ಬೆಂಗಳೂರು: ಅಪಘಾತಕ್ಕೊಳಗಾಗಿ ಗಂಭೀರ ಗಾಯಗೊಂಡು ಕೋಮಾದಲ್ಲಿರುವ ನಟ ಸಂಚಾರಿ ವಿಜಯ್ ಅವರ ಮೆದುಳು ನಿಷ್ಕ್ರಿಯಗೊಂಡಿದೆ ಎಂದು ಅಪೊಲೋ ಆಸ್ಪತ್ರೆಯ ನ್ಯೂರೋ ಸರ್ಜನ್ ಡಾ.ಅರುಣ್ ನಾಯ್ಕ್ ಮಾಹಿತಿ ನೀಡಿದ್ದಾರೆ.
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಂಚಾರಿ ವಿಜಯ್ ಗೆ ಚಿಕಿತ್ಸೆ ಶುರುವಾಗಿ 36 ಗಂಟೆಗೆ ಆಗಿದೆ. ಆಸ್ಪತ್ರೆಗೆ ಬಂದಾಗ ಅವರ ಪರಿಸ್ಥಿತಿ ತುಂಬಾ ಚಿಂತಾಜನಕವಾಗಿತ್ತು. ಆಸ್ಪತ್ರೆಗೆ ಬಂದ ಕೆಲವೇ ನಿಮಿಷದಲ್ಲಿ ಶಸ್ತ್ರಚಿಕಿತ್ಸೆ ಮಾಡಲಾಯ್ತು. ಸದ್ಯ ಅವರ ಬ್ರೈನ್ ಫೇಲ್ಯೂರ್ ಆಗಿದೆ. 36 ಗಂಟೆಯಾದ್ರೂ ವಿಜಯ್ ಸ್ಪಂದಿಸ್ತಿಲ್ಲ ಎಂದು ಹೇಳಿದರು.
ಎಷ್ಟೇ ಚಿಕಿತ್ಸೆ ಕೊಟ್ರು ಸ್ಪಂದಿಸ್ತಿಲ್ಲ. ಮೆದುಳು ಚಿಕಿತ್ಸೆಗೆ ಸ್ಪಂದಿಸ್ತಿಲ್ಲ. ಎಲ್ಲಾ ಚಿಕಿತ್ಸೆ ಕೊಡಲಾಗ್ತಿದೆ. ವಿಜಯ್ ಉಸಿರಾಟ ಕೂಡ ಕ್ಷೀಣವಾಗಿದೆ. ಚಿಕಿತ್ಸೆ ಕೊಟ್ರೂ ರಿಕವರಿ ಕಷ್ಟ ಎಂಬುದಾಗು ವೈದ್ಯರು ಮಾಹಿತಿ ನೀಡಿದ್ದಾರೆ.
ಶನಿವಾರ ರಾತ್ರಿ ಬೈಕ್ ಅಪಘಾತಕ್ಕೀಡಾಗಿ ಸಂಚಾರಿ ವಿಜಯ್ ತಲೆಗೆ ಗಂಭೀರ ಗಾಯಗಳಾಗಿತ್ತು. ಕೂಡಲೇ ಸ್ಥಳೀಯರು ಅವರನ್ನು ಬನ್ನೇರುಘಟ್ಟ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಸದ್ಯ ನಟ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಕೋಮಾದಲ್ಲಿದ್ದಾರೆ.