ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಬಂಧನದಲ್ಲಿರುವ ಮಾದಕ ಚೆಲುವೆಯರಾದ ಸಂಜನಾ ಗಲ್ರಾನಿ ಮತ್ತು ರಾಗಿಣಿ ದ್ವಿವೇದಿ ಜಾಮೀನು ಅರ್ಜಿಯನ್ನು ಎನ್‍ಡಿಪಿಎಸ್ ಕೋರ್ಟ್ ವಜಾಗೊಳಿಸಿದೆ. ಇನ್ನುಳಿದ ಆರೋಪಿಗಳ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.
Advertisement
ಡ್ರಗ್ಸ್ ಪ್ರಕರಣದಲ್ಲಿ ಬಂಧಿತರಾಗಿರುವ ನಟಿಯರಾದ ರಾಗಿಣಿ ದ್ವಿವೇದಿ ಜಾಮೀನು ಅರ್ಜಿಯ ವಿಚಾರಣೆಯನ್ನ ನ್ಯಾಯಾಲಯ ಸೆಪ್ಟೆಂಬರ್ 21ರಂದು ನಡೆಸಿತ್ತು. ವಿಚಾರಣೆಯ ಬಳಿಕ ಆದೇಶವನ್ನು ನ್ಯಾಯಾಧೀಶರು ಕಾಯ್ದಿರಿಸಿದ್ದರು. ಇತ್ತ ಮತ್ತೋರ್ವ ನಟಿ ಸಂಜನಾ ಗಲ್ರಾನಿ ಜಾಮೀನು ಅರ್ಜಿಯ ವಿಚಾರಣೆ ಸೆಪ್ಟೆಂಬರ್ 24ರಂದು ನ್ಯಾಯಲಯ ಮುಂದೆ ಬಂದಿತ್ತು. ವಾದ- ಪ್ರತಿವಾದ ಆಲಿಸಿದ್ದ ನ್ಯಾಯಾಧೀಶರು ಇಂದು ಆದೇಶ ಕಾಯ್ದಿರಿಸಿದ್ದರು. ಇದನ್ನೂ ಓದಿ: ನನಗೆ ಸಿಗರೇಟ್ ಕೊಡಿ- ಜೈಲಿನಲ್ಲಿ ಸಂಜನಾ ಮತ್ತೆ ಕಿರಿಕ್
Advertisement
Advertisement
ಈ ಎಲ್ಲ ಬೆಳವಣಿಗೆಗಳ ನಡುವೆ ಜಾರಿ ನಿರ್ದೇಶನಾಲಯ ಅಕ್ರಮ ಹಣ ವರ್ಗಾವಣೆ ಹಿನ್ನೆಲೆ ಇಬ್ಬರು ನಟಿಯರನ್ನು ವಿಚಾರಣೆ ನಡೆಸಲು ನ್ಯಾಯಾಲಯದಿಂದ ಐದು ದಿನ ಅನುಮತಿ ಪಡೆದುಕೊಂಡಿತ್ತು. ನ್ಯಾಯಾಲಯದ ಆದೇಶದ ಹಿನ್ನೆಲೆ ರಾಗಿಣಿ ಮತ್ತು ಸಂಜನಾ ಇಬ್ಬರು ಪರಪ್ಪನ ಅಗ್ರಹಾರದಲ್ಲಿಯೇ ಇಡಿ ವಿಚಾರಣೆ ಎದುರಿಸಿದ್ದಾರೆ. ಇದನ್ನೂ ಓದಿ: ಇಬ್ಬರ ಜೊತೆ ಬಂದು ಸಂಜನಾ ಮತಾಂತರ: ಮೌಲ್ವಿ ಮಹಮ್ಮದ್ ಜಲಾಲುದ್ದಿನ್
Advertisement
ಸಂಜನಾ ಪರ ವಕೀಲರ ವಾದ: ರವಿಶಂಕರ್ ಹೇಳಿಕೆಯನ್ನು ಎಸಿಪಿ ಗೌತಮ್ ರೆಕಾರ್ಡ್ ಮಾಡಿದ್ದಾರೆ. ಅದರಲ್ಲಿ ನಗರದ ವಿವಿಧೆಡೆ ಪಾರ್ಟಿ ನಡೆಸಿರುವುದಾಗಿ ಹೇಳಿದ್ದಾರೆ. ಈ ಸ್ಟೇಟ್ ಮೆಂಟ್ ಬಿಟ್ಟರೆ ಯಾವುದೇ ಮಟಿರಿಯಲ್ ಇಲ್ಲ. ಕೇವಲ ರವಿಶಂಕರ್ ಹೇಳಿಕೆ ಆಧಾರದ ಮೇಲೆ ಎಫ್‍ಐಆರ್ ಮಾಡಲಾಗಿದೆ. ದಾಖಲಾಗಿರುವ ಎಫ್‍ಐಅರ್ ನಲ್ಲಿ ಅನೇಕ ಸೆಕ್ಷನ್ ಗಳನ್ನ ಹಾಕಲಾಗಿದೆ. ಆದ್ರೆ ಆರೋಪಗಳಿಗೆ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಶ್ರೀನಿವಾಸ ಮೂರ್ತಿ ವಾದ ಮಂಡಿಸಿದ್ದರು. ಇದನ್ನೂ ಓದಿ: ರಾಗಿಣಿಗಾಗಿ ರಕ್ತ, ಪ್ರಾಣ ಕೊಡಲು ಸಿದ್ಧ – ಅಭಿಮಾನಿ ವಿಡಿಯೋ ವೈರಲ್
ಎಕ್ಸ್ ಟೆಸಿ ಮಾತ್ರೆ ಸೇವಿಸಿದ್ದಾರೆಂದು ಆರೋಪಿಸಲಾಗಿದ್ದು, ಎಫ್‍ಐಆರ್ ನಲ್ಲಿ ನಿರ್ದಿಷ್ಟ ಆರೋಪಗಳೇ ಇಲ್ಲ. ಎಕ್ಸ್ ಟೆಸಿ ಮಾತ್ರೆಯ ಪ್ರಸ್ತಾಪ ಬಿಟ್ಟರೇ ಬೇರೆ ಯಾವುದೇ ಆರೋಪಗಳಿಲ್ಲ. ಇತರೆ ಆರೋಪಿಗಳ ಹೇಳಿಕೆಯ ಮೇಲೆ ಪ್ರಕರಣ ನಿಂತಿದೆ. ಆದ್ರೆ ಸಂಜನಾ ಗಲ್ರಾನಿ ಅವರನ್ನ ಯಾಕೆ ಬಂಧಿಸಲಾಗಿದೆ ಎಂಬುವುದು ಇದುವರೆಗೂ ಗೊತ್ತಾಗಿಲ್ಲ. ಕಕ್ಷಿದಾರರಿಗೆ ಬಂಧನ ವೇಳೆ ಯಾಕೆ ಅರೆಸ್ಟ್ ಮಾಡಲಾಗ್ತಿದೆ ಅಂತ ಹೇಳಿಲ್ಲ. ಹಾಗಾಗಿ ಸಂಜನಾ ಗಲ್ರಾನಿ ಅವರ ಬಂಧನ ಕಾನೂನೂ ಬಾಹಿರವಾಗಿದ್ದು, ಇಲ್ಲಿಯವರೆಗೂ ಪೊಲೀಸರು ನ್ಯಾಯಾಲಯದ ಮುಂದೆ ಯಾವ ಸಾಕ್ಷ್ಯವನ್ನ ಹಾಜರುಪಡಿಸಿಲ್ಲ. ಇದೇ ವೇಳೆ ವಕೀಲರು ಕೆಲ ಹಳೆ ಪ್ರಕರಣಗಳ ಉದಾಹರಣೆಗಳನ್ನು ನ್ಯಾಯಾಲಯದ ಗಮನಕ್ಕೆ ತಂದು ತಮ್ಮ ಕಕ್ಷಿದಾರರಿಗೆ ಜಾಮೀನು ನೀಡಬೇಕೆಂದು ಮನವಿ ಮಾಡಿಕೊಂಡಿದ್ದರು. ಇದನ್ನೂ ಓದಿ: ನನ್ನ ಮಗಳು ಹೆಣ್ಣು ಸಿಂಹ, ನಾವು ಯಾವುದಕ್ಕೂ ಹೆದರಲ್ಲ: ರಾಗಿಣಿ ತಾಯಿ
ಜಾಮೀನು ಬೇಡ: ಇತ್ತ ಸಿಸಿಬಿ ಪರ ವಕೀಲರು, ನ್ಯಾಯಾಲಯ ಮುಂದೆ ಮುಚ್ಚಿದ ಲಕೋಟೆಯಲ್ಲಿ ಕೆಲ ಸಿಡಿಗಳನ್ನು ಸಲ್ಲಿಸಿದರು. ಪ್ರಕರಣ ತನಿಖಾ ಹಂತದಲ್ಲಿ ಇರೋದರಿಂದ ಸಿಡಿಯಲ್ಲಿನ ಮಾಹಿತಿ ಬಹಿರಂಗಪಡಿಸಲು ಸಾಧ್ಯವಿಲ್ಲ. ಆರೋಪಿ ರವಿಶಂಕರ್ ಹೇಳಿಕೆಯ ಆಧಾರದ ಮೇಲೆ ಎಫ್‍ಐಆರ್ ದಾಖಲಾಗಿದೆ. ವಿಚಾರಣೆ ವೇಳೆ ಬಯಲಿಗೆ ಬಂದ ಅಂಶಗಳ ಮೇಲೆ ತನಿಖೆ ನಡೆಯುತ್ತಿದೆ. ಡ್ರಗ್ ಸೇವನೆ ಮಾಡಿರುವುದೇ ಒಳ್ಳೆಯ ಎವಿಡೆನ್ಸ್ ಆಗುತ್ತೆ. ತನಿಖೆ ಮುಗಿಯುವ ಮುನ್ನವೇ, ಜಾಮೀನು ನೀಡುವುದು ಸರಿಯಲ್ಲ ಎಂದು ವಾದಿಸಿದ್ದರು. ಇದನ್ನೂ ಓದಿ: ಕಾಂಗ್ರೆಸ್ ಸೇರಲು ಮುಂದಾಗಿದ್ರಾ ರಾಗಿಣಿ? – ಕೆಪಿಸಿಸಿ ಚರ್ಚೆಯ ಇನ್‌ಸೈಡ್ ಸ್ಟೋರಿ
ರಾಗಿಣಿ ಪರ ವಕೀಲರ ವಾದ: ಕಕ್ಷಿದಾರರು ಸಿಸಿಬಿ ಪೊಲೀಸರ ವಿಚಾರಣೆಗೆ ಸಂಪೂರ್ಣ ಸಹಕಾರ ನೀಡಿದ್ದಾರೆ. ಕಕ್ಷಿದಾರರ ಪರ ಯಾವುದೇ ಆರೋಪಗಳಿಲ್ಲ ಮತ್ತು ಸಾಕ್ಷ್ಯ ಇಲ್ಲ. ಈ ಹಂತದಲ್ಲಿ ಕಕ್ಷಿದಾರರಿಗೆ ಜಾಮೀನು ನೀಡಬಹುದು. ಪೊಲೀಸರು ಆತುರದಲ್ಲಿ ತನಿಖೆಯ ದಿಕ್ಕು ತಲುಪಿಸು ಕೆಲಸ ಮಾಡುತ್ತಿದ್ದಾರೆ. ಪ್ರಕರಣ ಒಂದೇ ದಿಕ್ಕಿನಲ್ಲಿ ಸಾಗದೇ, ಬೇರೆ ಬೇರೆ ಆಯಾಮಗಳಲ್ಲಿ ಸಾಗಿ ನಮ್ಮ ಕಕ್ಷಿದಾರರನ್ನು ಸಿಲುಕಿಸುವ ಹುನ್ನಾರ ಮಾಡಲಾಗುತ್ತಿದೆ. ಪೊಲೀಸರು ರಾಗಿಣಿ ಆರೋಪಿ ಎಂದು ಕಲ್ಪನೆ ಮಾಡಿಕೊಂಡಿದ್ದಾರೆ. ಕಲ್ಪನೆಯಲ್ಲಿ ತನಿಖೆ ಸಾಗುತ್ತಿದೆ ಎಂದು ವಾದಿಸಿದ್ದರು. ಇದನ್ನೂ ಓದಿ: ಪರಪ್ಪನ ಅಗ್ರಹಾರ ಜೈಲಲ್ಲಿ ರಾಗಿಣಿ, ಸಂಜನಾಗೆ ರಾಜಾತಿಥ್ಯ
ರಾಗಿಣಿ ಡ್ರಗ್ಸ್ ದಂಧೆಯಲ್ಲಿ ಆ್ಯಕ್ಟೀವ್ ಮೆಂಬರ್: ರಾಗಿಣಿ ಐದು ವರ್ಷಗಳಿಂದ ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ನಡೆದ ಡ್ರಗ್ ಪಾರ್ಟಿಯಲ್ಲಿ ಭಾಗವಹಿಸುತ್ತಿದ್ದರು. ಡ್ರಗ್ಸ್ ಪೆಡ್ಲರ್ ಗಳ ಗ್ಯಾಂಗ್ ಜೊತೆಯಲ್ಲಿ ರಾಗಿಣಿ ಮೋಜು ಮಸ್ತಿ ನಡೆಸಿದ್ದಾರೆ. ಪಾರ್ಟಿಗಳಿಗೆ ಬಂದವರಿಗೆ ರಾಗಿಣಿ ಡ್ರಗ್ಸ್ ಪೂರೈಕೆ ಮಾಡುತ್ತಿದ್ದರು. ಆಂಧ್ರ ಪ್ರದೇಶ, ಗೋವಾ, ಮುಂಬೈ, ಪಂಜಾಬ್ ಮತ್ತು ವಿದೇಶಗಳಿಂದಲೂ ಡ್ರಗ್ಸ್ ತೆರೆಸಿಕೊಂಡಿದ್ದಾರೆ. ಡ್ರಗ್ಸ್ ದಂಧೆಯಲ್ಲಿ ರಾಗಿಣಿಯ ಆ?ಯಕ್ಟಿವ್ ಮೆಂಬರ್. ಎಂಡಿಎಂಎ, ಎಲ್ ಎಸ್‍ಡಿ, ಕೋಕೆನ್ ಕೊಡುತ್ತಿದ್ದರು. ಆರೋಪಿಗಳ ಜೊತೆ ನಡೆಸಿರುವ ಸಂಭಾಷಣೆಯ ಡಿಜಿಟಲ್ ಸಾಕ್ಷ್ಯವಿದೆ. ಮೂತ್ರ ಪರೀಕ್ಷೆ ವೇಳೆ ಸಾಕ್ಷ್ಯ ನಾಶಕ್ಕೆ ಮುಂದಾಗಿದ್ದರು ಎಂಬ ಅಂಶಗಳನ್ನು ಉಲ್ಲೇಖಿಸಿ ಸಿಸಿಬಿ ವಕೀಲರು ಜಾಮೀನಿಗೆ ಆಕ್ಷೇಪಣೆ ಸಲ್ಲಿಸಿದ್ದರು. ಇದನ್ನೂ ಓದಿ: ರಾಗಿಣಿ, ಸಂಜನಾಗೆ ಜೈಲಿನಲ್ಲಿಯೇ ಇಡಿ ಡ್ರಿಲ್