– 200ಕ್ಕೂ ಹೆಚ್ಚು ಮಂದಿ ಸಾಮೂಹಿಕ ಡ್ಯಾನ್ಸ್
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಮ್ಮುಂಜೆ ಗ್ರಾಮದಲ್ಲಿ ಅದ್ಧೂರಿಯಾಗಿ ಮದುವೆ ಪಾರ್ಟಿ ಮಾಡಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಅಮ್ಮುಂಜೆ ಗ್ರಾಮದಲ್ಲಿ ಡಿಜೆ ಹಾಕಿಕೊಂಡು ಹಲವಾರು ಜನರು ಸಾಮೂಹಿಕ ಡ್ಯಾನ್ಸ್ ಮಾಡಿದ್ದಾರೆ. ಸುಮಾರು 200ಕ್ಕೂ ಹೆಚ್ಚು ಜನರು ಮೆಹಂದಿ ಪಾರ್ಟಿಯಲ್ಲಿ ಭಾಗಿಯಾಗಿದ್ದು, ಮಾಸ್ಕ್ ಕೂಡ ಹಾಕದೇ ಯುವಕರು ಕುಣಿದು ಕುಪ್ಪಳಿಸಿದ್ದಾರೆ. ಅಲ್ಲದೇ ಸಾಮಾಜಿಕ ಅಂತರ ಉಲ್ಲಂಘಿಸಿ ಯುವಕರು ಡ್ಯಾನ್ಸ್ ಮಾಡಿದ್ದಾರೆ. ಇದೀಗ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
Advertisement
Advertisement
ಕೊರೊನಾ ಸಂದರ್ಭದಲ್ಲಿ 50ಕ್ಕಿಂತ ಅಧಿಕ ಜನರು ಮದುವೆ, ಸಮಾರಂಭದಲ್ಲಿ ಭಾಗಿಯಾಗಬಾರದು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆದರೆ ಮದುವೆಯ ಮೊದಲ ಕಾರ್ಯಕ್ರಮವಾದ ಮೆಹಂದಿ ಶಾಸ್ತ್ರದಲ್ಲಿ ನೂರಾರು ಜನರು ಸೇರಿ ಪಾರ್ಟಿ ಮಾಡಿರುವುದು ವಿವಾದಕ್ಕೆ ಕಾರಣವಾಗಿದೆ. ಹೀಗಾಗಿ ಎಸ್‍ಪಿ ಅವರು ಈ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಸ್ಥಳೀಯ ಪೊಲೀಸರಿಗೆ ಸೂಚನೆ ಕೊಟ್ಟಿದ್ದಾರೆ.
Advertisement
ಜಿಲ್ಲೆಯಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇಂತಹ ಸಂದರ್ಭದಲ್ಲಿ ಈ ರೀತಿಯ ದೊಡ್ಡ ಪಾರ್ಟಿ ಬೇಕಿತ್ತಾ ಎಂದು ಸಾರ್ವಜನಿಕರು ಪ್ರಶ್ನೆ ಮಾಡುತ್ತಿದ್ದಾರೆ. ಮನೆಯಲ್ಲಿಯೇ ಈ ರೀತಿಯ ಪಾರ್ಟಿಯನ್ನು ಆಯೋಜನೆ ಮಾಡಿಕೊಂಡಿದ್ದಾರೆ. ಹೀಗಾಗಿ ಪೊಲೀಸರು ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.
Advertisement
ಈ ಬಗ್ಗೆ ಪ್ರತಿಕ್ರಿಯಿಸಿದ ದಕ್ಷಿಣ ಕನ್ನಡ ಜಿಲ್ಲೆಯ ಎಸ್‍ಪಿ ಲಕ್ಷ್ಮಿ ಪ್ರಸಾದ್, ಶನಿವಾರ ಸಂಜೆ ಈ ಎರಡು ವಿಡಿಯೋ ಲಭ್ಯವಾಗಿದೆ. ಮದುವೆ ಮನೆಯಲ್ಲಿ ನಡೆದಿದೆ. ವಿಚಾರಣೆ ಮಾಡಿದಾಗ ಕಳೆದ ವರ್ಷ ಈ ಪಾರ್ಟಿ ಮಾಡಿರುವುದು ಎಂದು ಯುವಕರು ಹೇಳುತ್ತಿದ್ದಾರೆ. ಹೀಗಾಗಿ ನಾವು ಈ ಬಗ್ಗೆ ಕೂಲಂಕಷವಾಗಿ ತನಿಖೆ ಮಾಡುತ್ತಿದ್ದೇವೆ. ಒಂದು ವೇಳೆ ಲಾಕ್‍ಡೌನ್ ಸಂದರ್ಭದಲ್ಲಿ ಈ ರೀತಿ ಪಾರ್ಟಿ ಮಾಡಿವುದು ಖಚಿತವಾದರೆ ಅವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.
ಸಂಡೇ ಲಾಕ್‍ಡೌನ್:
ಇನ್ನೂ ಜಿಲ್ಲೆಯಲ್ಲಿ ಸಂಡೇ ಲಾಕ್‍ಡೌನ್ ಹಿನ್ನೆಲೆಯಲ್ಲಿ ಎಲ್ಲರೂ ಕೂಡ ತಮ್ಮ ತಮ್ಮ ಮನೆಗಳಲ್ಲೇ ಇದ್ದಾರೆ. ಹಾಲು, ಪೇಪರ್, ಮೆಡಿಕಲ್, ವೈದ್ಯಕೀಯ ಸೇವೆಗೆ ಮಾತ್ರ ಅವಕಾಶ ನೀಡಲಾಗಿದೆ. ತರಕಾರಿ, ಮೀನು, ಮಾಂಸ ಮಾರಾಟ ಸೇರಿದಂತೆ ಉಳಿದೆಲ್ಲ ಅಂಗಡಿ ಮುಂಗಟ್ಟುಗಳನ್ನು ಮಾಡಲಾಗಿದೆ. ಜನ ರಸ್ತೆಗಿಳಿದರೆ ಕಟ್ಟು ನಿಟ್ಟಿನ ಕ್ರಮಕೈಗೊಳ್ಳುವ ಬಗ್ಗೆ ಜಿಲ್ಲಾಡಳಿತ ಎಚ್ಚರಿಕೆ ನೀಡಿತ್ತು. ವಾಹನಗಳು ಸಹ ರಸ್ತೆಗಿಳಿಯದಂತೆ ಪೋಲಿಸರು ಪ್ರಮುಖ ರಸ್ತೆಗಳಲ್ಲಿ ನಾಕಾಬಂಧಿಯನ್ನು ಹಾಕಿದ್ದಾರೆ.