ಬೆಂಗಳೂರು: ಡ್ರಗ್ಸ್ ಮಾಫಿಯಾದಲ್ಲಿ ಸಿಸಿಬಿ ಪೊಲೀಸರು ಬಂಧಿಸಿರುವ ನಟಿ ಸಂಜನಾ ಅವರೊಂದಿಗೆ ನಾನು ಕೊಲಂಬೋಗೆ ಹೋಗಿದ್ದು ಸಾಬೀತಾದರೆ ನನ್ನ ಆಸ್ತಿಯೆಲ್ಲ ಸರ್ಕಾರಕ್ಕೆ ಬರೆದುಕೊಡುತ್ತೇನೆ ಎಂದು ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಸವಾಲು ಎಸೆದಿದ್ದಾರೆ.
ನಟಿ ಸಂಜನಾ ಅವರ ವಿಚಾರದಲ್ಲಿ ತಮ್ಮ ವಿರುದ್ಧ ಕೇಳಿ ಬಂದ ಆರೋಪಗಳ ಕುರಿತು ಕೊನೆಗೂ ಮೌನ ಮುರಿದ ಜಮೀರ್ ಅವರು, ಸಂಜನಾ ಹಾಗೂ ನಾನು ಕೊಲಂಬೋಗೆ ಹೋಗಿರುವ ಬಗ್ಗೆ ಖುದ್ದು ಸಿಎಂ ತನಿಖೆ ಮಾಡಲಿ ಎಂದು ಮನವಿ ಮಾಡುತ್ತೇನೆ. ನಾನು ತನಿಖೆ ಎದುರಿಸಲು ತಯಾರಿದ್ದೇನೆ. ಈಗ ಸಂಜನಾ ಪೊಲೀಸ್ ಕಸ್ಟಡಿಯಲ್ಲೇ ಇದು, ಅಲ್ಲಿಯೇ ತನಿಖೆ ಮಾಡಲು ಎಂದರು. ಇದನ್ನೂ ಓದಿ: ಸಂಜನಾ, ಜಮೀರ್ ಸಹಾಯ ಕೇಳಿದ್ದೇಕೆ?- ಡ್ರಗ್ಸ್ ಪ್ರಕರಣದಲ್ಲಿ ರಾಹುಲ್‍ಗೆ ಬಿಜೆಪಿ ಟಾಂಗ್
Advertisement
Advertisement
ನಾನು ಆಕೆ ಒಂದೇ ಹೋಟೆಲ್ ನಲ್ಲಿ ಉಳಿದುಕೊಂಡಿದ್ದರೆ ಅಲ್ಲಿ ಪಾಸ್‍ಪೋರ್ಟ್ ಕೊಡಬೇಕಾಗುತ್ತೆ. ಅದನ್ನು ಪರಿಶೀಲಿಸಲಿ. ನಾನು ಸಂಜನಾ ಕೊಲಂಬೋಗೆ ಹೋದರೆ ಒಂದೇ ವಿಮಾನದಲ್ಲಿ ತಾನೇ ಹೋಗಬೇಕು. ಆ ಕುರಿತಾದ ಫ್ಲೈಟ್ ಮಾಹಿತಿಗಳನ್ನು ಪರಿಶೀಲನೆ ನಡೆಸಲಿ. ವಿದೇಶಗಳ ಹೋಟೆಲ್‍ಗಳಲ್ಲಿ ಹೋಟೆಲ್ ಸಿಸಿ ಕ್ಯಾಮರಾ ದೃಶ್ಯಗಳನ್ನು 10 ವರ್ಷ ಇಡಬೇಕು. ಅದನ್ನೂ ಚೆಕ್ ಮಾಡಲಿ ಎಂದು ತಿಳಿಸಿದರು. ಇದನ್ನೂ ಓದಿ: ಜಮೀರ್‌ನನ್ನು ಯಾಕೆ ಬಂಧಿಸಿಲ್ಲ- ಸರ್ಕಾರಕ್ಕೆ ಪ್ರತಾಪ್ ಸಿಂಹ ಪ್ರಶ್ನೆ
Advertisement
Advertisement
ಅಲ್ಲಿರುವ ಸಿಸಿಟಿವಿ ಪರಿಶೀಲನೆ ಮಾಡಿದರೆ ನಾನು ಸಂಜನಾ ಅವರೊಂದಿಗೆ ಉಳಿದುಕೊಂಡಿದ್ದರೇ ಖಂಡಿತ ಗೊತ್ತಾಗುತ್ತೆ. ಈ ನಮ್ಮ ಸರ್ಕಾರ ಇಲ್ಲ. ಬಿಜೆಪಿ ಸರ್ಕಾರನೇ ಇರುವುದರಿಂದ ಅವರೇ ಎಲ್ಲವನ್ನೂ ಪರಿಶೀಲನೆ ಮಾಡಲಿ. ಒಂದೊಮ್ಮೆ ನನ್ನ ಮೇಲಿನ ಆರೋಪ ಸಾಬೀತು ಆದರೆ ನನ್ನ ಆಸ್ತಿಯನ್ನು ಸರ್ಕಾರಕ್ಕೆ ಬರೆದುಕೊಡುತ್ತೇನೆ. ಆದರೆ ಆರೋಪ ಸುಳ್ಳಾದರೇ ಪ್ರಶಾಂತ್ ಸಂಬರಗಿ ಏನು ಮಾಡುತ್ತೀರಾ ನೀವೇ ಹೇಳಿ ಎಂದು ಸರ್ಕಾರಕ್ಕೆ ಸವಾಲು ಹೆಸರು. ಇದನ್ನೂ ಓದಿ: ನನ್ನ ಬಗ್ಗೆ ಮಾತಾಡಿದ್ರೆ ಸುಮ್ನೆ ಇರಲ್ಲ: ಪ್ರಶಾಂತ್ ಸಂಬರಗಿಗೆ ಸಂಜನಾ ಎಚ್ಚರಿಕೆ
ಸಂಬರಗಿ ಆರೋಪಕ್ಕೆ ನಾನು ಯಾವುದೇ ಹೇಳಿಕೆ ನೀಡುವುದಿಲ್ಲ. ನಿನ್ನೆಯೇ ಚಾಮರಾಜನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಅವರ ವಿರುದ್ಧ ಮಾನನಷ್ಟ ಮೊಕದ್ದಮೆಯನ್ನು ದಾಖಲಿಸಲು ವಕೀಲರೊಂದಿಗೆ ಮಾತನಾಡಿದ್ದೇನೆ. ನನಗೆ ಆತನ ಪರಿಚಯವೂ ಇಲ್ಲ.
2019ರ ಜುಲೈ 8 ರಂದು ಶ್ರೀಲಂಕಾದ ಕೊಲಂಬೋದಲ್ಲಿ ಸಂಜನಾ ಮತ್ತು ಜಮೀರ್ ಇದ್ದರು. ನಾನು ಸುಳ್ಳು ಹೇಳುತ್ತಿಲ್ಲ. ನೀವು ಜೂಜು ಮತ್ತು ಡ್ರಗ್ಸ್ ನಲ್ಲಿ ಭಾಗಿಯಾಗದೇ ಇದ್ದರೆ ನಿಮಗೆ ಹೆದರಿಕೆ ಯಾಕೆ ಎಂದು ಪ್ರಶಾಂತ್ ಸಂಬರಗಿ ಪ್ರಶ್ನಿಸಿದ್ದರು. ಇದರ ಬೆನ್ನಲ್ಲೇ ಸಂಬರಗಿ ಆರೋಪಕ್ಕೆ ತಿರುಗೇಟು ನೀಡಿದ್ದ ನಟಿ ಸಂಜನಾ, ಶಾಸಕ ಜಮೀರ್ ಅವರೇ ಪ್ರಶಾಂತ್ ಸಂಬರಗಿ ಅವರನ್ನು ಸುಮ್ಮನೇ ಬಿಡಬೇಡಿ ಎಂದು ಕಣ್ಣೀರು ಹಾಕಿಕೊಂಡು ಮನವಿ ಮಾಡಿಕೊಂಡಿದ್ದರು. ಇದನ್ನೂ ಓದಿ: ಜಮೀರ್ ತಾನು ಏನೆಂದು ಅವರೇ ಯೋಚಿಸಬೇಕು: ಸಿ.ಟಿ.ರವಿ