ಬೆಂಗಳೂರು: ಶಿರಾ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ಅವರಿಗೆ ಕೊರೊನಾ ಸೋಂಕು ತಗುಲಿದೆ.
ಇಂದು ಮಧ್ಯಾಹ್ನ ತೀವ್ರ ಕೆಮ್ಮು ಕಾಣಿಸಿಕೊಂಡು ಹಿನ್ನೆಲೆ ಕೊರೊನಾ ಪರೀಕ್ಷೆಗೆ ಒಳಗಾಗಿದ್ದರು. ವರದಿಯಲ್ಲಿ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿದ್ದು, ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಟಿ.ಬಿ.ಜಯಚಂದ್ರ ಅವರ ಪತ್ನಿ ನಿರ್ಮಲಾರಿಗೂ ಕೊರೊನಾ ಸೋಂಕು ತಗುಲಿದೆ. ಕಳೆದ ಕೆಲ ದಿನಗಳಿಂದ ತಮ್ಮ ಸಂಪರ್ಕದಲ್ಲಿದವರು ಆರೋಗ್ಯದ ಬಗ್ಗೆ ಮುಂಜಾಗ್ರತೆ ತೆಗೆದುಕೊಳ್ಳುವದರ ಜೊತೆಗೆ ಕೊರೊನಾ ಪರೀಕ್ಷೆಗೆ ಒಳಗಾಗಿ ಎಂದು ಟಿ.ಬಿ.ಜಯಚಂದ್ರ ಮನವಿ ಮಾಡಿಕೊಂಡಿದ್ದಾರೆ.
Advertisement
Advertisement
ಶಿರಾ ಉಪಚುನಾವಣೆ ಫಲಿತಾಂಶ ನಾಳೆಯೇ ಪ್ರಕಟವಾಗಲಿದೆ. ಈ ಬಾರಿ ಶಿರಾದಲ್ಲಿ ಕಾಂಗ್ರೆಸ್, ಜೆಡಿಎಸ್ ಮತ್ತು ಬಿಜೆಪಿ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿತ್ತು. ತುಮಕೂರಿನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮುಂಜಾನೆ 7 ಗಂಟೆಗೆ ಸ್ರ್ಟಾಂಗ್ ರೂಂ ತೆರಯಲಿದ್ದು, 8 ಗಂಟೆಯಿಂದ ಮತ ಎಣಿಕೆ ಆರಂಭವಾಗಲಿದೆ. ಮತ ಎಣಿಕಾ ಕೇಂದ್ರದ ಸುತ್ತ ಮೂರು ಸುತ್ತಿನ ಭದ್ರತೆ ನಿಯೋಜಿಸಿದ್ದು, ಸೆಂಟ್ರಲ್ ಆರ್ಮಡ್ ಫೊರ್ಸ್ ಕಾರ್ಯನಿರ್ವಹಿಲಿದೆ. 2 ಕೆ.ಎಸ್.ಆರ್.ಪಿ, ಮೂರು ಡಿವೈಎಸ್ಪಿ, ಸಿಪಿಐ, ಪಿಎಸ್‍ಐ ಗಳು ಸೇರಿದಂತೆ ಒಟ್ಟು 200ಕ್ಕೂ ಹೆಚ್ಚು ಪೊಲೀಸರನ್ನ ಬಂದೋಬಸ್ತ್ ಗೆ ನಿಯೋಜಿಸಲಾಗಿದೆ.
Advertisement
ಶಿರಾ ಉಪ ಚುನಾವಣೆ ಮತ ಎಣಿಕೆಗೆ ಸಕಲ ಸಿದ್ಧತೆhttps://t.co/zZ9FmZCys4#Sira #SiraByElection #BJP #Congress #JDS #KarnatakaPolitics #ByElection #KannadaNews #ByElectionResults
— PublicTV (@publictvnews) November 9, 2020
Advertisement