ಗದಗ: ಸಂಗೊಳ್ಳಿ ರಾಯಣ್ಣ ಹಾಗೂ ಕಿತ್ತೂರು ರಾಣಿ ಚೆನ್ನಮ್ಮನ ಮೂರ್ತಿ ಪ್ರತಿಷ್ಠಾಪನೆ ಪ್ರತಿಷ್ಠೆಗಾಗಿ 2 ಸಮುದಾಯದ ನಡುವೆ ಗಲಾಟೆ ನಡೆದಿರುವ ಘಟನೆ ತಾಲೂಕಿನ ಬಳಗಾನೂರ ಗ್ರಾಮದಲ್ಲಿ ನಡೆದಿದೆ.
ಬಳಗಾನೂರ ಗ್ರಾಮದ ಬಸ್ ನಿಲ್ದಾಣದ ಬಳಿ ಇರುವ ಜಾಗದಲ್ಲಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ಮಾಡಬೇಕು ಅಂತ ಹಾಲುಮತ ಕುರುಬ ಸಮಾಜದವರು. ಅದೇ ಜಾಗದಲ್ಲಿ ಕಿತ್ತೂರು ರಾಣಿ ಚನ್ನಮ್ಮ ಮೂರ್ತಿ ಪ್ರತಿಷ್ಠಾಪನೆ ಮಾಡಬೇಕು ಅಂತ ಪಂಚಮಸಾಲಿ ಸಮುದಾಯವರ ನಡುವೆ ಜಿದ್ದಾಜಿದ್ದಿ ನಡೆಯುತ್ತಿದೆ. ಕಳೆದ ನಾಲ್ಕೈದು ವರ್ಷಗಳಿಂದ ಈ ಎರಡು ಸಮುದಾಯದ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಲೇ ಇದ್ದು, ಈ ಹಿಂದೆ ಹಾಕಿದ್ದ ರಾಣಿ ಚೆನ್ನಮ್ಮ ನಾಮ ಫಲಕವನ್ನು ತೆರವುಗೊಳಿಸಲಾಗಿತ್ತು. ಈಗ ರಾತ್ರೋರಾತ್ರಿ ನಿರ್ಮಾಣವಾಗಿದ್ದ ಸಂಗೊಳ್ಳಿ ರಾಯಣ್ಣ ಮೂರ್ತಿಯನ್ನು ತೆರವುಗೊಳಿಸಿದ್ದಾರೆ.
Advertisement
Advertisement
ಇದರಿಂದ ರಾಯಣ್ಣ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ಮಾಡಿದರು. ಈ ವೇಳೆ ಪೊಲೀಸರು ಗುಂಪು ಚದುರಿಸಲು ಮುಂದಾದವ ಹಂತದಲ್ಲಿ ಪ್ರತಿಭಟನಾಕಾರರು ಹಾಗೂ ಪೊಲೀಸರ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಪೊಲೀಸರು ಗುಂಪು ಚದುರಿಸಲು ಲಘುಲಾಠಿ ಪ್ರಹಾರ ಮಾಡಿದ್ದರು. ಈ ವೇಳೆ ಕೆಲ ಕಿಡಿಗೇಡಿಗಳು ಗದಗ ಎಸಿ ರಾಯಪ್ಪ ಹಾಗೂ ಡಿವೈಎಸ್‍ಪಿ ಪ್ರಹ್ಲಾದ್ ಅವರ ಎರಡು ವಾಹನಕ್ಕೆ ಕಲ್ಲು ಹೊಡೆದು ಜಖಂ ಗೊಳಿಸಿದ್ದಾರೆ.
Advertisement
Advertisement
ಘಟನೆಯಲ್ಲಿ ಸಂಬಂಧ ಎರಡು ಸಮುದಾಯದ ಹತ್ತಾರು ಜನರ ಬಂಧನ ಮಾಡಲಾಗಿದೆ. ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು ಬೀಗಿ ಪೊಲೀಸ್ ವ್ಯವಸ್ಥೆ ಮಾಡಲಾಗಿದೆ. ಈ ಎಲ್ಲಾ ಘಟನೆಗೆ ಕಾರಣ ಸಚಿವ ಸಿ.ಸಿ ಪಾಟೀಲ್ ಎಂಬುದು ರಾಯಣ್ಣ ಬ್ರಿಗೇಡ್ ಸಂಘಟಿಕರ ಆರೋಪವಾಗಿದೆ. ಸಚಿವ ಸಿ.ಸಿ ಪಾಟೀಲ್ ಒಂದು ಸಮುದಾಯಕ್ಕೆ ಮಾತ್ರ ಪ್ರೋತ್ಸಾಹಿಸಿ ಅಧಿಕಾರಿಗಳನ್ನು ಬಳಸಿಕೊಂಡು ಸಂಗೊಳ್ಳಿ ರಾಯಣ್ಣ ಮೂರ್ತಿ ತೆರವುಗೊಳಿಸಿದ್ದಾರೆ ಎಂಬ ಆರೋಪಿಸಲಾಗಿದೆ. ಸ್ಥಳಕ್ಕೆ ಹಿರಿಯ ಅಧಿಕಾರಿಗಳು ದೌಡಾಯಿಸಿ ಪರಸ್ಥಿತಿ ತಿಳಿಗೊಳಿಸಲು ಮುಂದಾಗಿದ್ದಾರೆ. ಬಳಗಾನೂರ ಗ್ರಾಮದಲ್ಲಿ ಸದ್ಯಕ್ಕೆ ಬೂದಿಮುಚ್ಚಿದ ಕೆಂಡದಂತಿದೆ. ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.