ಚಿಕ್ಕಮಗಳೂರು : 48 ಗಂಟೆಗಳ ರೆಡ್ ಅಲರ್ಟ್ ಘೋಷಣೆಯ ಬೆನ್ನಲ್ಲೇ ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿದೆ. ಶೃಂಗೇರಿ, ಕೆರೆಕಟ್ಟೆ, ಕಿಗ್ಗಾ ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ತುಂಗೆ ಮೈದುಂಬಿ ಹರಿಯುತ್ತಿದ್ದಾಳೆ.
ಶೃಂಗೇರಿಯ ಗಾಂಧಿ ಮೈದಾನ, ಕಪ್ಪೆ ಶಂಕರ ದೇವಾಲಯ ಮುಳುಗಡೆಯಾಗಿದೆ. ಪ್ರವಾಸಿಗರ ವಾಹನ ನಿಲುಗಡೆಯ ಮೈದಾನ ಸಂಪೂರ್ಣ ಮುಳುಗಡೆಯಾಗಿದೆ.
Advertisement
Advertisement
ಮೂಡಿಗೆರೆ ತಾಲೂಕಿನ ಕೆಂಬತ್ ಮಕ್ಕಿಯಲ್ಲಿ ಮಳೆಗೆ 6 ಎಕರೆ ಬಾಳೆ ತೋಟ ಸಂಪೂರ್ಣ ನಾಶವಾಗಿದೆ. ಜಿಲ್ಲೆಯಲ್ಲಿ ಮುಂದಿನ 48 ಗಂಟೆಗಳ ಕಾಲ ರೆಡ್ ಅಲರ್ಟ್ ಘೋಷಿಸಲಾಗಿದೆ. ತುಂಗಾ, ಭದ್ರಾ, ಹೇಮಾವತಿ ನದಿಪಾತ್ರದ ಜನರಿಗೆ ಸುರಕ್ಷಿತ ಪ್ರದೇಶಕ್ಕೆ ತೆರಳುವಂತೆ ಸೂಚಿಸಲಾಗಿದೆ.
Advertisement
Advertisement
ಎಡಬಿಡದೆ ಸುರಿಯುತ್ತಿರುವ ಮಳೆಯಿಂದ ಭದ್ರಾ ನದಿ ಬೋರ್ಗರೆದು ಹರಿಯುತ್ತಿದೆ. ಮೂಡಿಗೆರೆ ತಾಲೂಕಿನ ಕಳಸ- ಹೊರನಾಡು ಸಂಪರ್ಕ ಸೇತುವೆಯಾಗಿರುವ ಹೆಬ್ಬಾಳೆ ಸೇತುವೆ ಮುಳುಗಡೆ ಭೀತಿ ಎದುರಿಸುತ್ತಿದೆ. ಸೇತುವೆ ಮುಳುಗಡೆಗೆ 1 ಅಡಿಯಷ್ಟೇ ಬಾಕಿಯಿದೆ.
ಕೊಪ್ಪ ತಾಲ್ಲೂಕಿನಲ್ಲಿ ಭಾರೀ ಮಳೆಯಾಗುತ್ತಿದ್ದು ಮಳೆ-ಗಾಳಿಯಿಂದ ನೆಲಕ್ಕೆ ಮರಗಳು ರಸ್ತೆಗೆ ಉರುಳಿ ಬೀಳುತ್ತಿವೆ. ಭಾರೀ ಮಳೆಗೆ ಬೃಹತ್ ಗಾತ್ರದ ಮರ ಉರುಳಿ ಬಿದ್ದ ಪರಿಣಾಮ ಶೃಂಗೇರಿ, ಕೊಪ್ಪ, ಚಿಕ್ಕಮಗಳೂರು ರಸ್ತೆ ಸಂಪರ್ಕ ಕಡಿತಗೊಂಡಿದೆ. ರಸ್ತೆಗೆ ಅಡ್ಡಾಲಾಗಿ ಬಿದ್ದ ಪರಿಣಾಮ ಕೊಪ್ಪ ಶೃಂಗೇರಿ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಆಗಿದ್ದು ಮರ ತೆರವು ಕಾರ್ಯ ನಡೆಯುತ್ತಿದೆ.