ಮಂಗಳೂರು: ಸಂಡೇ ಲಾಕ್‍ಡೌನ್ ಹಿನ್ನೆಲೆಯಲ್ಲಿ ಇಂದು ದಕ್ಷಿಣ ಕನ್ನಡ ಜಿಲ್ಲೆ ಸಂಪೂರ್ಣ ಸ್ತಬ್ಧವಾಗಿದೆ. ಶನಿವಾರ ರಾತ್ರಿ 9 ಗಂಟೆಯಿಂದ ಸೋಮವಾರ ಮುಂಜಾನೆ 5 ಗಂಟೆಯವರೆಗೂ ಸಂಪೂರ್ಣ ಲಾಕ್ ಡೌನ್ ಇದ್ದು ಇಡೀ ಜಿಲ್ಲೆ ಸಂಪೂರ್ಣ ಬಂದ್ ಆಗಿದೆ.
ಆರೋಗ್ಯ ಸೇವೆ, ಹಾಲು, ಪತ್ರಿಕೆ ಹೊರತುಪಡಿಸಿ ಇನ್ನುಳಿದ ಎಲ್ಲಾ ಸೇವೆಗಳು ಸಂಪೂರ್ಣ ಬಂದ್ ಆಗಿದ್ದು, ಯಾವುದೇ ವಾಹನಗಳು ರಸ್ತೆಗಿಳಿದಿಲ್ಲ. ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಹಾಗೂ ಸಾವು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತವೂ ಕಟ್ಟು ನಿಟ್ಟಿನ ಕ್ರಮಕೈಗೊಂಡಿದೆ.
Advertisement
Advertisement
ಶನಿವಾರದ ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, 218 ಜನರಿಗೆ ಸೋಂಕು ತಗುಲಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 4,607ಕ್ಕೆ ಏರಿಕೆಯಾಗಿದೆ. ಶನಿವಾರ 140 ಜನರು ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಜಿಲ್ಲೆಯಲ್ಲಿ 115 ಜನ ಕೊರೋನಾ ಮಹಾಮಾರಿಗೆ ಬಲಿಯಾಗಿದ್ದು, ಪ್ರಸ್ತುತ 2,370 ಸಕ್ರಿಯ ಪ್ರಕರಣಗಳು ಇರೋದು ಜಿಲ್ಲಾಡಳಿತ ಹಾಗೂ ಜಿಲ್ಲೆಯ ಜನರಲ್ಲಿ ಆತಂಕ ಹೆಚ್ಚಿಸಿದೆ.
Advertisement