ಶಿವನ ಪೂಜೆ ಮಾಡೋದು ಹೇಗೆ? ವ್ರತದ ಮಹತ್ವ ಏನು?

Public TV
1 Min Read
SHIVARATRI 3

ಇಂದು ಮಹಾಶಿವರಾತ್ರಿ ಹಬ್ಬವನ್ನು ಭಾರತಾದ್ಯಂತ ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಕೊರೊನಾ ಹಿನ್ನೆಲೆ ಸರ್ಕಾರ ಕೆಲವು ನಿಯಮಗಳನ್ನ ಜಾರಿಗೆ ತಂದಿದ್ದು, ಹೆಚ್ಚು ಜನರು ಸೇರದಂತೆ ಸೂಚನೆ ನೀಡಿದೆ. ಹಾಗಾಗಿ ಮನೆಯಲ್ಲಿಯೇ ಸರಳವಾಗಿ ಶಿವನ ಪೂಜೆ ಮಾಡೋದು ಉತ್ತಮ. ಶಿವನ ಪೂಜೆ ಮತ್ತು ಉಪವಾಸ ವ್ರತದ ಮಹತ್ವ ಇಲ್ಲಿದೆ.

SHIVARATRI 4

ಶಿವನ ಪೂಜೆ ಮಾಡುವುದು ಹೇಗೆ:
ಮಹಾಶಿವರಾತ್ರಿ ದಿನ ಹಸುವಿನ ತುಪ್ಪದ ಜೊತೆ ಕರ್ಪೂರವನ್ನು ಬೆರೆಸಿ ಮೃತ್ಯುಂಜಯ ಮಂತ್ರವನ್ನು ಪಠಿಸಬೇಕು. ಈ ದಿನ ರುದ್ರಾಕ್ಷಿಯ ಮಾಲೆ ಧರಿಸಿದರೆ ಒಳ್ಳೆಯದಾಗುತ್ತದೆ ಎಂದು ಹೇಳಲಾಗುತ್ತದೆ. ಹಸಿ ಹಾಲಿನಲ್ಲಿ ಗಂಗಾ ಜಲವನ್ನು ಬೆರೆಸಿ ಶಿವನಿಗೆ ಅಭಿಷೇಕ ಮಾಡಬೇಕು. ನಂತರ ಚಂದನ, ಹೂ, ದೀಪ ಹಾಗೂ ಧೂಪ ಹಚ್ಚಿ ಪೂಜೆ ಮಾಡಬೇಕು.

mys shiva pooje 1

ವ್ರತದ ಮಹತ್ವ:
ಮಹಾಶಿವರಾತ್ರಿ ಹಬ್ಬದಂದು ವ್ರತ ಮಾಡುವುದರಿಂದ ಪಾಪ ದೂರ ಆಗುತ್ತದೆ ಹಾಗೂ ಆತ್ಮ ಶುದ್ಧ ಆಗುತ್ತದೆ. ಎಲ್ಲೆಲ್ಲಿ ಶಿವಲಿಂಗವನ್ನು ಸ್ಥಾಪಿಸಲಾಗುತ್ತದೋ ಅಲ್ಲಿ ಶಿವ ಖಂಡಿತವಾಗಿಯೂ ಇರುತ್ತಾನೆ ಎಂಬುದು ಜನರ ನಂಬಿಕೆ. ಮಹಾಶಿವರಾತ್ರಿ ಇಡೀ ದಿನ ಶ್ರದ್ಧೆಯಿಂದ ವ್ರತ ಮಾಡಿದರೆ, ಶಿವ ಎಲ್ಲ ಕಷ್ಟಗಳನ್ನು ದೂರ ಮಾಡುತ್ತಾನೆ ಎನ್ನುವ ನಂಬಿಕೆಯಿದೆ. ಮಹಾಶಿವರಾತ್ರಿ ದಿನ ಮಾಡುವ ವ್ರತ ಪ್ರಭಾವಶಾಲಿ ಎಂದು ಹಿರಿಯರು ಹೇಳುತ್ತಾರೆ.

SHIVARATRI 2

ಶಿವನನ್ನು ಪ್ರಸನ್ನಗೊಳಿಸಲು ಮಹಾಶಿವರಾತ್ರಿ ಇಡೀ ದಿನ ಜನರು ಉಪವಾಸವಿರುತ್ತಾರೆ. ಕೆಲವರು ಇಡೀ ದಿನ ಅನ್ನ ಹಾಗೂ ನೀರು ಸೇವಿಸದೇ ಉಪವಾಸ ಮಾಡಿದರೆ, ಮತ್ತೆ ಕೆಲವರು ಹಣ್ಣು, ಡ್ರೈ ಫ್ರೂಟ್ಸ್ ಮಾತ್ರ ಸೇವಿಸುತ್ತಾರೆ.

Share This Article