ಉತ್ತಮವಾದ ಆರೋಗ್ಯ ಎಲ್ಲರಿಗೂ ಬೇಕು. ಆರೋಗ್ಯವೇ ಭಾಗ್ಯ ಎನ್ನುವ ಮಾತಿದೆ. ನಾವು ಸೇವಿಸುವ ಆಹಾರಗಳು ನಮ್ಮ ಆರೋಗ್ಯದ ಮೇಲೆ ಪ್ರಭಾವ ಬೀರುತ್ತದೆ. ಹೀಗಾಗಿ ನೀವು ಮನೆಯಲ್ಲಿ ಕೆಲವು ಪೌಷ್ಟಿಕಾಂಶವುಳ್ಳ ಆಹಾರವನ್ನು ನಿಯಮಿತವಾಗಿ ಸೇವಿಸುವುದರಿಂದ ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದಾಗಿದೆ.
ನಮ್ಮಲ್ಲಿ ಹೆಚ್ಚಿನವರು ಕಡಲೆಕಾಯಿಯನ್ನು ತಿನ್ನಲು ಇಷ್ಟಪಡುತ್ತಾರೆ. ಅದರಲ್ಲೂ ಕಡಲೆಕಾಯಿಯನ್ನು ಬಡವರ ಬಾದಮಿ ಎಂದು ಕೂಡ ಕರೆಯುವುದುಂಟು. ಕಡಲೆಕಾಯಿಯನ್ನು ಹಸಿ, ಹುರಿದು, ಬೇಯಿಸಿ ತಿನ್ನಬಹುದು.
*ಕಡಲೆಕಾಯಿಯ ಸಿಪ್ಪೆಯಲ್ಲಿರುವ ಬಯೋಆಕ್ಟಿವ್ಸ್ ಮತ್ತು ಫೈಬರ್ ರೋಗದಿಂದ ರಕ್ಷಿಸುತ್ತದೆ ಮತ್ತು ಚರ್ಮದಲ್ಲಿನ ಕಾಯಿಲೆಯನ್ನು ದೂರ ಮಾಡಿ ಚರ್ಮವನ್ನು ರಕ್ಷಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ದ್ವಿದಳ ಧಾನ್ಯವಾಗಿದ್ದು ಇದರಲ್ಲಿ ಸಾಕಷ್ಟು ಪ್ರಮಾಣದ ಪೋಷಕಾಂಶಗಳು, ಪ್ರೋಟೀನ್ ಇದೆ.
* ದೇಹದಲ್ಲಿನ ಉರಿಯೂತ ಮತ್ತು ತುರಿಕೆ ಕಡಿಮೆ ಮಾಡಲು ಇದು ಉಪಯುಕ್ತವಾಗಿದೆ.
* ಕಡಲೆಕಾಯಿ ಹೆಚ್ಚುವರಿ ತೂಕವನ್ನು ಕಡಿಮೆ ಮಾಡಲು ತುಂಬಾ ಉಪಯುಕ್ತವಾಗಿದೆ.
* ಶೇಂಗಾ ತಿನ್ನುವುದರಿಂದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಅಲ್ಲದೇ ಸುಸ್ತು, ಆಯಾಸವನ್ನು ಕಡಿಮೆ ಮಾಡುತ್ತದೆ.
* ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ ಮತ್ತು ದೇಹದಲ್ಲಿ ಸಂಗ್ರಹವಾಗಿರುವ ಕೊಬ್ಬನ್ನು ಕರಗಿಸಲು ಸಹಾಯ ಮಾಡುತ್ತದೆ.
* ಹುರಿದ ಕಡಲೆಕಾಯಿಯಲ್ಲಿ ವಿಟಮಿನ್ ಸಿ ಮತ್ತು ಗ್ರೀನ್ ಟೀಗಿಂತ ಹೆಚ್ಚಿನ ಉತ್ಕರ್ಷಣ ನಿರೋಧಕ ಅಂಶವಿದೆ.
* ಕಡಲೆಕಾಯಿ ಹೃದ್ರೋಗ, ಕ್ಯಾನ್ಸರ್ ಮತ್ತು ಹೃದಯಾಘಾತವನ್ನು ತಡೆಗಟ್ಟುವ ಗುಣಗಳನ್ನು ಹೊಂದಿದೆ.