– ಕೊರೊನಾ ಮುಕ್ತರಾಗಿ ಕೆಪಿಸಿಸಿ ಕಚೇರಿಗೆ ಡಿಕೆಶಿ
ಬೆಂಗಳೂರು; ಕೊರೊನಾ ಸೋಂಕಿನಿಂದ ಗುಣಮುಖರಾಗಿ ಮೊದಲ ಬಾರಿಗೆ ಕೆಪಿಸಿಸಿ ಕಚೇರಿಗೆ ಬಂದ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು, ಶಿರಾ ಉಪಚುನಾವಣೆಗೆ ಅಭ್ಯರ್ಥಿಯನ್ನು ಆಯ್ಕೆ ಮಾಡಿದ್ದಾರೆ
ಇಂದು ಶಿರಾ ಬೈ ಎಲೆಕ್ಷನ್ ಸಂಬಂಧ ಕೆಪಿಸಿಸಿ ಕಚೇರಿಯಲ್ಲಿ ತುಮಕೂರು ಜಿಲ್ಲೆಯ ಕಾಂಗ್ರೆಸ್ ಮುಖಂಡರ ಜೊತೆ ಡಿಕೆಶಿ ಸಭೆ ಮಾಡಿದ್ದರು. ಈ ಸಭೆಯಲ್ಲಿ ಮಾಜಿ ಸಚಿವ ಟಿಬಿ ಜಯಚಂದ್ರ, ಕೆ.ಎನ್ ರಾಜಣ್ಣ, ಷಡಾಕ್ಷರಿ, ಚಂದ್ರಪ್ಪ ಅವರು ಭಾಗವಹಿಸಿದ್ದರು. ಈ ಸಭೆಯಲ್ಲಿ ಶಿರಾ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಯನ್ನಾಗಿ ಟಿ.ಬಿ ಜಯಚಂದ್ರ ಅವರನ್ನು ಆಯ್ಕೆ ಮಾಡಲಾಗಿದೆ. ಇದನ್ನು ಓದಿ: ದೇವೇಗೌಡರ ಪಕ್ಷದಲ್ಲಿ ಟಿಕೆಟ್ ಪಡೆಯಲು ದುಡ್ಡು ಕೊಡಬೇಕು: ಕೆ.ಎನ್.ರಾಜಣ್ಣ
Advertisement
ಈ ವಿಚಾರವಾಗಿ ಮಾತನಾಡಿದ ಡಿಕೆಶಿ, ತುಮಕೂರು ಜಿಲ್ಲೆಯ ನಾಯಕರ ಜೊತೆ ಸಭೆ ಮಾಡಿದ್ದೇವೆ. ಶಿರಾ ಉಪ ಚುನಾವಣೆಯನ್ನು ಪರಮೇಶ್ವರ್ ಅವರ ನೇತೃತ್ವತ್ವದಲ್ಲಿ ನಡೆಸುತ್ತೇವೆ. ರಾಜಣ್ಣ ಕೋ ಚೇರ್ಮನ್ ಆಗಿ ಸಾಥ್ ಕೊಡುತ್ತಾರೆ. ಪಕ್ಷದ ಅಭ್ಯರ್ಥಿಯಾಗಿ ಜಯಚಂದ್ರ ಇರುತ್ತಾರೆ. ರಾಜಣ್ಣನವರೇ ಜಯಚಂದ್ರ ಹೆಸರು ಸೂಚಿಸಿದ್ದಾರೆ. ಅವರ ಅಭಿಪ್ರಾಯವನ್ನು ನಾವು ಪಡೆದಿದ್ದೇವೆ. ನಮ್ಮ ವರಿಷ್ಠರಿಗೆ ಇದನ್ನೇ ಕಳಿಸಿಕೊಡುತ್ತೇವೆ. ಇಂದಿನಿಂದಲೇ ಚುನಾವಣೆ ಕಾರ್ಯ ಪ್ರಾರಂಭ ಮಾಡುತ್ತೇವೆ ಎಂದು ತಿಳಿಸಿದರು.
Advertisement
Advertisement
ಇಂದು ಬೆಳಗ್ಗೆ ತಾನೇ ಈ ವಿಚಾರವಾಗಿ ಮಾಧ್ಯಮಗಳ ಜೊತೆ ಮಾತನಾಡಿದ್ದ ರಾಜಣ್ಣ, ನಾನು ಕೂಡ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ಕೆಪಿಸಿಸಿ ಅಧ್ಯಕ್ಷರ ಜೊತೆ ಮಾತನಾಡಿ ಬಂದಿದ್ದೇನೆ. ಶಿರಾ ಕ್ಷೇತ್ರದಲ್ಲಿ ಹಿಂದುಳಿದ ಸಮುದಾಯಕ್ಕೆ ಟಿಕೆಟ್ ಕೊಡಬೇಕು ಅನ್ನೋದು ನನ್ನ ಅಭಿಪ್ರಾಯ. ಪಕ್ಷ ಅಭ್ಯರ್ಥಿಗಳಿಗೆ ಟಿಕೆಟ್ ಕೊಡುವ ಜೊತೆಗೆ ಚುನಾವಣೆಗಾಗಿ ದುಡ್ಡು ಕೂಡ ಕೊಡಬೇಕು ಎಂದು ಹೇಳಿದ್ದರು. ಆದರೆ ಸಭೆ ನಂತರ ಅಧ್ಯಕ್ಷರ ಅಭಿಪ್ರಾಯಕ್ಕೆ ನಾವೆಲ್ಲರೂ ಸಾಥ್ ನೀಡುತ್ತೇವೆ ಎಂದು ಉಲ್ಟಾ ಹೊಡೆದಿದ್ದಾರೆ.