ಬೆಂಗಳೂರು: ಶಾಸಕ ಜಮೀರ್ ಅಹಮದ್ ನಿವಾಸದ ಮೇಲೆ ಐಟಿ ದಾಳಿಗೆ ಐಎಂಎ ಪ್ರಕರಣದ ಲಿಂಕ್ ಇದೆಯಾ ಎಂಬ ಅನುಮಾನ ಮೂಡಿದೆ. ಐಎಂಎ ವಂಚನೆ ಪ್ರಕರಣದಲ್ಲಿ ಜಮೀರ್ ಅಹಮದ್ ಅವರ ಹೆಸರು ಸಹ ಕೇಳಿ ಬಂದಿತ್ತು. ಐಎಂಎ ಪ್ರಕರಣದ ರೂವಾರಿ ಮನ್ಸೂರ್ ಅಲಿ ಖಾನ್ ಜೊತೆ ಜಮೀರ್ ಅಹ್ಮದ್ ವ್ಯವಹಾರ ನಡೆಸಿದ್ದಕ್ಕೆ ಐಟಿ ದಾಳಿ ನಡೆದಿದೆಯಾ ಎಂಬ ಪ್ರಶ್ನೆಯೊಂದು ಮೂಡಿದೆ.
Advertisement
ಮನ್ಸೂರ್ ಅಲಿ ಖಾನ್ ಗೆ ಜಮೀರ್ ಅಹ್ಮದ್ ಖಾನ್ ಬೆಂಗಳೂರಿನ ಪ್ರತಿಷ್ಠಿತ ಏರಿಯಾದಲ್ಲಿಯ ನಿವೇಶನ ಮಾರಾಟ ಮಾಡಿದ್ದರು. ಐಎಂಎ ವಂಚನೆ ಪ್ರಕರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ ತಮಗೆ ಲಭ್ಯವಾದ ಕೆಲ ದಾಖಲೆಗಳನ್ನು ಆದಾಯ ತೆರಿಗೆ ಇಲಾಖೆಗೆ ವರ್ಗಾಯಿಸಿದ್ದ ಬೆನ್ನಲ್ಲೇ ಈ ದಾಳಿ ನಡೆದಿದೆ ಎನ್ನಲಾಗಿದೆ. ಶಾಸಕರಾಗಿರುವ ಜಮೀರ್ ಅಹ್ಮದ್ ವಿದೇಶದಲ್ಲಿ ಕ್ಯಾಸಿನೋ ಬಾರ್ ಗಳು, ಸೇರಿದಂತೆ ಬೇರೆ ಬೇರೆ ವ್ಯವಹಾರಗಳು ನಡೆಸ್ತಿರೊ ಬಗ್ಗೆ ಮಾಹಿತಿ ಐಟಿ ಇಲಾಖೆಗೆ ಲಭ್ಯವಾಗಿದ್ದ ಎನ್ನಲಾಗಿದೆ.
Advertisement
Advertisement
ಬೆಂಗಳೂರಿನ ಕಂಟೋನ್ಮೆಂಟ್ ರೈಲ್ವೇ ನಿಲ್ದಾಣದ ಬಳಿಯಲ್ಲಿರುವ ನೂತನ ಬಂಗಲೆ, ಯುಬಿಸಿಟಿಯಲ್ಲಿರು ಫ್ಲ್ಯಾಟ್, ಕಲಾಸಿಪಾಳ್ಯದಲ್ಲಿಯ ನ್ಯಾಷನಲ್ ಟ್ರಾವೆಲ್ ಕಚೇರಿ ಮತ್ತು ದೆಹಲಿ, ಮುಂಬೈನಲ್ಲಿರುವ ಕಚೇರಿಗಳ ಮೇಲೆ ಐಟಿ ದಾಳಿ ನಡೆದಿರುವ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.
Advertisement
ಐಟಿ ದಾಳಿ ವೇಳೆ ಜಮೀರ್ ಅಹ್ಮದ್ ನಿವಾಸದಲ್ಲಿದ್ದಾರೆ ಎಂದು ಹೇಳಲಾಗುತ್ತಿದ್ದು, ಅಧಿಕಾರಿಗಳು ಶಾಸಕರು ಸೇರಿದಂತೆ ಕುಟುಂಬಸ್ಥರ ಮೊಬೈಲ್ ಗಳನ್ನು ವಶಕ್ಕೆ ಪಡೆದುಕೊಂಡು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಒಟ್ಟು 50 ಅಧಿಕಾರಿಗಳ ತಂಡ ಮೊದಲು ದಾಳಿ ನಡೆಸಿತ್ತು. ಇತ್ತೀಚೆಗೆ ಜಮೀರ್ ಅಹ್ಮದ್ ಮಗಳ ಮದುವೆಯನ್ನು ಅತ್ಯಂತ ಅದ್ಧೂರಿಯಾಗಿ ಮಾಡಿದ್ದರು. ಇದನ್ನೂ ಓದಿ: ಶಾಸಕ ಜಮೀರ್ ಅಹ್ಮದ್ ನಿವಾಸದ ಮೇಲೆ ಐಟಿ ದಾಳಿ