ತುಮಕೂರು: ತುರುವೇಕೆರೆ ಶಾಸಕ ಮಸಾಲೆ ಜಯರಾಮ್ ಪುತ್ರ ತೇಜು ಮೇಲೆ ಹಲ್ಲೆ ನಡೆದಿದೆ. ಬೆಂಗಳೂರಿನಿಂದ ತುರುವೇಕೆರೆಯ ಅಂಕಲಕೊಪ್ಪ ಗ್ರಾಮಕ್ಕೆ ಬರುತ್ತಿದ್ದ ವೇಳೆ ಗುಬ್ಬಿ ತಾಲೂಕಿನ ನೆಟ್ಟೆಕೆರೆ ಕ್ರಾಸ್ ಬಳಿ ಶಾಸಕರ ಪುತ್ರನ ಮೇಲೆ ಹಲ್ಲೆ ನಡೆದಿದೆ.
ವೀರಣ್ಣಗುಡಿ ಗ್ರಾಮದ ರಾಮ, ಅವ್ವೇರಹಳ್ಳಿ ಗ್ರಾಮದ ಕೃಷ್ಣ ಮತ್ತು ಧನಂಜಯ್ಯ ಸೇರಿದಂತೆ ಹಲವರಿಂದ ಹಲ್ಲೆ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಹಲ್ಲೆ ಬಳಿಕ ಆರೋಪಿಗಳು ಕಾರ್ ನ್ನು ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ. ಕಾರಿನಲ್ಲಿ ಮಚ್ಚು, ಲಾಂಗ್ ಮತ್ತು ಖಾರದ ಪುಡಿ ಸಿಕ್ಕಿದೆ ಎಂದು ತಿಳಿದು ಬಂದಿದೆ.
ಹಲ್ಲೆ ನಡೆಸಿದವರು ಜೆಡಿಎಸ್ ಮಾಜಿ ಶಾಸಕ ಎಂ.ಟಿ ಕೃಷ್ಣಪ್ಪ ಬೆಂಬಲಿಗರು ಎಂಬ ಗಂಭೀರವಾದ ಆರೋಪ ಕೇಳಿ ಬಂದಿವೆ. ಈಗಾಗಲೇ ಘಟನೆ ಸಂಬಂಧ ಸಿ.ಎಸ್ ಪುರ ಪೊಲೀಸರಿಂದ ಮೂವರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.