ಬೆಂಗಳೂರು: ಡ್ರಗ್ಸ್ ವಿರುದ್ಧ ಪೊಲೀಸರ ಸಮರ ಮುಂದುವರಿದಿದ್ದು, ನಗರದ ಸಿದ್ದಾಪುರ ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರು ಡ್ರಗ್ಸ್ ಪೆಡ್ಲರ್ ಗಳನ್ನು ಹೆಡೆಮುರಿ ಕಟ್ಟಿದ್ದಾರೆ.
ಕೌಶಿಕ್, ರಂಗನಾಥ್ ಬಂಧಿತ ಆರೋಪಿಗಳಾಗಿದ್ದು, ಬಂಧಿತರಿಂದ ಎಕ್ಟೆಸಿ ಮಾತ್ರೆಗಳು, ಹ್ಯಾಶ್ ಆಯಿಲ್, ಎಲ್‍ಎಸ್‍ಡಿ ಸ್ಟ್ರಿಪ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಪೊಲೀಸರು ಹೆಚ್ಚಿನ ತನಿಖೆಯನ್ನು ಮುಂದುವರಿಸಿದ್ದಾರೆ.
ಬಂಧಿತ ಆರೋಪಿ ಕೌಶಿಕ್ ಪದವೀಧರನಾಗಿದ್ದು, ಶೋಕಿಗಾಗಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಸದ್ಯ ಸಿದ್ದಾಪುರ ಪೊಲೀಸರಿಂದ ತನಿಖೆ ಮುಂದುವರಿದಿದ್ದು, ಡ್ರಗ್ಸ್ ಜಾಲವನ್ನು ಬೇಧಿಸಲು ತಮ್ಮ ಕಾರ್ಯವನ್ನು ನಡೆಸುತ್ತಿದ್ದಾರೆ. ಆರೋಪಿಗಳನ್ನು ಸಹ ವಿಚಾರಣೆಗೆ ಒಳಪಡಿಸಿದ್ದಾರೆ.