ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಸೇರಿರುವ ನಟಿ ಸಂಜನಾ ಗಲ್ರಾನಿ ಆರೋಗ್ಯ ತಪಾಸಣೆಗೆ ಹೈಕೋರ್ಟ್ ಏಕ ಸದಸ್ಯ ಪೀಠ ಅವಕಾಶ ನೀಡಿದೆ.
ಅನಾರೋಗ್ಯ ಹಿನ್ನೆಲೆ ತಮಗೆ ಜಾಮೀನು ನೀಡಬೇಕೆಂದು ನಟಿ ಸಂಜನಾ ಅರ್ಜಿ ಸಲ್ಲಿಸಿದ್ದರು. ಇಂದು ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಶ್ರೀನಿವಾಸ್ ಹರೀಶ್ ಕುಮಾರ್ ಅರವರಿದ್ದ ಪೀಠ, ವೈದ್ಯಕೀಯ ತಪಾಸಣೆಗೆ ನಡೆಸಿ, ಡಿಸೆಂಬರ್ 10ರೊಳಗೆ ವರದಿ ಸಲ್ಲಿಸುವಂತೆ ಸೂಚನೆ ನೀಡಿದೆ. ನಗರದ ವಾಣಿವಿಲಾಸ್ ಆಸ್ಪತ್ರೆಯಲ್ಲಿ ಸಂಜನಾ ಆರೋಗ್ಯ ತಪಾಸಣೆ ವೇಳೆ ಮಾಧ್ಯಮಗಳ ಚಿತ್ರೀಕರಣಕ್ಕೆ ಅವಕಾಶ ನೀಡದಂತೆ ನ್ಯಾಯಪೀಠ ಸಹ ಸೂಚಿಸಿದೆ.
Advertisement
Advertisement
ಸೆಪ್ಟೆಂಬರ್ 8ರಂದು ಸಂಜನಾ ಗಲ್ರಾನಿಯನ್ನ ಸಿಸಿಬಿ ಪೊಲೀಸರು ಬಂಧಿಸಿದ್ದರು. ಇತ್ತ ನಟಿ ರಾಗಿಣಿ ದ್ವಿವೇದಿ ಜಾಮೀನು ಕೋರಿ ಸುಪ್ರೀಂಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಆದರೆ ಜಾಮೀನು ಅರ್ಜಿ ವಿಚಾರಣೆಯನ್ನು ವಜಾಗೊಳಿಸಿರುವ ಸುಪ್ರೀಂ ಕೋರ್ಟ್ ವಿಚಾರಣೆಯನ್ನ ಜನವರಿ ಮೊದಲ ವಾರಕ್ಕೆ ಮುಂದೂಡಿದೆ. ಈ ಹಿನ್ನೆಲೆಯಲ್ಲಿ ಹೊಸ ವರ್ಷವನ್ನು ಕೂಡ ನಟಿ ಜೈಲಿನಲ್ಲಿ ಬರಮಾಡಿಕೊಳ್ಳಲಿದ್ದಾರೆ. ಇದನ್ನೂ ಓದಿ: ನಟಿ ಸಂಜನಾ ಹೆಸರಲ್ಲಿದೆ ಬರೋಬ್ಬರಿ 11 ಬ್ಯಾಂಕ್ ಅಕೌಂಟ್!
Advertisement
Advertisement
ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಸೆಪ್ಟೆಂಬರ್ 4ರಂದು ತುಪ್ಪದ ಬೆಡಗಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ರಾಗಿಣಿ, ಕೆಳ ನ್ಯಾಯಾಲಯದಲ್ಲಿ ಜಾಮೀನು ಸಿಗದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಇದನ್ನೂ ಓದಿ: ಮೆಸೇಜ್, ಫೋಟೋಸ್ ಡಿಲೀಟ್ – ಸಂಜನಾಳ ಖತರ್ನಾಕ್ ಐಡಿಯಾಗೆ ಪೊಲೀಸ್ರು ಸುಸ್ತು