ಶಿವಮೊಗ್ಗ: ಕೊರೊನಾ ಎರಡನೇ ಅಲೆ ದೇಶವ್ಯಾಪಿ ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಇಂದಿನಿಂದ 4 ದಿನಗಳ ಕಾಲ ಲಸಿಕಾ ಉತ್ಸವ ನಡೆಸುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಅದರಂತೆ ಶಿವಮೊಗ್ಗದಲ್ಲಿ ಲಸಿಕಾ ಉತ್ಸವಕ್ಕೆ ಚಾಲನೆ ನೀಡಲಾಯಿತು.
ಶಿವಮೊಗ್ಗದ ತುಂಗಾನಗರ ನಗರ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಲಸಿಕಾ ಉತ್ಸವಕ್ಕೆ ಚಾಲನೆ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರ ಸೂಚನೆ ಮೇರೆಗೆ ಲಸಿಕಾ ಉತ್ಸವ ಹಮ್ಮಿಕೊಳ್ಳಲಾಗಿದ್ದು, ಪ್ರತಿದಿನ 10 ಸಾವಿರ ಮಂದಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದರು.
ಜಿಲ್ಲೆಯಲ್ಲಿ ಸದ್ಯದ ಮಟ್ಟಿಗೆ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಮುಖ ಇದೆ. ಆದರೆ ಮುಂದಿನ ದಿನಗಳಲ್ಲಿ ಇದು ಹೆಚ್ಚಾಗುವ ಸಂಭವ ಸಹ ಇದೆ. ಹೀಗಾಗಿ ಸಾರ್ವಜನಿಕರು ಆದಷ್ಟು ಕೊರೊನಾ ನಿಯಂತ್ರಿಸಲು ಸರ್ಕಾರ ಜಾರಿಗೊಳಿಸಿರುವ ನಿಯಮಗಳನ್ನು ಪಾಲಿಸಬೇಕು ಎಂದರು.