ಮಂಗಳೂರು: ಶಾಸಕ ಯು.ಟಿ ಖಾದರ್ ಅವರ ಗನ್‍ಮ್ಯಾನ್‍ಗೂ ಕೊರೊನಾ ಪಾಸಿಟಿವ್ ಬಂದಿದ್ದು, ಇಂದು ದೃಢಪಟ್ಟಿದೆ.
ಯು.ಟಿ ಖಾದರ್ ಅವರಿಗೆ ಗನ್‍ಮ್ಯಾನ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಮಂಗಳೂರು ಡಿಎಆರ್ ಪೊಲೀಸ್ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. ಇದರಿಂದ ಭಯಗೊಂಡ ಖಾದರ್ ಅವರು ನಾಲ್ಕು ಬಾರಿ ಕೊರೊನಾ ಪರೀಕ್ಷೆ ಮಾಡಿಸಿದ್ದು, ನಾಲ್ಕು ಬಾರಿಯೂ ವರದಿ ನೆಗೆಟಿವ್ ಬಂದಿದೆ.
ಇಂದು ಕೊರೊನಾ ಪಾಸಿಟಿವ್ ಬಂದ ಗನ್‍ಮ್ಯಾನ್ ಖಾದರ್ ಜೊತೆ ಬೆಂಗಾವಲು ವಾಹನದಲ್ಲಿದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಆದರೆ ಕಳೆದ ಹತ್ತು ದಿನದ ಹಿಂದೆ ಅನಾರೋಗ್ಯ ಎಂದು ಮನೆಯಲ್ಲಿದ್ದ ಪೊಲೀಸ್ ಪೇದೆಗೆ ಕೊರೊನಾ ಟೆಸ್ಟ್ ಮಾಡಿಸಲಾಗಿತ್ತು. ಇಂದು ಬಂದ ವರದಿಯಲ್ಲಿ ಅವರಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಆತನ ಜೊತೆ ಕಾರ್ಯನಿರ್ವಹಿಸುತ್ತಿದ್ದ ಉಳಿದ ಮೂವರು ಪೊಲೀಸರನ್ನು ಕ್ವಾರಂಟೈನ್ ಮಾಡಲಾಗಿದೆ.