ಬೆಂಗಳೂರು: ಕನ್ನಡ ಚಿತ್ರರಂಗದ ಉದಯೋನ್ಮುಖ ನಟ ಹಾಗೂ ಮನೋಜ್ಞ ಅಭಿನಯದ ಮೂಕಲ ಕನ್ನಡಿಗರ ಮನ ಗೆದ್ದಿದ್ದ ಚಲನಚಿತ್ರ ನಟ ಸಂಚಾರಿ ವಿಜಯ್ ನಿಧನಕ್ಕೆ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಸಂತಾಪ ವ್ಯಕ್ತಪಡಿಸಿದರು.
ವಿಜಯ ಒಬ್ಬ ಪರಿಸರ ಪ್ರೇಮಿ,ರಾಷ್ಟ್ರ ಪ್ರಶಸ್ತಿ ವಿಜೇತ ನಟ,ಅವರ ನಿಧನದಿಂದ ಕನ್ನಡ ಚಿತ್ರರಂಗಕ್ಕೆ ನಷ್ಟವಾಗಿದೆ. ಇನ್ನಷ್ಟು ಬಾಳಿ, ಬದುಕಿ ಚಿತ್ರರಂಗದ ಕೀರ್ತಿ ಬೆಳಗಬೇಕಾದ ಯುವ ಕಲಾವಿದ ನಮ್ಮನ್ನು ಅಗಲಿರುವುದು ದುಃಖದ ಸಂಗತಿ.
ಈ ಸಾವಿನ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬದ ಸದಸ್ಯರಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.
— Basavaraj S Bommai (@BSBommai) June 14, 2021
Advertisement
ಬೆಂಗಳೂರಿನಲ್ಲಿ ಇಂದು ಸುದ್ದಿಗಾರರ ಜತೆ ಮಾತನಾಡಿದ ಅವರು, ಸಂಚಾರಿ ವಿಜಯ ಒಬ್ಬ ಪರಿಸರ ಪ್ರೇಮಿ. ರಾಷ್ಟ್ರ ಪ್ರಶಸ್ತಿ ವಿಜೇತ ನಟ. ಅವರ ನಿಧನದಿಂದ ಕನ್ನಡ ಚಿತ್ರರಂಗಕ್ಕೆ ನಷ್ಟವಾಗಿದೆ. ಇನ್ನಷ್ಟು ಬಾಳಿ, ಬದುಕಿ ಚಿತ್ರರಂಗದ ಕೀರ್ತಿ ಬೆಳಗಬೇಕಾದ ಯುವ ಕಲಾವಿದ ವಿಜಯ ನಮ್ಮನ್ನು ಅಗಲಿರುವುದು ಬಹಳ ದುಃಖದ ಸಂಗತಿ ಎಂದು ಸಚಿವರು ಕಂಬನಿ ಮಿಡಿದಿದ್ದಾರೆ.
Advertisement
ಕನ್ನಡ ಚಿತ್ರರಂಗದ ಉದಯೋನ್ಮುಖ ನಟ ಹಾಗೂ ಮನೋಜ್ಞ ಅಭಿನಯದ ಮೂಲಕ ಕನ್ನಡಿಗರ ಮನ ಗೆದ್ದಿದ್ದ ಚಲನಚಿತ್ರ ನಟ ಸಂಚಾರಿ ವಿಜಯ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸುತ್ತೇನೆ. pic.twitter.com/sc2LVyhfZU
— Basavaraj S Bommai (@BSBommai) June 14, 2021
Advertisement
ಸಂಚಾರಿ ವಿಜಯ ಅವರ ಸಾವಿನ ದುಃಖವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ಅವರ ಕುಟುಂಬದ ಸದಸ್ಯರಿಗೆ ಕರುಣಿಸಲಿ ಎಂದು ಸಚಿವ ಬೊಮ್ಮಾಯಿ ಪ್ರಾರ್ಥಿಸಿದರು. ಸಂಚಾರಿ ವಿಜಯ್ ನಿಧನಕ್ಕೆ ಇಡೀ ಚಿತ್ರರಂಗ ಕಣ್ಣೀರು ಹಾಕುತ್ತಿದ್ದ, ಸೆಲೆಬ್ರಿಟಿಗಳು ಮಾತ್ರವಲ್ಲದೆ ರಾಜಕೀಯ ನಾಯಕರು ಕೂಡ ಕಂಬನಿ ಮಿಡಿಯುತ್ತಿದ್ದಾರೆ. ಇದನ್ನೂ ಓದಿ: ಪ್ರತಿಭಾವಂತ ನಟ ಸಂಚಾರಿ ವಿಜಯ್ ನಿಧನಕ್ಕೆ ಡಿ.ಕೆ. ಶಿವಕುಮಾರ್ ಸಂತಾಪ