ಚು ಮಕ್ಕಳಿಗೆ ಗಾಯಗಳಾಗಿವೆ. ಗಾಯಾಳು ಮಕ್ಕಳನ್ನು ಕೋಲಾರ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ನಂಗಲಿ, ವಡ್ಡಹಳ್ಳಿ ಗ್ರಾಮದಿಂದ ಶಾಲೆಗೆ ತೆರಳುತ್ತಿದ್ದ 6ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದರು. ಅಪಘಾತದಲ್ಲಿ ಯಾವುದೇ ಪ್ರಾಣಹಾನಿ ಇಲ್ಲ, ಚಾಲಕ ಸೇರಿ, ಕೆಲ ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳಾಗಿವೆ. ಗಾಯಾಳು ವಿದ್ಯಾರ್ಥಿಗಳು ಕೋಲಾರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮುಳಬಾಗಿಲು ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ.