ಶಿವಮೊಗ್ಗ: ನಗರದಲ್ಲಿ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಯೋಜನೆ ಕಾಮಗಾರಿಯನ್ನು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪ ಪರಿಶೀಲನೆ ನಡೆಸಿದರು.
ಬಳಿಕ ಮಾತನಾಡಿದ ಬೈರತಿ ಬಸವರಾಜ್, ಶಿವಮೊಗ್ಗ ನಗರದಲ್ಲಿ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಕಾಮಗಾರಿಗಳು ಉತ್ತಮವಾಗಿ ನಡೆಯುತ್ತಿವೆ. ಶಿವಮೊಗ್ಗ ಮಲೆನಾಡು ಪ್ರದೇಶ ಆಗಿರುವುದರಿಂದ ಮಳೆ ಸಹ ಹೆಚ್ಚಿರುತ್ತದೆ. ಹೀಗಾಗಿಯೇ ಕಾಮಗಾರಿಯನ್ನು ಶೀಘ್ರವಾಗಿ ಮುಗಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಕೋವಿಡ್ ಸಂಕಷ್ಟ, ಲಾಕ್‍ಡೌನ್ ನಿಂದಾಗಿ ಕೂಲಿ ಕಾರ್ಮಿಕರ ಕೊರತೆ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಕಾಮಗಾರಿ ವಿಳಂಬವಾಗಿದೆ. ಇನ್ನು ಮುಂದಿನ ದಿನಗಳಲ್ಲಿ ಶೀಘ್ರವಾಗಿ ಕಾಮಗಾರಿ ಮುಗಿಸುತ್ತೇವೆ ಎಂದರು. ಇದನ್ನೂ ಓದಿ: ಒಂದೆರಡು ದಿನಗಳಲ್ಲಿ ಹೆಚ್ಚಿನ ಪ್ರಮಾಣದ ಕೋವಿಡ್ ಲಸಿಕೆ ಲಭ್ಯ: ಸಿಎಂ ಯಡಿಯೂರಪ್ಪ
ಶಿವಮೊಗ್ಗದ ಗಾಂಧಿ ಪಾರ್ಕ್ ಮುಂಭಾಗದ ವೃತ್ತದಲ್ಲಿ ಬಸವೇಶ್ವರರ ಪುತ್ಥಳಿ ಅನಾವರಣ ಮಾಡಬೇಕು ಎಂಬುದು ಶಿವಮೊಗ್ಗದ ಬಹುಜನರ ಅಪೇಕ್ಷೆ ಆಗಿದೆ. ಈ ಬಗ್ಗೆ ಮುಂಬರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ, ತೀರ್ಮಾನ ಕೈಗೊಳ್ಳಲಾಗುವುದು. ಇನ್ನು ಒಂದು ತಿಂಗಳ ಒಳಗಡೆ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಂದಲೇ ಪುತ್ಥಳಿ ಅನಾವರಣ ಮಾಡಿಸಲಾಗುವುದು ಎಂದು ಭರವಸೆ ನೀಡಿದರು.