ಇಸ್ಲಾಮಾಬಾದ್: ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಶಾಹಿದ್ ಅಫ್ರಿದಿ ಅವರಿಗೆ ಕೊರೊನಾ ವೈರಸ್ ತಗುಲಿರುವುದು ದೃಢಪಟ್ಟಿದೆ.
ಈ ವಿಚಾರವನ್ನು 40 ವರ್ಷ ಅಫ್ರಿದಿ ಟ್ವಿಟರ್ ನಲ್ಲಿ ಹಂಚಿಕೊಂಡಿದ್ದು, ಬಹುಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥನೆ ಮಾಡಿ ಎಂದು ಅಭಿಮಾನಿಗಳಿಗೆ ಕೇಳಿಕೊಂಡಿದ್ದಾರೆ. “ನಾನು ಗುರುವಾರದಿಂದ ಅನಾರೋಗ್ಯದಿಂದ ಬಳಲುತ್ತಿದ್ದೇನೆ. ತೀವ್ರವಾಗಿ ನೋವು ಅನುಭವಿಸುತ್ತಿರುವೆ. ನನಗೆ ಕೊರೊನಾ ಟೆಸ್ಟ್ ಮಾಡಿದಾಗ ದುರದೃಷ್ಟವಶಾತ್ ರಿಪೋರ್ಟ್ ಪಾಸಿಟಿವ್ ಬಂದಿದೆ. ಶೀಘ್ರವೇ ಚೇತರಿಸಿಕೊಳ್ಳುವಂತೆ ಪ್ರಾರ್ಥನೆ ಮಾಡಿ” ಎಂದು ಅಫ್ರಿದಿ ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ.
Advertisement
I’ve been feeling unwell since Thursday; my body had been aching badly. I’ve been tested and unfortunately I’m covid positive. Need prayers for a speedy recovery, InshaAllah #COVID19 #pandemic #hopenotout #staysafe #stayhome
— Shahid Afridi (@SAfridiOfficial) June 13, 2020
Advertisement
ಪಾಕಿಸ್ತಾನದಲ್ಲಿ ಹೆಮ್ಮಾರಿ ಕೊರೊನಾಗೆ ಇಬ್ಬರು ಕ್ರಿಕೆಟಿಗರು ಬಲಿಯಾಗಿದ್ದಾರೆ. ಅಷ್ಟೇ ಅಲ್ಲದೆ 2003ರ ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನ ತಂಡದ ಪರ ಆಡಿದ್ದ ಅನುಭವಿ ವಿಕೆಟ್‍ಕೀಪರ್, ಬ್ಯಾಟ್ಸ್‌ಮನ್ ತೌಫಿಕ್ ಉಮರ್ ಅವರಿಗೂ ಕೊರೊನಾ ವೈರಸ್ ತಗಲಿತ್ತು. ಅವರಿಗೆ ಚಿಕಿತ್ಸೆ ಫಲಕಾರಿಯಾಗಿದ್ದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
Advertisement
ಹೆಮ್ಮಾರಿ ಕೊರೊನಾಗೆ ಏಪ್ರಿಲ್‍ನಲ್ಲಿ ಜಾಫರ್ ಸರ್ಫರಾಜ್ ಬಲಿಯಾಗಿದ್ದರೆ, ಇದೇ ತಿಂಗಳು 2ರಂದು ರಿಯಾಝ್ ಶೇಖ್ ಸೋಂಕಿನಿಂದ ಮೃತಪಟ್ಟಿದ್ದರು. ಪಾಕಿಸ್ತಾನ ಪ್ರಥಮ ದರ್ಜೆ ಕ್ರಿಕೆಟರ್ ಆಗಿದ್ದ ಜಾಫರ್ ಸರ್ಫರಾಜ್, ಪಾಕಿಸ್ತಾನದ ಅಂಡರ್-19 ಮತ್ತು ಅಂತಾರಾಷ್ಟ್ರೀಯ ಎರಡು ತಂಡಕ್ಕೂ ಕೋಚ್ ಆಗಿ ಕಾರ್ಯನಿರ್ವಹಿಸಿದ್ದರು. ಸೋಂಕು ಕಾಣಿಸಿಕೊಂಡ ಹಿನ್ನೆಲೆ ಅವರನ್ನು ಪೇಶಾವರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದರು. ಈ ಮೂಲಕ ಕೊರೊನಾ ಸೋಂಕಿಗೆ ಬಲಿಯಾದ ಮೊದಲ ಕ್ರಿಕೆಟರ್ ಆಗಿದ್ದಾರೆ.
Advertisement
ರಿಯಾಝ್ 1987ರಿಂದ 2005ರವರೆಗೆ 43 ಪ್ರಥಮದರ್ಜೆ ಪಂದ್ಯಗಳನ್ನು ಆಡಿದ್ದು, ದೇಶಿ ಟೂರ್ನಿಗಳಲ್ಲಿ 25 ಲಿಸ್ಟ್ ‘ಎ’ ಪಂದ್ಯಗಳನ್ನು ಆಡಿದ್ದಾರೆ. ಸ್ಪಿನ್ ಬೌಲರ್ ಆಗಿದ್ದ ರಿಯಾಝ್ ಶೇಖ್, ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಮೊಹ್ಸೀನ್ ಖಾನ್ ಅವರ ಕ್ರಿಕೆಟ್ ಅಕಾಡೆಮಿಯಲ್ಲಿ ಮುಖ್ಯ ಕೋಚ್ ಆಗಿ ಕೆಲಸ ಮಾಡುತ್ತಿದ್ದರು.