ಶಿವಮೊಗ್ಗ ಜಿಲ್ಲೆಯಲ್ಲಿ ವಾರಾಂತ್ಯ ಕರ್ಫ್ಯೂ ಕಟ್ಟುನಿಟ್ಟಿನಿಂದ ಜಾರಿ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

Public TV
1 Min Read
K B Shivakumar

ಶಿವಮೊಗ್ಗ: ಜಿಲ್ಲೆಯಲ್ಲಿ ಶುಕ್ರವಾರ ಸಂಜೆ 7 ರಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ವಾರಾಂತ್ಯ ಕರ್ಫ್ಯೂ ಕಟ್ಟುನಿಟ್ಟಿನಿಂದ ಜಾರಿಗೊಳಿಸಲು ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ.

ವಾರಾಂತ್ಯ ಕರ್ಫ್ಯೂ ಅವಧಿಯಲ್ಲಿ ಅವಶ್ಯಕ ಮತ್ತು ತುರ್ತು ಚಟುವಟಿಕೆಗಳನ್ನು ಹೊರತುಪಡಿಸಿ ಬೇರೆಲ್ಲಾ ಚಟುವಟಿಕೆಗಳಿಗೆ ನಿರ್ಬಂಧ ವಿಧಿಸಲಾಗಿದೆ. ದಿನದ 24 ಗಂಟೆ ಕಾರ್ಯ ನಿರ್ವಹಿಸಬೇಕಾದ, ತುರ್ತು ಹಾಗೂ ಅವಶ್ಯಕ ಸೇವೆಗಳನ್ನು ಒದಗಿಸುವ ಎಲ್ಲಾ ಕೈಗಾರಿಕೆಗಳು, ಕಂಪನಿಗಳು ಮತ್ತು ಸಂಸ್ಥೆಗಳು ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ. ಅಂತಹ ಸಂಸ್ಥೆಗಳು ಸಿಬ್ಬಂದಿಗಳಿಗೆ ಕಡ್ಡಾಯವಾಗಿ ಗುರುತಿನ ಚೀಟಿಯನ್ನು ಒದಗಿಸಿರಬೇಕು. ಟೆಲಿಕಾಂ ಮತ್ತು ಇಂಟರ್ ನನೆಟ್ ಸೇವೆ ಒದಗಿಸುವ ಸಂಸ್ಥೆಗಳ ಸಿಬ್ಬಂದಿಗಳ ವಾಹನ ಸಂಚಾರಕ್ಕೆ ಅವಕಾಶವಿದೆ.

Shivamogga 2

ಆಸ್ಪತ್ರೆಗೆ ತೆರಳಬೇಕಾದ ರೋಗಿಗಳು, ಕೋವಿಡ್ ಲಸಿಕೆ ಪಡೆಯಲು ತೆರಳುವವರ ಸಂಚಾರಕ್ಕೆ ಅನುಮತಿಯಿದೆ. ದಿನಸಿ, ತರಕಾರಿ, ಹಾಲು ಅವಶ್ಯಕ ವಸ್ತುಗಳ ಮಾರಾಟ ಮಳಿಗೆಗಳಿಗೆ ವ್ಯಾಪಾರ ವಹಿವಾಟು ನಡೆಸಲು ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ರವರೆಗೆ ಅವಕಾಶವಿದೆ. ತಳ್ಳುವ ಗಾಡಿ ಮಾರಾಟಗಾರರು ಸಹ ಈ ಅವಧಿಯಲ್ಲಿ ವ್ಯಾಪಾರ ಮಾಡಬಹುದು. ಮದ್ಯ ಮಾರಾಟ ಅಂಗಡಿಗಳಿಂದ ಪಾರ್ಸೆಲ್ ಮಾತ್ರ ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ರವರೆಗೆ ಕೊಂಡೊಯ್ಯಬಹುದು. ಎಲ್ಲಾ ರೀತಿಯ ಸಾಮಾಗ್ರಿಗಳ ಹೋಂ ಡೆಲಿವರಿಗೆ ದಿನವಿಡೀ ಅವಕಾಶವಿದೆ. ರೆಸ್ಟೋರೆಂಟ್ ಗಳಲ್ಲಿ ಪಾರ್ಸೆಲ್ ಗೆ ಮಾತ್ರ ಅವಕಾಶವಿದೆ. ಇದನ್ನೂ ಓದಿ: ಜಿಯೋದಿಂದ ಬರುತ್ತೆ ಕಡಿಮೆ ಬೆಲೆಯ ಸ್ಮಾರ್ಟ್‌ಫೋನ್‌ – ಬೆಲೆ ಎಷ್ಟು? ವಿಶೇಷತೆ ಏನು? ಕಡಿಮೆ ಬೆಲೆಗೆ ಹೇಗೆ ಸಿಗುತ್ತೆ?

shivamogga

ಈಗಾಗಲೇ ನಿಗದಿಯಾಗಿರುವ ವಿವಾಹ ಕಾರ್ಯಕ್ರಮವನ್ನು ಸರ್ಕಾರದ ಮಾರ್ಗಸೂಚಿ ಪ್ರಕಾರ 40 ಮಂದಿಗೆ ಮೀರದಂತೆ ಮನೆಯಲ್ಲಿ ನೆರವೇರಿಸಬಹುದು. ಕೋವಿಡ್ ಮಾರ್ಗಸೂಚಿಯನ್ನು ಪಾಲಿಸಿಕೊಂಡು ಗರಿಷ್ಟ 5 ಮಂದಿಗೆ ಸೀಮಿತವಾಗಿ ಅಂತ್ಯಸಂಸ್ಕಾರ ನಡೆಸಲು ಅನುಮತಿ ನೀಡಲಾಗಿದೆ. ಸಾರ್ವಜನಿಕರು ಸರ್ಕಾರದ ಮಾರ್ಗಸೂಚಿಯನ್ನು ಕಟ್ಟುನಿಟ್ಟಿನಿಂದ ಪಾಲಿಸುವಂತೆ ಜಿಲ್ಲಾಧಿಕಾರಿ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಇದನ್ನೂ ಓದಿ: ನನಗೂ ಸಿಎಂ ಆಗುವ ಅವಕಾಶ ಸಿಗಬಹುದು: ತನ್ವೀರ್ ಸೇಠ್

Share This Article
Leave a Comment

Leave a Reply

Your email address will not be published. Required fields are marked *