ಅಂಗಾಂಗ ದಾನ ಮಾಡಲು ಮುಂದಾದ ಸಂಚಾರಿ ವಿಜಯ್ ಕುಟುಂಬಸ್ಥರು

Public TV
2 Min Read
SANCHARI BROTHER

ಬೆಂಗಳೂರು: ಸ್ಯಾಂಡಲ್‍ವುಡ್ ನಟ ಸಂಚಾರಿ ವಿಜಯ್ ಅವರು ವೈದ್ಯರು ನೀಡುತ್ತಿರುವ ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ, ಬ್ರೈನ್ ಫೇಲ್ಯೂರ್ ಆಗಿದೆ. ಚಿಕಿತ್ಸೆ ಕೊಟ್ರೂ ರಿಕವರಿ ಕಷ್ಟವಾಗಿದೆ, ಹೀಗಾಗಿ ಅಂಗಾಂಗ ದಾನ ಮಾಡೇಕು ಅಂತ ನಿರ್ಧಾರ ಮಾಡಲಾಗಿದೆ ಎಂದು ಹೇಳುತ್ತಾ ವಿಜಯ್ ಸಹೋದರ ಸಿದ್ದೇಶ್ ಕಣ್ಣೀರು ಹಾಕಿದ್ದಾರೆ. ಇದನ್ನೂ ಓದಿ: ಸಂಚಾರಿ ವಿಜಯ್ ಚಿಕಿತ್ಸೆ ಪೂರ್ಣ ಖರ್ಚು ಭರಿಸಲು ಮುಂದಾದ ಡಿಸಿಎಂ

SANCHARI BROTHER3 medium

ರಾಷ್ಟ್ರ ಪ್ರಶಸ್ತಿ ವಿಜೇತ, ನಟ ಮಾತ್ರವಲ್ಲದೇ ವಿಜಯ್ ಸಮಾಜ ಸೇವೆಯಲ್ಲಿ ತೊಡಗಿಕೊಂಡಿದ್ದ. ಎಲ್ಲರ ಜೊತೆಯಾಗಿ ಇರುತ್ತಿದ್ದನು. ಕೊರೊನಾ ಕಷ್ಟ ಕಾಲ, ನೆರೆ ಬಂದಾಗ ಸಾಕಷ್ಟು ಕೆಲಸವನ್ನು ಮಾಡಿದ್ದಾನೆ. ಸಮಾಜಕ್ಕಾಗಿ ಕೆಲಸ ಮಾಡುತ್ತಿದ್ದ. ವಿಜಯ್ ಅಂಗಾಂಗಳನ್ನು ದಾನ ಮಾಡಬೇಕು ಎಂದು ನಾವು ನಿರ್ಧರಿಸಿದ್ದೇವೆ. ಈ ಮಾತನ್ನು ನಾನು ಹೇಳಬಾರದು. ಅವರ ಆತ್ಮಕ್ಕೆ ಸುಖ ಶಾಂತಿ ಸಿಗಲಿ ಎಂದು ಈ ಕಾರ್ಯಕ್ಕೆ ಮುಂದಾಗಿದ್ದೇವೆ ಎಂದಿದ್ದಾರೆ. ಇದನ್ನೂ ಓದಿ: ಸಂಚಾರಿ ವಿಜಯ್ ಮೆದುಳು ನಿಷ್ಕ್ರಿಯವಾಗಿದೆ – ಅಪೋಲೋ ವೈದ್ಯರು

SANCHARI VIJAY 1 1 medium

ವೈದ್ಯರು ಹೇಳುವ ಪ್ರಕಾರ ಅವರ ಪ್ರಾಣ ಹೋದ ಮೇಲೆ ಅಂಗಾಗಳನ್ನು ದಾನ ಮಾಡಲು ಸಾಧ್ಯವಿಲ್ಲ. ಸಾಮಾಜಿ ಕಳಕಳಿಗಾಗಿ ನಾವು ಈ ನಿರ್ಧಾರಕ್ಕೆ ಬಂದಿದ್ದೇವೆ. ಅವರ ದೇಹದ ಇತರ ಭಾಗಗಳು ಬೇರೆಯವರಿಗೆ ಸಹಾಯವಾಗಲಿ ಎನ್ನುವುದ ನಮ್ಮ ಉದ್ದೇಶವಾಗಿದೆ. ನನಗೆ ಮಾತನಾಡಲು ಶಕ್ತಿ ಇಲ್ಲ. ಸರ್ಕಾರ ನಮಗೆ ಸಹಾಯ ಮಾಡಿದೆ. ಅಶ್ವಥ್ ನಾರಾಯಣ ಅವರು ನಮಗೆ ಸಹಾಯವನ್ನು ಮಾಡಿದ್ದಾರೆ. ನಮಗೆ ಈ ಸಂದರ್ಭದಲ್ಲಿ ಧರ್ಯವನ್ನು ನೀಡಿದ್ದಾರೆ ಎಂದು ಹೇಳುತ್ತಾ ಕಣ್ಣೀರು ಹಾಕಿದರು.

Sanchari VIjay 1 medium

ಅಪಘಾತಕ್ಕೊಳಗಾಗಿ ಗಂಭೀರ ಗಾಯಗೊಂಡು ಕೋಮಾದಲ್ಲಿರುವ ನಟ ಸಂಚಾರಿ ವಿಜಯ್ ಅವರ ಮೆದುಳು ನಿಷ್ಕ್ರಿಯಗೊಂಡಿದೆ ಎಂದು ಅಪೋಲೋ ಆಸ್ಪತ್ರೆಯ ನ್ಯೂರೋ ಸರ್ಜನ್ ಡಾ.ಅರುಣ್ ನಾಯ್ಕ್ ಮಾಹಿತಿ ನೀಡಿದ್ದಾರೆ. ಸಂಚಾರಿ ವಿಜಯ್ ಗೆ ಚಿಕಿತ್ಸೆ ಶುರುವಾಗಿ 36 ಗಂಟೆಗೆ ಆಗಿದೆ. ಆಸ್ಪತ್ರೆಗೆ ಬಂದಾಗ ಅವರ ಪರಿಸ್ಥಿತಿ ತುಂಬಾ ಚಿಂತಾಜನಕವಾಗಿತ್ತು. ಆಸ್ಪತ್ರೆಗೆ ಬಂದ ಕೆಲವೇ ನಿಮಿಷದಲ್ಲಿ ಶಸ್ತ್ರಚಿಕಿತ್ಸೆ ಮಾಡಲಾಯ್ತು. ಸದ್ಯ ಅವರ ಬ್ರೈನ್ ಫೇಲ್ಯೂರ್ ಆಗಿದೆ. 36 ಗಂಟೆಯಾದ್ರೂ ವಿಜಯ್ ಸ್ಪಂದಿಸ್ತಿಲ್ಲ. ಎಷ್ಟೇ ಚಿಕಿತ್ಸೆ ಕೊಟ್ರು ಸ್ಪಂದಿಸ್ತಿಲ್ಲ. ಮೆದುಳು ಚಿಕಿತ್ಸೆಗೆ ಸ್ಪಂದಿಸ್ತಿಲ್ಲ. ಎಲ್ಲಾ ಚಿಕಿತ್ಸೆ ಕೊಡಲಾಗ್ತಿದೆ. ವಿಜಯ್ ಉಸಿರಾಟ ಕೂಡ ಕ್ಷೀಣವಾಗಿದೆ. ಚಿಕಿತ್ಸೆ ಕೊಟ್ರೂ ರಿಕವರಿ ಕಷ್ಟವಾಗಿದೆ ಎಂದು ಹೇಳಿದರು.

sanchari vijay 2 medium

ಶನಿವಾರ ರಾತ್ರಿ ಬೈಕ್ ಅಪಘಾತಕ್ಕೀಡಾಗಿ ಸಂಚಾರಿ ವಿಜಯ್ ತಲೆಗೆ ಗಂಭೀರ ಗಾಯಗಳಾಗಿತ್ತು. ಕೂಡಲೇ ಸ್ಥಳೀಯರು ಅವರನ್ನು ಬನ್ನೇರುಘಟ್ಟ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಸದ್ಯ ನಟ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಕೋಮಾದಲ್ಲಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *