ಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿ ಶಾಸಕ ಟಿ.ಡಿ ರಾಜೇಗೌಡರ ಹೆಸರಿನಲ್ಲಿ 23 ದೇವಾಲಯಗಳಲ್ಲಿ ಪೂಜೆ ಸಲ್ಲಿಸಲಾಗಿದೆ.
ಶಾಸಕರಿಗೆ ಕೊರೊನಾ ಸೋಂಕು ತಗುಲಿದ್ದು, ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೀಗಾಗಿ ಶಾಸಕರು ಶೀಘ್ರವೇ ಗುಣಮುಖರಾಗಲೆಂದು ಕೊಪ್ಪ ಪಟ್ಟಣ ಸೇರಿದಂತೆ ಕೊಪ್ಪ ತಾಲೂಕಿನ 23 ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಪ್ರಮುಖ ದೇವಾಲಯಗಳಲ್ಲಿ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರು ಪೂಜೆ ಸಲ್ಲಿಸಿದ್ದಾರೆ.
ಪಟ್ಟಣ ಹಾಗೂ ತಾಲೂಕಿನ ವಿವಿಧ ದೇವಾಲಯಗಳಲ್ಲಿ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರು ಪೂಜೆ ಸಲ್ಲಿಸಿ ಆದಷ್ಟು ಬೇಗ ಕರೊನಾ ವೈರಸ್‍ನಿಂದ ದೇಶ ವಿಮುಕ್ತಿಗೊಳ್ಳಲಿ ಎಂದು ಬೇಡಿಕೊಂಡಿದ್ದಾರೆ. ರಾಜ್ಯಾದ್ಯಂತ ಹೆಚ್ಚಾಗಿ ರಾಜಕಾರಣಿಗಳಿಗೂ ಹೆಮ್ಮಾರಿ ಕೊರೊನಾ ವೈರಸ್ ಕಾಡುತ್ತಿದೆ. ಕೊರೊನಾ ಸೋಂಕಿಗೆ ಗುರಿಯಾದ ಪ್ರತಿಯೊಬ್ಬ ರಾಜಕಾರಣಿಯೂ ತ್ವರಿತಗತಿಯಲ್ಲಿ ಗುಣಮುಖರಾಗಲೆಂದು ಕಾಂಗ್ರೆಸ್ ಕಾರ್ಯಕರ್ತರು ದೇವರನ್ನ ಬೇಡಿಕೊಂಡಿದ್ದಾರೆ.
ಬ್ಲಾಕ್ ಕಾಂಗ್ರೆಸ್ ವತಿಯಿಂದ ನಡೆದ ಈ ಪೂಜಾ ಕಾರ್ಯಕ್ರಮದಲ್ಲಿ ಪಟ್ಟಣ ಹಾಗೂ ತಾಲೂಕಿನ 23 ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಪ್ರಮುಖ ದೇವಾಲಯಗಳಲ್ಲಿ ಕಾಂಗ್ರೆಸ್ ಶಾಸಕ ಟಿ.ಡಿ ರಾಜೇಗೌಡರ ಹೆಸರಿನಲ್ಲಿ ಪೂಜೆ ಸಲ್ಲಿಸಲಾಗಿದೆ. ಜಾತಿ ಹಾಗೂ ಧರ್ಮ ಭೇದವನ್ನು ಮರೆತು ಕೊರೋನ ಸೋಂಕು ದೇಗಿವನ್ನ ಕಾಡುತ್ತಿದೆ. ಹಾಗಾಗಿ ಕಾಂಗ್ರೆಸ್ ವತಿಯಿಂದ ದೇವಸ್ಥಾನಗಳಲ್ಲಿ ಶಾಸಕರ ಹೆಸರಿನಲ್ಲಿ ಪೂಜೆ ಸಲ್ಲಿಸಲಾಗಿದೆ.
ಕೇವಲ ಶಾಸಕ ರಾಜೇಗೌಡ ಹೆಸರಿನಲ್ಲಿ ಪೂಜೆ ಸಲ್ಲಿಸದೆ ಇಂದು ಕೊರೊನಾ ಎಲ್ಲಾ ಪಕ್ಷದ ಶಾಸಕರು, ಮುಖಂಡರನ್ನೂ ಕಾಡುತ್ತಿದೆ. ಆದ್ದರಿಂದ ಬಿ.ಜೆ.ಪಿ ಹಾಗೂ ಜೆ.ಡಿ.ಎಸ್ ಪಕ್ಷದ ಮುಖಂಡರಿಗೂ ಸೋಂಕು ತಗುಲಿದೆ. ಆದ್ದರಿಂದ ಎಲ್ಲಾ ಪಕ್ಷದ ಶಾಸಕರು, ಮುಖಂಡರು ಕೂಡ ಬೇಗ ಗುಣಮುಖರಾಗಿ ಸಾರ್ವಜನಿಕ ಸೇವೆಗೆ ಮರಳಲಿ ಎಂದು ಪ್ರಾರ್ಥಿಸಿಕೊಂಡಿರುವುದಾಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಹೇಳಿದ್ದಾರೆ.