– ಕನ್ನಡದಲ್ಲಿಯೇ ಜನತೆಗೆ ಧನ್ಯವಾದ ಅರ್ಪಣೆ
ನವದೆಹಲಿ: ತುಮಕೂರಿನ ಶಿರಾ ಹಾಗೂ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿದ್ದು, ಪ್ರಧಾನಿ ಮೋದಿ ಕೂಡ ಕನ್ನಡದಲ್ಲಿಯೇ ಟ್ವೀಟ್ ಮಾಡಿ ಜನತೆಗೆ ಧನ್ಯವಾದವನ್ನು ಸಮರ್ಪಿಸಿದ್ದಾರೆ.
ಕರ್ನಾಟಕದ ಶಿರಾ ಮತ್ತು ರಾಜರಾಜೇಶ್ವರಿನಗರದಲ್ಲಿ @BJP4Karnataka ಗೆಲುವು ಸಾಧಿಸಿರುವುದು ಅತ್ಯಂತ ವಿಶೇಷವಾದದ್ದು.
ಕೇಂದ್ರ ಹಾಗೂ @BSYBJP ಜೀ ಅವರ ನೇತೃತ್ವದ ರಾಜ್ಯ ಸರ್ಕಾರದ ಸುಧಾರಣಾ ಕಾರ್ಯಸೂಚಿಗಳ ಮೇಲೆ ಜನರು ಹೊಂದಿರುವ ಸ್ಥಿರ ವಿಶ್ವಾಸವನ್ನು ಇದು ಪುನ:ದೃಢೀಕರಿಸುತ್ತದೆ.
— Narendra Modi (@narendramodi) November 10, 2020
Advertisement
ಟ್ವಿಟ್‍ನಲ್ಲಿ ಪ್ರಧಾನಿ ಹೇಳಿದ್ದೇನು..?
ಕರ್ನಾಟಕದ ಶಿರಾ ಮತ್ತು ರಾಜರಾಜೇಶ್ವರಿನಗರದಲ್ಲಿ ಬಿಜೆಪಿ ಗೆಲುವು ಸಾಧಿಸಿರುವುದು ಅತ್ಯಂತ ವಿಶೇಷವಾದದ್ದು. ಕೇಂದ್ರ ಹಾಗೂ ಬಿಎಸ್‍ವೈ ಜೀ ಅವರ ನೇತೃತ್ವದ ರಾಜ್ಯ ಸರ್ಕಾರದ ಸುಧಾರಣಾ ಕಾರ್ಯಸೂಚಿಗಳ ಮೇಲೆ ಜನರು ಹೊಂದಿರುವ ಸ್ಥಿರ ವಿಶ್ವಾಸವನ್ನು ಇದು ಪುನ:ದೃಢೀಕರಿಸುತ್ತದೆ. ಅಲ್ಲದೆ ನಮ್ಮ ಕಾರ್ಯಕರ್ತರ ಶ್ರಮ ಹಾಗೂ ಜನರ ಬೆಂಬಲಕ್ಕೆ ನನ್ನ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.
Advertisement
ನಮ್ಮ ಕಾರ್ಯಕರ್ತರ ಶ್ರಮ ಹಾಗೂ ಜನರ ಬೆಂಬಲಕ್ಕೆ ನನ್ನ ಧನ್ಯವಾದಗಳು.
— Narendra Modi (@narendramodi) November 10, 2020
Advertisement
ಈ ಹಿಂದೆ ಗೃಹ ಸಚಿವ ಅಮಿತ್ ಶಾ ಕೂಡ ಕನ್ನಡದಲ್ಲಿಯೇ ಧನ್ಯವಾದ ತಿಳಿಸಿದ್ದರು. ಬಿಜೆಪಿಗೆ ನಿರಂತರ ಬೆಂಬಲ ನೀಡುತ್ತಿರುವ ಕರ್ನಾಟಕಕ್ಕೆ ಧನ್ಯವಾದಗಳು. ಉಪಚುನಾವಣೆಯಲ್ಲಿನ ಅಭೂತಪೂರ್ವ ಗೆಲುವಿಗಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಪಕ್ಷದ ಕಾರ್ಯಕರ್ತರನ್ನು ಅಭಿನಂದಿಸುತ್ತೇನೆ. ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಡಿ ರಾಜ್ಯವು ಅಭಿವೃದ್ಧಿ ಸಾಧಿಸಲಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರಾಜರಾಜೇಶ್ವರಿ ನಗರದಲ್ಲಿ ಕುಸುಮಾಗೆ ಸೋಲು – ಕಾಂಗ್ರೆಸ್ ಹಿನ್ನಡೆಗೆ ಕಾರಣ ಏನು?
Advertisement
ಬಿಜೆಪಿಗೆ ನಿರಂತರ ಬೆಂಬಲ ನೀಡುತ್ತಿರುವ ಕರ್ನಾಟಕಕ್ಕೆ ಧನ್ಯವಾದಗಳು.
ಉಪಚುನಾವಣೆಯಲ್ಲಿನ ಅಭೂತಪೂರ್ವ ಗೆಲುವಿಗಾಗಿ ಮುಖ್ಯಮಂತ್ರಿ @BSYBJP ಜೀ, ಶ್ರೀ @nalinkateel & @BJP4Karnataka ಕಾರ್ಯಕರ್ತರನ್ನು ಅಭಿನಂದಿಸುತ್ತೇನೆ.
ಪ್ರಧಾನಿ ಶ್ರೀ @narendramodi ಅವರ ಮಾರ್ಗದರ್ಶನದಡಿ ರಾಜ್ಯವು ಅಭಿವೃದ್ಧಿ ಸಾಧಿಸಲಿದೆ.
— Amit Shah (@AmitShah) November 10, 2020
ಆರ್‍ಆರ್ ನಗರದಲ್ಲಿ ಕಾಂಗ್ರೆಸ್ಸಿನಿಂದ ಬಿಜೆಪಿ ಸೇರ್ಪಡೆಯಾಗಿ ಚುನಾವಣಾ ಕಣದಲ್ಲಿದ್ದ ಮುನಿರತ್ನ 1,25,990 ಮತ ಪಡೆಯುವ ಮೂಲಕ ಹ್ಯಾಟ್ರಿಕ್ ಗೆಲುವು ದಾಖಲಿಸಿದ್ದಾರೆ. ಸಮೀಪದ ಪ್ರತಿ ಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಹೆಚ್. 67,877 ಮತ ಪಡೆದಿದ್ದಾರೆ. ಶಿರಾ ಕ್ಷೇತ್ರದಲ್ಲಿ ಬಿಜೆಪಿಯ ರಾಜೇಶ್ ಗೌಡ 76,564 ಮತ ಪಡೆದು ಐತಿಹಾಸಿಕ ದಾಖಲೆ ಬರೆದಿದ್ದಾರೆ. ಇದನ್ನೂ ಓದಿ: ಆರ್‌ಆರ್‌ನಗರ ಕುರುಕ್ಷೇತ್ರ ಗೆದ್ದ ಮುನಿರತ್ನ – ಗೆಲುವಿಗೆ ಕಾರಣವಾಗಿದ್ದು ಏನು?