ಬೆಂಗಳೂರು: ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ ಹಾಗೂ ಅವರ ಪತ್ನಿಗೂ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.
ಕೊರೊನಾ ಪಾಸಿಟಿವ್ ವರದಿ ದೃಢಪಟ್ಟಿರುವ ಕುರಿತು ಶಾಸಕ ಶರತ್ ಬಚ್ಚೇಗೌಡ ಅವರೇ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದಾರೆ. ಈ ಕುರಿತು ಟ್ವಿಟ್ಟರ್ ನಲ್ಲಿ ವಿಡಿಯೋ ಟ್ವೀಟ್ ಮಾಡಿರುವ ಶರತ್ ಬಚ್ಚೇಗೌಡ ಅವರು, ತಮ್ಮೊಂದಿಗೆ ಸಂಪರ್ಕದಲ್ಲಿರುವ ಇತರರು ಕೋವಿಡ್ ಲಕ್ಷಣ ಕಂಡು ಬಂದರೆ ಟೆಸ್ಟ್ ಮಾಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.
Advertisement
ಜುಲೈ 6 ಸೋಮವಾರ ದಂದು, ನನಗೆ ಸ್ವಲ್ಪ ಮೈ ಕೈ ನೋವು ಕಾಣಿಸಿಕೊಂಡಿತ್ತು. ನಿರಂತರವಾಗಿ ನನ್ನ ಕ್ಷೇತ್ರದ ಕಾರ್ಯಗಳಲ್ಲಿ ತೊಡಗಿದ್ದರಿಂದ ಮತ್ತು ಕೊರೊನಾ ಪೀಡಿತ ಪ್ರದೇಶಗಳಿಗೂ ಭೇಟಿ ಕೊಟ್ಟಿದ್ದರಿಂದ, ಕೋವಿಡ್ 19 ಪರೀಕ್ಷೆಗೆ ನಾನು ಮತ್ತು ನನ್ನ ಧರ್ಮಪತ್ನಿ ಶ್ರೀಮತಿ ಪ್ರತಿಭಾ ಶರತ್ ಒಳಗಾಗಿದ್ದು, (1/3 ) pic.twitter.com/jdgh0jsDtJ
— Sharath Bachegowda (@SBG4Hosakote) July 8, 2020
Advertisement
ಪೋಸ್ಟ್‌ನಲ್ಲಿ ಏನಿದೆ ?:
Advertisement
ಜುಲೈ 6 ಸೋಮವಾರದಂದು ನನಗೆ ಸ್ವಲ್ಪ ಮೈ ಕೈ ನೋವು ಕಾಣಿಸಿಕೊಂಡಿತ್ತು. ನಿರಂತರವಾಗಿ ನನ್ನ ಕ್ಷೇತ್ರದ ಕಾರ್ಯಗಳಲ್ಲಿ ತೊಡಗಿದ್ದರಿಂದ ಮತ್ತು ಕೊರೊನಾ ಪೀಡಿತ ಪ್ರದೇಶಗಳಿಗೂ ಭೇಟಿ ನೀಡಿದ್ದೆ. ಆದ್ದರಿಂದ ನಾನು ಮತ್ತು ನನ್ನ ಧರ್ಮಪತ್ನಿ ಶ್ರೀಮತಿ ಪ್ರತಿಭಾ ಶರತ್ ಅವರು ಕೋವಿಡ್ 19 ಪರೀಕ್ಷೆಗೆ ಒಳಗಾಗಿದ್ದೇವು. ಇವತ್ತು ಸಂಜೆ ಇಬ್ಬರಿಗೂ ಪಾಸಿಟಿವ್ ಎಂದು ಫಲಿತಾಂಶ ಬಂದಿದೆ ಎಂದು ತಿಳಿಸಿದ್ದಾರೆ.
Advertisement
ಇವತ್ತು ಸಂಜೆ ಇಬ್ಬರಿಗೂ ಪಾಸಿಟಿವ್ ಎಂದು ಫಲಿತಾಂಶ ಬಂದಿದೆ. ನಿಮಗೆ ಕೊರೋನಾದ ಯಾವುದೇ ಲಕ್ಷಣಗಳು ಕಂಡುಬಂದಲ್ಲಿ ಆದರೂ ವೈದ್ಯರ ಸಲಹೆ ಪಡೆದುಕೊಂಡು ಅಗತ್ಯ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇವೆ. ಮನೆಯಲ್ಲಿಯೇ ಕ್ವಾರಂಟೈನ್ ಗೆ ಒಳಪಟ್ಟಿದ್ದೀವಿ.
ಈಗಾಗಲೇ ನನ್ನನ್ನು ಭೇಟಿಯಾದ ವ್ಯಕ್ತಿಗಳ ವಿವರವನ್ನು ಸರಕಾರಿ ಅಧಿಕಾರಿಗಳಿಗೆ ಕೊಟ್ಟಿರುವೆ.(2/3)
— Sharath Bachegowda (@SBG4Hosakote) July 8, 2020
ನಮಗೆ ಕೊರೊನಾದ ಯಾವುದೇ ಲಕ್ಷಣಗಳು ಕಂಡು ಬಂದಿಲ್ಲ. ಆದರೂ ವೈದ್ಯರ ಸಲಹೆ ಪಡೆದುಕೊಂಡು ಅಗತ್ಯ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇವೆ. ಮನೆಯಲ್ಲಿಯೇ ಕ್ವಾರಂಟೈನ್‍ಗೆ ಒಳಪಟ್ಟಿದ್ದೇವೆ. ಈಗಾಗಲೇ ನನ್ನನ್ನು ಭೇಟಿಯಾದ ವ್ಯಕ್ತಿಗಳ ವಿವರವನ್ನು ಸರ್ಕಾರಿ ಅಧಿಕಾರಿಗಳಿಗೆ ನೀಡಿದ್ದೇನೆ. ಆದರೂ ನನ್ನನ್ನು ಭೇಟಿಯಾದವರಲ್ಲಿ ಯಾರಿಗಾದರೂ ಕೋವಿಡ್ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ಪರೀಕ್ಷೆ ಮಾಡಿಸಲು ವಿನಂತಿಸುತ್ತೇನೆ. ರೋಗ ನಿರೋಧಕ ಶಕ್ತಿಯು ನಮ್ಮಲ್ಲಿ ಪ್ರಬಲವಾಗಿದೆ ಮತ್ತು ನಿಮ್ಮ ಆಶೀರ್ವಾದ ನಮ್ಮ ಮೇಲೆ ಇರುವುದರಿಂದ ಬೇಗ ಗುಣಮುಖ ಆಗುತ್ತೇವೆ ಎಂದು ತಿಳಿಸಿದ್ದಾರೆ.
ಉಳಿದಂತೆ ಜುಲೈ 4 ರಂದು ಮಾಜಿ ಪ್ರಧಾನಿ ದೇವೇಗೌಡರನ್ನ ಶರತ್ ಬಚ್ಚೇಗೌಡ ಭೇಟಿಯಾಗಿದ್ದರು. ದೇವೇಗೌಡ ಅವರ ನಿವಾಸಕ್ಕೆ ಭೇಟಿ ನೀಡಿದ್ದ ಶರತ್ ಅವರು, ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಕ್ಕೆ ಅವರಿಗೆ ಅಭಿನಂದನೆ ಸಲ್ಲಿಸಿದ್ದರು.
ಇಂದು ಮಾಜಿ ಪ್ರಧಾನಿ, ಜೆಡಿಎಸ್ ವರಷ್ಠರಾದ ಶ್ರೀ ಎಚ್.ಡಿ. ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ, ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಕ್ಕೆ ಅಭಿನಂದನೆ ಸಲ್ಲಿಸಿ, ಅವರ ಆಶೀರ್ವಾದ ಪಡೆದ ಕ್ಷಣ. pic.twitter.com/y6XwdmKaa5
— Sharath Bachegowda (@SBG4Hosakote) July 4, 2020