ಸಂಚಾರಿ ವಿಜಯ್ ಹೆಸರಲ್ಲಿ ಗಿಣಿ ದತ್ತು ಪಡೆದ ಬಿಗ್‍ಬಾಸ್ ಸ್ಪರ್ಧಿ ಚಂದ್ರಚೂಡ್

Public TV
2 Min Read
SANCHARI CHANDACHUD

ಬೆಂಗಳೂರು: ಸ್ಯಾಂಡಲ್ ವುಡ್ ನಟ ಚಿರಂಜೀವಿ ಸರ್ಜಾ ಬಳಿಕ ಇದೀಗ ರಾಷ್ಟ್ರಪ್ರಶಸ್ತಿ ವಿಜೇತ ಸಂಚಾರಿ ವಿಜಯ್ ಅಕಾಲಿಕ ನಿಧನ ಇಡೀ ಚಿತ್ರರಂಗವನ್ನೇ ದಂಗುಬಡಿಸಿದೆ. ಸಂಚಾರ ನಿಲ್ಲಿಸಿದ ಸಂಚಾರಿಗೆ ಈಗಾಗಲೇ ಎಲ್ಲರೂ ಕಣ್ಣೀರ ವಿದಾಯ ತಿಳಿಸಿದ್ದಾರೆ. ಈ ಬೆನ್ನಲ್ಲೇ ಕನ್ನಡದ ಬಿಗ್ ಬಾಸ್ ಸ್ಪರ್ಧಿ ಚಕ್ರವರ್ತಿ ಚಂದ್ರಚೂಡ್ ಅವರು ವಿಜಯ್ ಹೆಸರಿನಲ್ಲಿ ಮಹಾನ್ ಕಾರ್ಯವೊಂದನ್ನು ಮಾಡಿದ್ದಾರೆ.

SANCHARI VIJAY US medium

ಹೌದು, ಸಂಚಾರಿ ವಿಜಯ್ ಅವರ ಹೆಸರಿನಲ್ಲಿ ಚಕ್ರವರ್ತಿ ಚಂದ್ರಚೂಡ್ ಅವರು ಗಿಣಿಯೊಂದನ್ನು ದತ್ತು ಪಡೆದಿದ್ದಾರೆ. ಈ ಮೂಲಕ ವಿಜಯ್ ಹೆಸರು ಸದಾ ಮನದಲ್ಲಿರುವಂತೆ ಮಾಡಿದ್ದಾರೆ. ದಾವಣಗೆರೆಯ ಇಂದಿರಾ ಪ್ರಿಯದರ್ಶಿನಿ ಪ್ರಾಣಿಸಂಗ್ರಹಾಲಯದಲ್ಲಿ ಗಿಣಿ ದತ್ತು ಪಡೆದಿರುವ ಚಂದ್ರಚೂಡ್, 1 ವರ್ಷಗಳ ಕಾಲ ಅದರ ಆರೈಕೆಯನ್ನು ಮಾಡಲಿದ್ದಾರೆ. ಇದನ್ನೂ ಓದಿ: ದಾಸನ ಮನವಿಗೆ ಸ್ಪಂದನೆ- ಪ್ರಾಣಿಗಳನ್ನು ದತ್ತು ಪಡೆದ ಅಭಿಮಾನಿಗಳು

ತಾವು ಗಿಣಿ ದತ್ತು ಪಡೆದಿರುವ ವಿಚಾರವನ್ನು ಚಂದ್ರಚೂಡ್ ಅವರು ಸಾಮಾಜಿಕ ಜಾಲತಾನದಲ್ಲಿ ಹಂಚಿಕೊಂಡಿದ್ದಾರೆ. ಈ ಕುರಿತು ಇನ್ ಸ್ಟಾ ಖಾತೆಯಲ್ಲಿ ಸರ್ಟಿಫಿಕೆಟ್ ಸಹಿತ ಮಾಹಿತಿ ಶೇರ್ ಮಾಡಿಕೊಂಡಿರುವ ಚಂದ್ರಚೂಡ್, ಸಂಚಾರಿ ವಿಜಯ್ ನಿನಗೆ ಗಿಣಿ ಇಷ್ಟ, ಅದಕ್ಕೆ ನಿನ್ ಹೆಸರಲ್ಲೊಂದು ತಗೊಂಡಿದ್ದೀನಿ ನೋಡಿ ಸ್ವಾಮಿ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಡಿಕೆ ರವಿ ಪಾತ್ರದಲ್ಲಿ ಅಭಿನಯಿಸ್ತಾರಾ ಚಕ್ರವರ್ತಿ ಚಂದ್ರಚೂಡ್?

DARSHAN medium

ಕೆಲ ದಿನಗಳ ಹಿಂದೆ ಸ್ಯಾಂಡಲ್‍ವುಡ್ ನಟ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು, ಕೊರೊನಾ ಬಿಕ್ಕಟ್ಟಿನಿಂದ ಜನಸಾಮಾನ್ಯರಿಗೆ ತೊಂದರೆಯಾದಂತೆ ಪ್ರಾಣಿಗಳಿಗೂ ಅಷ್ಟೇ ತೊಂದರೆ ಉಂಟಾಗಿದೆ. ಮೃಗಾಲಯಗಳಲ್ಲಿ ಪ್ರಾಣಿಗಳ ಪೋಷಣೆ ಕಷ್ಟವಾಗಿದೆ. ಪ್ರಾಣಿ-ಪಕ್ಷಿಗಳನ್ನು ದತ್ತು ಪಡೆಯುವುದರ ಮೂಲಕ ನೆರವಾಗಿ ಎಂದು ಮನವಿ ಮಾಡಿದ್ದರು. ಇದನ್ನೂ ಓದಿ: ದರ್ಶನ್ ಮಹತ್ಕಾರ್ಯಕ್ಕೆ ಕೈ ಜೋಡಿಸಿದ ಉಪೇಂದ್ರ

darshan 1

ದರ್ಶನ್ ಮನವಿಯ ಬೆನ್ನಲ್ಲೇ ಅವರ ಅಭಿಮಾನಿಗಳು ಹಾಗೂ ಪ್ರಾಣಿಪ್ರಿಯರು ರಾಜ್ಯದ ಎಲ್ಲಾ ಮೃಗಾಲಯಗಳಲ್ಲಿಯೂ ಪ್ರಾಣಿಗಳನ್ನು ದತ್ತು ಪಡೆಯುವುದರ ಮೂಲಕ ಮಾನವೀಯತೆ ಮೆರೆಯುತ್ತಿದ್ದಾರೆ. ಡಿ ಬಾಸ್ ಮನವಿ ನಂತರ ಕೇವಲ ಎರಡು ದಿನದಲ್ಲಿ 25 ಲಕ್ಷ ಮೌಲ್ಯದ ದತ್ತು ಹಣ ಸಂಗ್ರಹವಾಗಿದೆ ಎಂದು ಕರ್ನಾಟಕ ಮೃಗಾಲಯ ಮಾಹಿತಿ ನೀಡಿತ್ತು. ಸೆಲೆಬ್ರಿಟಿಗಳು ಹಾಗೂ ಅವರ ಅಭಿಮಾನಿಗಳು ಸೇರಿದಂತೆ ಹಲವು ಮಂದಿ ಈಗಲೂ ಪ್ರಾಣಿಗಳನ್ನು ದತ್ತು ಪಡೆಯುವ ಮೂಲಕ ಮಾನವೀಯ ಕಾರ್ಯ ಮುಂದುವರಿದಿದೆ.

Share This Article
Leave a Comment

Leave a Reply

Your email address will not be published. Required fields are marked *